
ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸಿಗುವ ಮೂಲಕ, ಕನ್ನಡಿಗರಿಗೆ ಮೂರನೆಯ ಬಾರಿ ಈ ಪ್ರಶಸ್ತಿ ಸಿಕ್ಕಂತಾಗಿದೆ. 1995ರಲ್ಲಿ ಈ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ಹಾಗೂ ಮೊದಲ ಕನ್ನಡ ನಟ. ಪ್ರಸಿದ್ಧ ಛಾಯಾಗ್ರಾಹಕ ವಿ.ಕೆ. ಮೂರ್ತಿ (V. K. Murthy) 2008ನೇ ಸಾಲಿನಲ್ಲಿ ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವೆಂದೇ ಪರಿಗಣಿಸಲಾಗುವ ಈ ಪ್ರಶಸ್ತಿಯನ್ನು ಅನಂತ್ ನಾಗ್ ಅವರು ಇದೇ 22ರಂದು ಗುಜರಾತ್‌ನ ಏಕ್ತಾ ನಗರದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಧಿಕೃತವಾಗಿ ಸ್ವೀಕರಿಸಲಿದ್ದಾರೆ. ಅಂದಹಾಗೆ ಫಾಲ್ಕೆ ಪ್ರಶಸ್ತಿ ಪುರಸ್ಕೃತರಿಗೆ 15 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಇಲ್ಲಿಯವರೆಗೆ 10 ಲಕ್ಷ ರೂ. ಬಹುಮಾನವಿತ್ತು. ಅದನ್ನು 15 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಕುತೂಹಲದ ಸಂಗತಿಯೆಂದರೆ ಇದಕ್ಕೆ ತೆರಿಗೆ ಇಲ್ಲ.ಸಂಪೂರ್ಣ ಮೊತ್ತ ಪುರಸ್ಕೃತರ ಕೈ ಸೇರಲಿದೆ.
ಪ್ರಶಸ್ತಿ ಪುರಸ್ಕೃತರಿಗೆ ಸ್ವರ್ಣ ಕಮಲವನ್ನು ನೀಡಲಾಗುತ್ತದೆ. ಸಮಾರಂಭದಲ್ಲಿ ಸಾಂಪ್ರದಾಯಿಕ ಶಾಲು, ಪ್ರಮಾಣಪತ್ರ ನೀಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರಿಗೆ ಜೀವಿತಾವಧಿಯ ಕೊಡುಗೆಯನ್ನು ಗುರುತಿಸುವ ಔಪಚಾರಿಕ ಉಲ್ಲೇಖ ಅಥವಾ ರೇಷ್ಮೆ ರೋಲ್ ನೀಡಲಾಗುತ್ತದೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಭಾರತೀಯ ಚಿತ್ರರಂಗ ಕ್ಷೇತ್ರದಲ್ಲಿ ನೀಡಲಾಗುವ ಅತ್ಯುನ್ನತ ಅಧಿಕೃತ ಗೌರವವಾಗಿದೆ. ಭಾರತೀಯ ಚಿತ್ರರಂಗದ ‘ಪಿತಾಮಹ’ ಎಂದೇ ಜನಪ್ರಿಯರಾಗಿರುವ ಧುಂಡಿರಾಜ್ ಗೋವಿಂದ್ ಫಾಲ್ಕೆ (ದಾದಾಸಾಹೇಬ್ ಫಾಲ್ಕೆ) ಅವರ ಸ್ಮರಣಾರ್ಥ 1969ರಲ್ಲಿ ಈ ಪ್ರಶಸ್ತಿಯನ್ನು ಸ್ಥಾಪಿಸಲಾಯಿತು. 1913ರಲ್ಲಿ ಭಾರತದ ಮೊದಲ ಪೂರ್ಣಪ್ರಮಾಣದ ಚಲನಚಿತ್ರ ‘ರಾಜಾ ಹರಿಶ್ಚಂದ್ರ’ ನಿರ್ದೇಶಿಸಿದ ಕೀರ್ತಿ ಫಾಲ್ಕೆ ಅವರಿಗೆ ಸಲ್ಲುತ್ತದೆ. ಭಾರತೀಯ ಚಿತ್ರರಂಗದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅವರು ನೀಡಿದ ಜೀವಮಾನ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಗಮನಿಸಬೇಕಾದ ಅಂಶವೆಂದರೆ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದ ವರ್ಷಕ್ಕಿಂತ ಎರಡು ವರ್ಷಗಳ ವಿಳಂಬದೊಂದಿಗೆ ನೀಡಲಾಗುತ್ತದೆ. 2023ನೇ ಸಾಲಿನ ಪ್ರಶಸ್ತಿಯನ್ನು 2025ರಲ್ಲಿ ಹಾಗೂ 2022ನೇ ಸಾಲಿನ ಪ್ರಶಸ್ತಿಯನ್ನು 2024ರಲ್ಲಿ ಪ್ರದಾನ ಮಾಡಲಾಗಿತ್ತು.
300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಅನಂತ್ ಅವರಿಗೆ ಸೆಪ್ಟೆಂಬರ್ 22ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಐದು ದಶಕಗಳಿಗೂ ಹೆಚ್ಚು ಕಾಲ ತಮ್ಮ ಸಹಜ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿರುವ ಅವರಿಗೆ ಸಂದ ಸೂಕ್ತ ಗೌರವ ಇದಾಗಿದೆ. ಗುಜರಾತ್‌ನ ಏಕ್ತಾ ನಗರದ (ಕೆವಾಡಿಯಾ) ಸ್ಟ್ಯಾಚು ಆಫ್ ಯೂನಿಟಿ ಆವರಣದಲ್ಲಿ ನಡೆಯಲಿದೆ. 72 ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭವು ದೆಹಲಿಯಿಂದ ಹೊರಗೆ, ಗುಜರಾತ್‌ನಲ್ಲಿ ಆಯೋಜನೆಗೊಳ್ಳುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಕನ್ನಡ ಚಿತ್ರರಂಗದ ಈ ಮೂವರು ದಿಗ್ಗಜರ ಸಾಧನೆ ಮತ್ತು ಕೊಡುಗೆಗಳು ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಸದಾ ಚಿರಸ್ಥಾಯಿಯಾಗಿರಲಿವೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.