ಇರ್ಫಾನ್ ಖಾನ್ ಗೆ ಐಫಾ ಬೆಸ್ಟ್ ಆ್ಯಕ್ಟರ್ ಪ್ರಶಸ್ತಿ!

Published : Jun 27, 2018, 08:34 PM IST
ಇರ್ಫಾನ್ ಖಾನ್ ಗೆ  ಐಫಾ ಬೆಸ್ಟ್ ಆ್ಯಕ್ಟರ್ ಪ್ರಶಸ್ತಿ!

ಸಾರಾಂಶ

ಇರ್ಫಾನ್ ಖಾನ್ ಗೆ ಅತ್ಯುತ್ತಮ ನಟ ಪ್ರಶಸ್ತಿ ಪ್ರಶಸ್ತಿ ಪ್ರಕಟಿಸಿದ ಐಫಾ-2018 ಅಭಿಮಾನಿಗಳಿಗೆ ದಣ್ಯವಾದ ಸಲ್ಲಿಸಿದ ಇರ್ಫಾನ್

ಲಂಡನ್(ಜೂ.27): ಬಾಲಿವುಡ್ ನಟ ಇರ್ಫಾನ್ ಖಾನ್ ಕ್ಯಾನ್ಸರ್ ಚಿಕಿತ್ಸೆಗಾಗಿ ಲಂಡನ್ ನಲ್ಲಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಈ ಮಧ್ಯೆ ಇರ್ಫಾನ್ ಖಾನ್ ಅವರಿಗೆ ಪ್ರಸಕ್ತ ಐಫಾ-೨೦೧೮ ಅವಾರ್ಡ್ಸ ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.

'ಹಿಂದಿ ಮಿಡಿಯಂ' ಚಿತ್ರದಲ್ಲಿನ ಮನೋಜ್ಞ ಅಭಿನಯಕ್ಕಾಗಿ ಇರ್ಫಾನ್ ಖಾನ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಇರ್ಫಾನ್, ಐಫಾ ಮತ್ತು ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಟ್ವಿಟರ್ ನಲ್ಲಿ ಸಂತಸ ಹಂಚಿಕೊಂಡಿರುವ ಇರ್ಪಾನ್, ಜೀವನದ ಪಯಣದಲ್ಲಿ ಸದಾ ಜೊತೆಗಿರುವ ತಮ್ಮ ಅಭಿಮಾನಿಗಳಿಗೆ ಈ ಪ್ರಶಸ್ತಿ ಸಮರ್ಪಿಸುತ್ತಿರುವುದಾಗಿ ತಿಳಿಸಿದ್ದಾರೆ. ಸಾಕೇತ್ ಚೌಧರಿ ನಿರ್ದೇಶನದ 'ಹಿಂದಿ ಮಿಡಿಯಂ' ಚಿತ್ರದಲ್ಲಿ ಪಾಕಿಸ್ತಾನದ ನಟಿ ಸಾಬಾ ಕಮರ್, ಇರ್ಫಾನ್ ಖಾನ್, ದೀಪಕ್ ದೋಬ್ರಿಯಾಲ್ ಮತ್ತಿತರರು ನಟಿಸಿದ್ದರು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನಾವು ಊಟಕ್ಕಾಗೇ ಮದುವೆಗೆ ಹೋಗ್ತೇವೆ, ಕರಣ್ ಜೋಹರ್ ಮದುವೆಗೆ ಹೋದ್ರೂ ಊಟ ಮಾಡಲ್ಲ, ಕಾರಣ ?!
ಸೊಂಟಕ್ಕೆ ಸನ್‌ಗ್ಲಾಸ್‌ ಸಿಕ್ಕಿಸಿಕೊಂಡು ನಟಿಯ ಪೋಸ್‌.. ಟ್ರೋಲಿಗರ ಕಾಮೆಂಟ್ಸ್‌ಗೆ ಕಂಗಾಲಾದ ಸೀರಿಯಲ್‌ ತಾರೆ!