
ಮಂಡ್ಯ (ಸೆ. 21): ರೆಬಲ್ ಸ್ಟಾರ್ ಅಭಿನಯದ ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರ ಬಿಡುಗಡೆಯಾಗಿದೆ. ಅಭಿಮಾನಿಗಳ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.
ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರ ರಾಜ್ಯಾದ್ಯಂತ ಇಂದು ಬಿಡುಗಡೆ
ಹಲವು ವರ್ಷಗಳ ನಂತರ ಪರಿಪೂರ್ಣ ನಾಯಕ ನಟನಾಗಿ ಅಂಬರೀಶ್ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಅಂಬರೀಶ್ ಚಿತ್ರ ನೋಡಲು ಚಿತ್ರ ಮಂದಿರದತ್ತ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ.
ಮಂಡ್ಯ ನಗರದ ಸಿಲ್ವರ್ ಜೂಬಿಲಿ ಪಾರ್ಕ್ ನಿಂದ ಸಿದ್ದಾರ್ಥ ಚಿತ್ರ ಮಂದಿರವರೆಗೆ ಅಭಿಮಾನಿಗಳು ಮೆರವಣಿಗೆ ಬಂದಿದ್ದಾರೆ. ವಿವಿಧ ಕಲಾತಂಡ, ನೂರಾರು ಆಟೋಗಳು ಮೆರವಣಿಗೆಯಲ್ಲಿ ಭಾಗಿಯಾಗಿವೆ. ಅಂಬಿ ಭಾವಚಿತ್ರ ಹಿಡಿದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಅಂಬಿ ಕಟೌಟ್ ಗೆ ಅಭಿಮಾನಿಗಳು ಕ್ಷೀರಾಭಿಷೇಕ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.