
ಬೆಂಗಳೂರು (ಸೆ.02) ಕಿಚ್ಚ ಸುದೀಪ್ ಹುಟ್ಟು ಹಬ್ಬದ ದಿನ ಅಭಿಮಾನಿಗಳಿಗೆ ಹಲವು ಸರ್ಪ್ರೈಸ್ ಬರುತ್ತಲೇ ಇದೆ. ದೇವರಾಯ, ಬಿಲ್ಲ ರಂಗ ಬಾಷಾ ಸಿನಿಮಾ ಟೀಸರ್ ಬೆನ್ನಲ್ಲೇ ಇದೀಗ ನಿರ್ದೇಶಕ ಜೋಗಿ ಪ್ರೇಮ್ ನಿರ್ದೇಶನ ಸಿನಿಮಾದ ಮಹತ್ವದ ಅಪ್‌ಡೇಟ್ ಹೊರಬಿದ್ದಿದೆ. ಪ್ರೇಮ್ ಹಾಗೂ ಕಿಚ್ಚ ಸುದೀಪ್ ಜೋಡಿ ಮತ್ತೆ ಒಂದಾಗಿ ಸಿನಿ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಲು ಸಜ್ಜಾಗಿದ್ದಾರೆ. ಪ್ರೇಮ್ 10 ಸಿನಿಮಾ ಇದಾಗಿದ್ದು, ಅಭಿನಯ ಚಕ್ರವರ್ತಿ ಕಿಚ್ಚು ಸುದೀಪ್ ನಾಯಕನಾಗಿದ್ದಾರೆ.
ದಿ ವಿಲನ್ ಸಿನಿಮಾ ಮೂಲಕ ಜೋಗಿ ಪ್ರೇಮ್ ಹಾಗೂ ಕಿಚ್ಚ ಸುದೀಪ್ ಜೋಡಿ ಹೊಸ ಅಲೆ ಸೃಷ್ಟಿಸಿತ್ತು. ಇದೀಗ ಮತ್ತೆ ಒಂದಾಗುತ್ತಿದೆ. ದಿ ವಿಲನ್ ಸಿನಿಮಾ ಮೊದಲ ವಾರ 32 ಕೋಟಿ ರೂಪಾಯಿ ಬಾಚಿಕೊಳ್ಳುವ ಮೂಲಕ ಹೊಸ ದಾಖಲೆ ಬರೆದಿತ್ತು. ದಿ ವಿಲನ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಈ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಧ್ಯಾಯ ಆರಂಭಗೊಂಡಿತ್ತು. ಇದೀಗ ದಿ ವಿಲನ್ ಜೋಡಿ ಮತ್ತೆ ಹೊಸ ಸಿನಿಮಾ ಮೂಲಕ ಬರಲು ಸಜ್ಜಾಗಿದ್ದಾರೆ.
ಹೊಸ ಸಿನಿಮಾಗೆ ಟೈಟಲ್ ಫೈನಲ್ ಆಗಿಲ್ಲ. ಜೆನ್‌ಝಿ, ಈಗಿನ ಜನರೇಶನ್ ಕತೆಯನ್ನೇ ಹಿಡಿದು ರಸವತ್ತಾಗಿ ನೀಡಲು ಪ್ರೇಮ್ ಮುಂದಾಗಿದ್ದಾರೆ. ಸಿನಿಮಾ ಅಪ್‌ಡೇಟ್ ಕುರಿತು ಪೋಸ್ಟರ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಇದೀಗ ಸುದೀಪ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ. ಹೀಗಾಗಿ ಇಂದು ಅಭಿಮಾನಿಗಳ ಜೊತೆ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಸಾಧ್ಯವಾಗಿಲ್ಲ.
ಕಿಚ್ಚ ಸುದೀಪ್ ಜೋಗಿ ಪ್ರೇಮ್ ಸಿನಿಮಾಗೆ ಅಕ್ಟೋಬರ್ 20ಕ್ಕೆ ಮುಹೂರ್ತ ನಡೆಯಲಿದೆ. ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾದ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ. ಟೀಸರ್‌ನಲ್ಲಿ ಕಿಚ್ಚ ಸುದೀಪ್ ಅವರ ಕ್ಲಾಸಿ ಲುಕ್ ಮತ್ತು ಸಿನಿಮಾದ ಸಂಗೀತದ ಸೆಳೆತ ಕುತೂಹಲ ಹುಟ್ಟಿಸಿದೆ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.