
ನವದೆಹಲಿ: ಬಾಲಿವುಡ್ ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮದುವೆ ಯಾವಾಗ ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ನ.19ರಂದು ಇವರಿಬ್ಬರೂ ಹಸೆಮಣೆ ಏರಲಿದ್ದಾರೆ ಎಂದು ಸಿನಿ ಪತ್ರಿಕೆ ‘ಫಿಲ್ಮ್ ಫೇರ್’ ವರದಿ ಮಾಡಿದೆ.
ಆದರೆ, ದೀಪಿಕಾ ಪಡುಕೋಣೆ ಅಥವಾ ರಣವೀರ್ ಸಿಂಗ್ ಈ ಸುದ್ದಿಯನ್ನು ಖಚಿತಪಡಿಸಿಲ್ಲ. ವಿವಾಹದ ಕುರಿತ ಸುದ್ದಿಯನ್ನು ತಾವೇ ಮೊದಲು ಬಹಿರಂಗಪಡಿಸುವುದಾಗಿ ರಣವೀರ್‌ಸಿಂಗ್ ಸ್ಪಷ್ಟನೆ ನೀಡಿದ್ದಾರೆ.
ಈ ಹಿಂದೆ ದೀಪಿಕಾ ಪಡುಕೋಣೆಯ ಬಗ್ಗೆ ರಣವೀರ್ ಸಿಂಗ್ ಬಹಿರಂಗವಾಗಿ ಪ್ರೀತಿ ವ್ಯಕ್ತಪಡಿಸಿದ್ದರು. ಇಬ್ಬರೂ ಸ್ವಿಜರ್ಲೆಂಡ್‌ನಲ್ಲಿ ಮದುವೆ ಆಗಲಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.