
ಗ್ಲೋಬಲ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಅಭಿಮಾನಿಗಳಿಗೆ ಒಂದು ಬೇಸರದ ಸುದ್ದಿ. ಕೆಲವು ದಿನಗಳ ಹಿಂದೆ ಸಿನಿಮಾ ಚಿತ್ರೀಕರಣದ ವೇಳೆ ಗಾಯಗೊಂಡಿದ್ದ ತಾರಕ್, ಈಗ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಈ ಕುರಿತು ಎನ್‌ಟಿಆರ್ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿದೆ.
ಕೆಲವು ದಿನಗಳ ಹಿಂದೆ ಸಿನಿಮಾ ಶೂಟಿಂಗ್ ನಡೆಯುತ್ತಿದ್ದಾಗ ಜೂನಿಯರ್ ಎನ್‌ಟಿಆರ್ ಅವರ ಭುಜಕ್ಕೆ (Shoulder Injury) ಬಲವಾದ ಗಾಯವಾಗಿತ್ತು. ಆರಂಭದಲ್ಲಿ ವಿಶ್ರಾಂತಿ ಪಡೆದರೆ ಗುಣವಾಗಬಹುದು ಎಂದು ಭಾವಿಸಲಾಗಿತ್ತು. ಆದರೆ ನೋವು ಕಡಿಮೆಯಾಗದ ಕಾರಣ ಮತ್ತು ಗಾಯದ ತೀವ್ರತೆ ಹೆಚ್ಚಿದ್ದರಿಂದ, ಭವಿಷ್ಯದಲ್ಲಿ ಯಾವುದೇ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸೂಚಿಸಿದ್ದಾರೆ.
ಲಬ್ಯವಿರುವ ಮಾಹಿತಿಯ ಪ್ರಕಾರ ಹೈದರಾಬಾದ್‌ನ ಖ್ಯಾತ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ಬುಧವಾರ (ಆಗಸ್ಟ್ 12) ಎನ್‌ಟಿಆರ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಸರ್ಜರಿ ನಂತರ ಅವರ ಆರೋಗ್ಯದ ಬಗ್ಗೆ ಕಾಲಕಾಲಕ್ಕೆ ಅಪ್‌ಡೇಟ್ ನೀಡುವುದಾಗಿ ಅವರ ತಂಡ ತಿಳಿಸಿದೆ. ಈ ಸುದ್ದಿ ತಿಳಿದ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ 'Get Well Soon NTR' ಎಂದು ಪೋಸ್ಟ್ ಮಾಡುವ ಮೂಲಕ ತಮ್ಮ ನೆಚ್ಚಿನ ನಟ ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ.
ಸದ್ಯ ಜೂನಿಯರ್ ಎನ್‌ಟಿಆರ್ ಅವರು 'ಕೆಜಿಎಫ್' ಮತ್ತು 'ಸಲಾರ್' ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಅವರ ನಿರ್ದೇಶನದ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ (ತಾತ್ಕಾಲಿಕವಾಗಿ 'ಡ್ರ್ಯಾಗನ್' ಅಥವಾ NTR31 ಎಂದು ಕರೆಯಲಾಗುತ್ತಿದೆ). ಈ ಸಿನಿಮಾದಲ್ಲಿ ಕನ್ನಡದ ನಟಿ, 'ಸಪ್ತ ಸಾಗರದಾಚೆ ಎಲ್ಲೋ' ಖ್ಯಾತಿಯ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸುತ್ತಿದ್ದಾರೆ ಎಂಬ ಸುದ್ದಿಯಿದೆ. ಇದರ ಜೊತೆಗೆ ರಶ್ಮಿಕಾ ಮಂದಣ್ಣ ಕೂಡ ಚಿತ್ರತಂಡ ಸೇರಿಕೊಳ್ಳುವ ಸಾಧ್ಯತೆಯಿದೆ.
ಈ ಬಹುನಿರೀಕ್ಷಿತ ಸಿನಿಮಾದ ಶೂಟಿಂಗ್ ವೇಳೆ ಎನ್‌ಟಿಆರ್ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ನಟ ಕೆಲವು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯಬೇಕಾಗಿದ್ದು, ಆ ಬಳಿಕವಷ್ಟೇ ಚಿತ್ರೀಕರಣಕ್ಕೆ ಮರಳಲಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.