’ಜೊತೆ ಜೊತೆಯಲಿ’ ನೋಡಲು ರೆಡಿಯಾಗಿ!

Published : Sep 09, 2019, 11:21 AM ISTUpdated : Sep 09, 2019, 11:23 AM IST
’ಜೊತೆ ಜೊತೆಯಲಿ’ ನೋಡಲು ರೆಡಿಯಾಗಿ!

ಸಾರಾಂಶ

ಈ ಹಿಂದೆ ಝೀ ಕನ್ನಡದಲ್ಲಿ ಪ್ರಸಿದ್ಧವಾಗಿದ್ದ ‘ಜೊತೆ ಜೊತೆಯಲಿ’ ಸೀರಿಯಲ್ ಹೊಸ ಕತೆಯೊಂದಿಗೆ ತೆರೆಗೆ ಬದಲು ಸಿದ್ಧವಾಗಿದೆ. ಈ ಧಾರಾವಾಹಿಯ ಮೂಲಕ ಸಾಹಸ ಸಿಂಹ ವಿಷ್ಣುವರ್ಧನ ಅವರ ಅಳಿಯ ಅನಿರುದ್ಧ್ ನಾಯಕನಾಗಿ ಕಿರುತೆರೆ ಪ್ರವೇಶಿಸಿದ್ದಾರೆ.

ಈ ಹಿಂದೆ ಝೀ ಕನ್ನಡದಲ್ಲಿ ಪ್ರಸಿದ್ಧವಾಗಿದ್ದ ‘ಜೊತೆ ಜೊತೆಯಲಿ’ ಸೀರಿಯಲ್ ಹೊಸ ಕತೆಯೊಂದಿಗೆ ತೆರೆಗೆ ಬದಲು ಸಿದ್ಧವಾಗಿದೆ. ಇಂದಿನಿಂದ ರಾತ್ರಿ 8.30  ಕ್ಕೆ ಝೀ ಕನ್ನಡದಲ್ಲಿ ಈ ಸೀರಿಯಲ್ ನೋಡಬಹುದು.

ಈ ಧಾರಾವಾಹಿಯ ಮೂಲಕ ಸಾಹಸ ಸಿಂಹ ವಿಷ್ಣುವರ್ಧನ ಅವರ ಅಳಿಯ ಅನಿರುದ್ಧ್ ನಾಯಕನಾಗಿ ಕಿರುತೆರೆ ಪ್ರವೇಶಿಸಿದ್ದಾರೆ. ಆರ್ಯವರ್ಧನ್ ಎಂಬ ಉದ್ಯಮಿಯ ಪಾತ್ರಲ್ಲಿ ಕಾಣಿಸಿಕೊಂಡಿದ್ದಾರೆ. ಮೇಘನಾ ಶೆಟ್ಟಿ ನಾಯಕಿ. ಪ್ರತೀ ಸೋಮವಾರದಿಂದ ಶುಕ್ರವಾರದವರೆಗೆ ‘ಜೊತೆ ಜೊತೆಯಲಿ’ ಪ್ರಸಾರವಾಗಲಿದೆ.

 

45 ವರ್ಷದ ಅನಿರುದ್ಧ್‌ಗೆ ಒಲಿಯಲಿದ್ದಾಳಾ 20ರ ಹುಡುಗಿ?

ಮದ್ವೆಯಾಗೋ ಹುಡುಗ ಹುಡುಗಿ ನಡುವೆ ವಯಸ್ಸಿನ ಅಂತರ ಹೆಚ್ಚಿದ್ದರೆ ಏನೆಲ್ಲ ಸನ್ನಿವೇಶ ಎದುರಾಗಬಹುದು ಅನ್ನುವ ಕತೆ ಹಿಂದಿನ ‘ಜೊತೆ ಜೊತೆಯಲಿ’ ಸೀರಿಯಲ್‌ಗಿತ್ತು. ಈ ಬಾರಿಯೂ 45 ವರ್ಷದ ಉದ್ಯಮಿ ಹಾಗೂ 20 ವರ್ಷದ ಮಧ್ಯಮವರ್ಗದ ಯುವತಿ ನಡುವೆ ನಡೆಯುವ ಪ್ರೇಮದ ಚಿತ್ರಣವಿದೆ. 

ಶುಭ ವಿವಾಹ, ಜೋಡಿಹಕ್ಕಿಯಂತಹ ಯಶಸ್ವಿ ಧಾರವಾಹಿಗಳನ್ನು ನಿರ್ದೇಶಿಸಿದ್ದ ಆರೂರು ಜಗದೀಶ್ ಈ ಸೀರಿಯಲ್ ಸಾರಥ್ಯ ವಹಿಸಿಕೊಂಡಿದ್ದಾರೆ. ಝೀ ಕನ್ನಡ ತಂಡದ ಕಥೆಯಿದ್ದು, ಸುಧೀಂದ್ರ ಭಾರದ್ವಾಜ್, ಪವನ್ ಶ್ರೀವತ್ಸ ಚಿತ್ರಕಥೆ, ಸತ್ಯ ಕೆ ಸಂಭಾಷಣೆ ರಚಿಸಿದ್ದಾರೆ. ‘ಈಗಾಗಲೇ ತನ್ನ ಪ್ರೋಮೋ ಮೂಲಕವೇ ವೀಕ್ಷಕರಲ್ಲಿ ಕುತೂಹಲವನ್ನು ಈ ಧಾರಾವಾಹಿ ಕ್ರಿಯೇಟ್ ಮಾಡಿದ್ದು, ನಿರೀಕ್ಷೆಗಿಂತ
ಹೆಚ್ಚಿನದನ್ನು ಪ್ರಯತ್ನಿಸಿದ್ದೇವೆ’ ಎಂದು ನಿರ್ದೇಶಕ ಆರೂರು ಜಗದೀಶ್ ಹೇಳಿದ್ದಾರೆ.

‘ಕಿರುತೆರೆಯಲ್ಲಿ ಜೊತೆ ಜೊತೆಯಲಿ ಒಂದು ಹೊಸ ಟ್ರೆಂಡ್ ಹುಟ್ಟುಹಾಕಲಿದೆ ಎಂದು ಝೀ ಕನ್ನಡದ ಬಿಜಿನೆಸ್ ಹೆಡ್ ರಾಘವೇಂದ್ರ ಹುಣಸೂರು ತಿಳಿಸಿದ್ದಾರೆ. ಅಪೂರ್ವ, ಶಿವಾಜಿರಾವ್, ಜಾದವ್, ಸುಂದರಶ್ರೀ, ಮಾನಸ ಮನೋಹರ್, ಮುರಳಿ, ಶ್ರೀದೇವಿ ಮೊದಲಾದ ಕಲಾವಿದರಿದ್ದಾರೆ. ಸಂತೋಷ್ ಖಾರ್ವಿ ಛಾಯಾಗ್ರಹಣ ಈ ಧಾರವಾಹಿಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನಾನೀಗ ಮನೆಯನ್ನು ಕಂಟ್ರೋಲ್‌ ಮಾಡಲಾಗ್ತಿಲ್ಲ, ವಿಲನ್‌ ಬಂದ್ರು ಎಂದು ನಡುಗಿದ Bigg Boss
ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!