
ಬೆಂಗಳೂರು : ಖ್ಯಾತ ನಟ ಯಶ್ ಅವರ ಯಶೋಮಾರ್ಗ ಸಂಸ್ಥೆಯ ಹೆಸರು ಹೇಳಿಕೊಂಡು ಕೊಡಗು ಮಹಾಮಳೆಯ ಸಂತ್ರಸ್ತರಿಗಾಗಿ ಕೆಲವರು ಅಕ್ರಮವಾಗಿ ದೇಣಿಗೆ ಸಂಗ್ರಹಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.
ಈ ಕುರಿತು ಸ್ವತಃ ಯಶ್ ಅವರು ಜನರಿಗೆ ಮಾಹಿತಿ ನೀಡಿದ್ದು, ಯಶೋಮಾರ್ಗದ ಹೆಸರು ಹೇಳಿಕೊಂಡು ಬರುವವರಿಗೆ ದೇಣಿಗೆ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.
‘ನೆರೆ ಸಂತ್ರಸ್ತರಿಗಾಗಿ ನಾನು ದೇಣಿಗೆ ಸಂಗ್ರಹಿಸುತ್ತಿಲ್ಲ. ಯಶೋಮಾರ್ಗ ಸಂಸ್ಥೆ ಮೂಲಕ ನನ್ನ ಸ್ವಂತ ಸಂಪಾದನೆಯ ಹಣದಲ್ಲಿ ಕೈಲಾದಷ್ಟುಸೇವಾಕಾರ್ಯ ಮಾಡುತ್ತಾ ಬಂದಿದ್ದೇನೆ.
ಇದಕ್ಕಾಗಿ ಯಾರಿಂದಲೂ ದೇಣಿಗೆಯನ್ನು ಸ್ವೀಕರಿಸುತ್ತಿಲ್ಲ. ಆದರೆ, ಕೊಡಗಿನಲ್ಲಿ ಮಹಾಮಳೆಯಿಂದ ನಿರಾಶ್ರಿತರಾದವರಿಗೆ ನೆರವಾಗುವ ನೆಪದಲ್ಲಿ ಅನೇಕರು ಯಶೋಮಾರ್ಗ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಯಾರೂ ಅವರಿಗೆ ದೇಣಿಗೆ ನೀಡಬೇಡಿ’ ಎಂದು ಯಶ್ ವಿನಂತಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.