
ವಾಷಿಂಗ್ಟನ್ : ಅಮೆರಿಕಾದ ಕನ್ನಡಿಗರೆಲ್ಲರೂ ಸೇರಿ ಹೊಸ ಪ್ರಯತ್ನವೊಂದಕ್ಕೆ ಕೈ ಹಾಕಿ ಯಶಸ್ವಿಯಾಗಿ ಆ ಕೆಲಸವನ್ನು ಪೂರೈಸಿದ್ದು, ಇದೀಗ ಅದರ ಫಲಿತಾಂಶಕ್ಕಾಗಿ ಕಾದಿದ್ದಾರೆ.
ಅಮೆರಿಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂಜಿನಿಯರ್ ಗಳೇ ಸೇರಿಕೊಂಡು, ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವೊಂದನ್ನು ಮಾಡಿದ್ದಾರೆ. ಚಿತ್ರದ ಸಂಪೂರ್ಣ ಚಿತ್ರೀಕರಣವು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಹಾಗೂ ಕ್ಯಾಲಿಫೊರ್ನಿಯಾದಲ್ಲಿಯೇ ಮಾಡಲಾಗಿದೆ.
ಥ್ರಿಲ್ಲರ್ ಕಥಾ ಹಂದರವನ್ನು ಹೊಂದಿರುವ ಈ ಚಿತ್ರವು ಈಗಾಗಲೇ ಪೋಸ್ಟರ್ ಗಳಿಂದಲೇ ಗಮನ ಸೆಳೆದಿದೆ. ಈಗಾಗಲೇ ಚಿತ್ರದ ಟ್ರೇಲರ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹಿಟ್ ಗಳಿಸಿದೆ. ಇದೇ 16ರಂದು ಅಮೆರಿಕದಾದ್ಯಂತ ಈ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.