'ಟೈಮ್ ಪಾಸ್‌' ಮಾಡೋಕೆ ದಾರಿ ಹುಡುಕ್ತಾ ಇದೀರಾ? ಯೋಚ್ನೆ ಮಾಡ್ಬೇಡಿ, ಇನ್ನೊಂದೇ ವಾರ!

Published : Oct 12, 2025, 03:23 PM IST
Time Pass Movie

ಸಾರಾಂಶ

ತಮ್ಮದೇ ಬದುಕಿನಲ್ಲಿ ನಡೆದ ಘಟನೆಗಳಿಗೂ, ಈ ಸಿನಿಮಾ ಕಥೆಗೂ ಇರುವ ನಂಟಿನ ಸುಳಿವನ್ನೂ ಕೂಡಾ ನಿರ್ದೇಶಕರು ತೆರೆದಿಟ್ಟಿದ್ದಾರೆ. ಇದು ಚೇತನ್ ಜೋಡಿದಾರ್ ನಿರ್ದೇಶನದ ಚೊಚ್ಚಲ ಸಿನಿಮಾ. ಸಾಮಾನ್ಯವಾಗಿ ಹೀಗೆ ನಿರ್ದೇಶನಕ್ಕಿಳಿಯುವವರ ಹಿಂದೆ ಒಂದಷ್ಟು ಅನುಭವಗಳ ಹಿನ್ನೆಲೆ ಇರುತ್ತದೆ.

ಹೊಸತನದ ಸುಳಿವಿನೊಂದಿಗೆ ಟೈಮ್ ಪಾಸ್ ಟ್ರೈಲರ್ ಬಿಡುಗಡೆ!

ಜನಪ್ರಿಯ ಸಿನಿಮಾಗಳ ಅಲೆಯ ನಡುವೆಯೇ ಒಂದಷ್ಟು ಹೊಸತನ ಹೊಂದಿರುವ ಚಿತ್ರಗಳು ತಣ್ಣಗೆ ಪ್ರೇಕ್ಷಕರ ಮುಂದೆ ಬರಲು ಅಣಿಯಾಗುತ್ತಿವೆ. ಸದ್ಯದ ಮಟ್ಟಿಗೆ ಆ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಚಿತ್ರ ಟೈಮ್ ಪಾಸ್. ಕೆ. ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಟೈಮ್ ಪಾಸ್ (Time Pass) ಚಿತ್ರವು ಇದೇ ಅಕ್ಟೋಬರ್ 17ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಈ ಹಿನ್ನೆಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯ ಮೂಲಕ ಚಿತ್ರತಂಡ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿದೆ.

ನಿರ್ದೇಶಕ ಚೇತನ್ ಜೋಡಿದಾರ್

ನಿರ್ದೇಶಕ ಚೇತನ್ ಜೋಡಿದಾರ್, ನಿರ್ಮಾಪಕರು, ಕಲಾವಿದರು ಮತ್ತು ತಂತ್ರಜ್ಞಸರ ಸಮ್ಮುಖದಲ್ಲಿ ಈ ಟ್ರೈಲರ್ ಬಿಡುಗಡೆಗೊಂಡಿದೆ. ಇದೇ ಹೊತ್ತಿನಲ್ಲಿ ನಿರ್ದೇಶಕರು ಈ ಚಿತ್ರದ ಕಥಾ ಹಂದರದ ಬಗೆಗಿನ ಒಂದಷ್ಟು ಸೂಕ್ಷ್ಮ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ಸಿನಿಮಾ ಮಾಡೋ ಕನಸಿಟ್ಟುಕೊಂಡವರ ಏಳುಬೀಳಿನ ಕಥನ ಹೊಂದಿರುವ ಈ ಸಿನಿಮಾದೊಳಗೆ ಮತ್ತೊಂದು ಸಿನಿಮಾ ಕಥೆ ಪ್ರೇಕ್ಷಕರನ್ನು ತಲುಪಿಕೊಳ್ಳಲಿದೆಯಂತೆ. ಕಾಂತಾರ ಚಿತ್ರ ಯಶಸ್ವೀ ಪ್ರದರ್ಶನ ಕಾಣುತ್ತಿರುವ ಈ ಸಂದರ್ಭದಲ್ಲಿ ತಮ್ಮ ಚಿತ್ರಕ್ಕೂ ಕೂಡಾ ಅಂಥಾದ್ದೇ ಉತ್ತೇಜನ ಕೊಡಬೇಕೆಂದು ನಿರ್ದೇಶಕರು ಪ್ರೇಕ್ಷಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಚೇತನ್ ಜೋಡಿದಾರ್ ನಿರ್ದೇಶನದ ಚೊಚ್ಚಲ ಸಿನಿಮಾ

ತಮ್ಮದೇ ಬದುಕಿನಲ್ಲಿ ನಡೆದ ಘಟನೆಗಳಿಗೂ, ಈ ಸಿನಿಮಾ ಕಥೆಗೂ ಇರುವ ನಂಟಿನ ಸುಳಿವನ್ನೂ ಕೂಡಾ ನಿರ್ದೇಶಕರು ತೆರೆದಿಟ್ಟಿದ್ದಾರೆ. ಇದು ಚೇತನ್ ಜೋಡಿದಾರ್ ನಿರ್ದೇಶನದ ಚೊಚ್ಚಲ ಸಿನಿಮಾ. ಸಾಮಾನ್ಯವಾಗಿ ಹೀಗೆ ನಿರ್ದೇಶನಕ್ಕಿಳಿಯುವವರ ಹಿಂದೆ ಒಂದಷ್ಟು ಅನುಭವಗಳ ಹಿನ್ನೆಲೆ ಇರುತ್ತದೆ. ಆದರೆ ಚೇತನ್ ಜೋಡಿದಾರ್ ಈವರೆಗೆ ಯಾವ ನಿರ್ದೇಶಕರ ಬಳಿಯಲ್ಲಿಯೂ ಕಸುಬು ಕಲಿತಿಲ್ಲ. ಯೂಟ್ಯೂಬ್ ಮೂಲಕವೇ ನಿರ್ದೇಶನದ ಪಟ್ಟುಗಳನ್ನು ಕರಗತ ಮಾಡಿಕೊಂಡು, ತಮ್ಮ ಜೀವಮಾನದ ಕನಸನ್ನು ಟೈಮ್ ಪಾಸ್ ಮೂಲಕ ನನಸು ಮಾಡಿಕೊಂಡಿದ್ದಾರೆ. ಅದು ಪ್ರೇಕ್ಷಕರಿಗೂ ರುಚಿಸುತ್ತದೆಂಬ ವಿಶ್ವಾಸ ಅವರ ಮಾತುಗಳಲ್ಲಿ ಧ್ವನಿಸುತ್ತಿತ್ತು.

ಎಂ.ಹೆಚ್ ಕೃಷ್ಣಮೂರ್ತಿ, ಕಿರಣ್ ಕುಮಾರ್ ಶೆಟ್ಟಿ ಮತ್ತು ಗುಂಡೂರ್ ಶೇಖರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಡಾರ್ಕ್ ಹ್ಯೂಮರ್ ಜಾನರಿಗೆ ಸೇರಿಕೊಳ್ಳುವ ಈ ಚಿತ್ರವನ್ನು ಶ್ರೀ ಚೇತನ ಸರ್ವಿಸಸ್ ಬ್ಯಾನರ್ ಮೂಲಕ ಗುಂಡೂರು ಶೇಖರ್, ಕಿರಣ್ ಕುಮಾರ್ ಶೆಟ್ಟಿ ಎಂ.ಹೆಚ್ ಕೃಷ್ಣಮೂರ್ತಿ ನಿರ್ಮಾಣ ಮಾಡಿದ್ದಾರೆ. ಇಮ್ರಾನ್ ಪಾಷಾ, ವೈಸಿರಿ ಕೆ ಗೌಡ, ರತ್ಷಾರಾಮ್, ಕೆ. ಚೇತನ್ ಜೋಡಿದಾರ್, ಓಂ ಶ್ರೀ ಯಕ್ಷಶಿಫ್, ಪ್ರಭಾಕರ್ ರಾವ್, ನವೀನ್ ಕುಮಾರ್, ಸಂಪತ್ ಕುಮಾರ್, ಅಶ್ವಿನಿ ಶ್ರೀನಿವಾಸ್ ಮುಖ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಗಿರೀಶ್ ಗೌಡ ಸಾಹಸ ನಿರ್ದೇಶನ, ವೈಷ್ಣವಿ ಸತ್ಯನಾರಾಯಣ್ ನೃತ್ಯ ನಿರ್ದೇಶನ, ರಾಜೀವ್ ಗಣೇಶ್ ಛಾಯಾಗ್ರಹಣ, ಮಣಿ ಪ್ರಚಾರ ಕಲೆ, ಡಿ. ಶಾಮಸುಂದರ್, ಬಿ.ಕೆ ದಯಾನಂದ ನಿರ್ಮಾಣ ನಿರ್ವಹಣೆ, ಹರಿ ಪರಮ್ ಸಂಕಲನ, ಡಿ.ಎಂ ಉದಯ ಕುಮಾರ್ (ಡಿಕೆ) ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಕೊಳಕು ಪ್ಯಾಂಟ್‌ ಬಗ್ಗೆ ಮಾತನಾಡಿದ್ರು, ಮೊಮ್ಮಗನ ಸಿನಿಮಾಕ್ಕೆ ಸಮಸ್ಯೆ ತಂದ್ರು: Jaya Bachchan ಬಾಯ್ಕಾಟ್‌ ಆಗ್ತಾರಾ?
Aadi Lakshmi Purana Serial: ವಿರುದ್ಧ ದಿಕ್ಕಿನಲ್ಲಿ ಸಾಗುವ, ಒಬ್ಬರನ್ನೊಬ್ಬರು ಕಂಡರೆ ಆಗದವ್ರು ಮದುವೆಯಾಗುವ ಕಥೆ