
‘ಪೈಲ್ವಾನ್’ ರಿಲೀಸ್ ಆಗಿದ್ದೇ ಆಗಿದ್ದು ಒಂದಲ್ಲಾ ಒಂದು ರೀತಿಯಲ್ಲಿ ಸುದೀಪ್ ಸುದ್ದಿಯಲ್ಲಿದ್ದಾರೆ. ಡಿಸೆಂಬರ್ 20,2018 ರಲ್ಲಿ 'ಬಿಲ್ಲ ರಂಗ ಭಾಷಾ' ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಇದರ ಬಗ್ಗೆ ಯಾವುದೇ ವಿಚಾರ ಹೊರಬಿದ್ದಿಲ್ಲ.
ಅನೂಪ್ ಭಂಡಾರಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರವನ್ನು ಸುದೀಪ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಅದರೆ ಯಾವುದೇ ಮಾಹಿತಿ ಇಲ್ಲದ ಕಾರಣ ಕೊಂಚ ಬೇಸರ ವ್ಯಕ್ತಪಡಿಸಿದ್ದರು. ಇದನ್ನು ಗಮನಿಸಿದ ಅನೂಪ್ ತಮ್ಮ ಟ್ಟಿಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಸೌತ್ ಆಫ್ರಿಕಾ ತಂಡದ ಜೊತೆ ಕಿಚ್ಚನ ಪ್ರಯಾಣ; ಸರ್ಪ್ರೈಸ್ ನೀಡಿದ ಪೈಲ್ವಾನ!
'ಸುದೀಪ್ ಸರ್ ಹಾಗೂ ನಾನು ಬಿಲ್ಲ ರಂಗ ಭಾಷಾ ಚಿತ್ರಕ್ಕೂ ಮುನ್ನ ಶಾಲಿನಿ ಆರ್ಟ್ಸ್ ನಿರ್ಮಾಣದಲ್ಲಿ ಮತ್ತೊಂದು ಅದ್ಧೂರಿ ಚಿತ್ರವನ್ನು ಕೈಗೆತ್ತಿಕೊಳ್ಳುತ್ತಿದ್ದೇವೆ. ಈ ಚಿತ್ರದ ಶೀರ್ಷಿಕೆ, ತಾರಾಗಣ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹ ಸದಾ ಇರಲಿ' ಎಂದು ಟ್ಟೀಟ್ ಮಾಡಿದ್ದಾರೆ.
ಸದ್ಯ ಸುದೀಪ್ ಕೋಟಿಗೊಬ್ಬ-3 ಶೂಟಿಂಗ್‌ನಲ್ಲಿ ಬ್ಯುಸಿ ಇದ್ದಾರೆ. ಅನೂಪ್ ಕೆಲ ದಿನಗಳ ಹಿಂದೆ ತೆಲುಗು ನಟ ಅಲ್ಲು ಅರ್ಜುನ್ ಭೇಟಿ ಆಗಿರುವ ವಿಚಾರವನ್ನು ಫೋಟೋ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಅವರ ಮುಂದಿನ ಸಿನಿಮಾಗಳ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.