ಈ ತಿಂಗಳ ಕೊನೆಗೆ ಕನ್ನಡಿಗರರಿಗೆ 'ತಿಮ್ಮನ ಮೊಟ್ಟೆಗಳು' ಸಿಗಲಿವೆ; ನಿಮಗೆಷ್ಟು ಬೇಕು ಹೇಳಿ..!

Published : Jun 09, 2025, 03:42 PM IST
Thimmana Mottegalu Movie

ಸಾರಾಂಶ

ಅಮೇರಿಕಾದ ಡಾಲಸ್ ನಲ್ಲಿ ಪ್ರಿಮೀಯರ್ ಶೋ ಮಾಡಿಕೊಂಡಿದ್ದ ಚಿತ್ರತಂಡಕ್ಕೆ ಉತ್ತಮ ಅಭಿಪ್ರಾಯಗಳು ದೊರಕಿತ್ತು. ಕಾಳಿಂಗ ಸರ್ಪ ಹಾವು ಚಿತ್ರದ ಕಥಾವಸ್ತುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಮಾನವ ಸಂಬಂಧ ಮತ್ತು ಪ್ರಾಣಿಸಂಬಂಧದ ಸಣ್ಣ ಎಳೆಯ ಭಾವುಕತೆ ಎಲ್ಲರ ಗಮನ ಸೆಳೆದು

ರಕ್ಷಿತ್ ತೀರ್ಥಹಳ್ಳಿಯವರ (Rakshith Thirthahalli) ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ “ತಿಮ್ಮನ ಮೊಟ್ಟೆಗಳು” ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು ಇದೇ ಜೂನ 27 ಕ್ಕೆ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ. ವಾಸುಕಿ ವೈಭವ್ ಹಾಡಿರುವ “ಕಾಡು ದಾರಿ” ಎಂಬ ಹಾಡಿನ ಲಿರಿಕಲ್ ವಿಡಿಯೋ ಅನಾವರಣ ಮಾಡುವುದರೊಂದಿಗೆ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಶ್ರೀಕೃಷ್ಣ ಪ್ರೊಡಕ್ಸನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ನಿರ್ಮಾಣಕ್ಕೆ ಆದರ್ಶ್ ಅಯ್ಯಂಗಾರ್ ಬಂಡವಾಳ ಹೂಡಿದ್ದಾರೆ. ರಕ್ಷಿತ್ ತೀರ್ಥಹಳ್ಳಿಯವರೇ ಬರೆದ “ಕಾಡಿನ ನೆಂಟರು” ಕಥಾ ಸಂಕಲನದಿಂದ ಆಯ್ದ ಒಂದು ಕಥೆ ತಿಮ್ಮನ ಮೊಟ್ಟೆಗಳು ಸಿನಿಮಾವಾಗಿದೆ.

ಅಮೇರಿಕಾದ ಡಾಲಸ್ ನಲ್ಲಿ ಪ್ರಿಮೀಯರ್ ಶೋ ಮಾಡಿಕೊಂಡಿದ್ದ ಚಿತ್ರತಂಡಕ್ಕೆ ಉತ್ತಮ ಅಭಿಪ್ರಾಯಗಳು ದೊರಕಿತ್ತು. ಕಾಳಿಂಗ ಸರ್ಪ ಹಾವು ಚಿತ್ರದ ಕಥಾವಸ್ತುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಮಾನವ ಸಂಬಂಧ ಮತ್ತು ಪ್ರಾಣಿಸಂಬಂಧದ ಸಣ್ಣ ಎಳೆಯ ಭಾವುಕತೆ ಎಲ್ಲರ ಗಮನ ಸೆಳೆದು ಚಿತ್ರತಂಡ ಮೆಚ್ಚುಗೆಗೆ ಪಾತ್ರವಾಗಿತ್ತು. ಇದಕ್ಕೂ ಮುನ್ನ ಕೋಲ್ಕತ್ತ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಚಿತ್ರ ದೆಹಲಿಯಲ್ಲಿ ನಡೆದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಸ್ಪೆಷಲ್ ಜೂರಿ ಮೆನ್ಸನ್ ಅವಾರ್ಡ್ ಕೂಡ ಪಡೆದುಕೊಂಡಿತ್ತು.

ಪ್ರಕೃತಿ ಮತ್ತು ಮನುಷ್ಯನ ನಡುವಿನ ಸೂಕ್ಷ್ಮಸಂವೇದನೆಗಳನ್ನೊಳಗೊಂಡ ಈ ಚಿತ್ರದ ಪ್ರಮುಖ ಪಾತ್ರವರ್ಗದಲ್ಲಿ ಕೇಶವ್ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಕರ್, ಶೃಂಗೇರಿ ರಾಮಣ್ಣ, ಪ್ರಗತಿ ಪ್ರಭು, ರಘು ರಾಮನಕೊಪ್ಪ, ಮಾಸ್ಟರ್ ಹರ್ಷ, ವಿನಯ್ ಕಣಿವೆ, ಪೃಥ್ವಿರಾಜ್ ಕೊಪ್ಪ, ಪ್ರಾಣೇಶ್ ಕೂಳೆಗದ್ದೆ ಮುಂತಾದವರಿದ್ದಾರೆ. ಚಿತ್ರಕ್ಕೆ ಪ್ರವೀಣ್ ಎಸ್ ಅವರ ಸುಂದರ ಛಾಯಾಗ್ರಹಣ, ಕೆಂಪರಾಜು ಬಿ ಎಸ್ ಅವರ ಸಂಕಲನ ಹಾಗೂ ಹೇಮಂತ್ ಜೋಯಿಷ್ ಅವರ ಸಂಗೀತವಿದೆ.

ಕನ್ನಡದಲ್ಲಿ ಹೊಸಬರ ಸಿನಿಮಾಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಅವುಗಳಲ್ಲಿ ಕೆಲವು ಸಿನಿಮಾಗಳು ಪ್ರೇಕ್ಷಕರ ಮೆಚ್ಚುಗೆ ಗಳಿಸುತ್ತಿದ್ದರೆ ಇನ್ನೂ ಕೆಲವು ವಿಮರ್ಶಕರ ಹೊಗಳಿಕೆಗೆ ಪಾತ್ರವಾಗಿವೆ. ಕೆಲವು ಸಿನಿಮಾಗಳು ಈ ಎರಡನ್ನೂ ಬಾಚಿಕೊಂಡು ಸಾಕಷ್ಟು ಹೆಸರು ಮಾಡಿವೆ. ಮುಂಬರುವ ‘ತಿಮ್ಮನ ಮೊಟ್ಟೆಗಳು’ ಯಾವ ಸಾಲಿನ ಲಿಸ್ಟ್‌ನಲ್ಲಿ ಸ್ಥಾನ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಈಡೇರಿದ ಪ್ರಾರ್ಥನೆ; ಪತಿಯೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದ ಗಾಯಕಿ ಸುಹಾನಾ ಸೈಯದ್
BBK 12: ಪದೇ ಪದೇ ವಯಸ್ಸಿನ ಕ್ಯಾತೆ ತೆಗೆದ ಗಿಲ್ಲಿ ನಟ; ಅಸಲಿಗೆ ಚೈತ್ರಾ ಕುಂದಾಪುರ ವಯಸ್ಸು ಎಷ್ಟು?