‘ಕಾಂತಾರ’ ಬ್ಯೂಟಿಗೆ ಟಾಲಿವುಡ್‌ನಲ್ಲಿ ಬಂಪರ್ ಆಫರ್: ಸಾಯಿ ತೇಜ್ ಹೊಸ ಸಿನಿಮಾಗೆ ನಾಯಕಿ!

Published : Oct 25, 2026, 04:47 PM IST
Sapthami Gowda Sai Durga Tej

ಸಾರಾಂಶ

‘ಕಾಂತಾರ’ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟಿ ಸಪ್ತಮಿ ಗೌಡಗೆ ಟಾಲಿವುಡ್‌ನಲ್ಲಿ ಮತ್ತೊಂದು ಬಂಪರ್ ಅವಕಾಶ ಸಿಗುವ ಸಾಧ್ಯತೆ ಇದೆ. ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ..

ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ಹಾಗೂ ನಿರ್ದೇಶಕ ತೇಜ ಕಾಕುಮಾನಿ ಕಾಂಬಿನೇಷನ್‌ನಲ್ಲಿ ಅನಿಲ್ ಸುಂಕರ ನಿರ್ಮಿಸುತ್ತಿರುವ ಹೊಸ ಸಿನಿಮಾಗೆ ಸಂಬಂಧಿಸಿದಂತೆ ಕ್ರೇಜಿ ಅಪ್‌ಡೇಟ್‌ವೊಂದು ಹೊರಬಿದ್ದಿದೆ. ಕಾಡಿನ ಹಿನ್ನೆಲೆಯೊಂದಿಗೆ ಭರ್ಜರಿ ವಿಸ್ಯುವಲ್ ಎಫೆಕ್ಟ್ಸ್‌ಗಳನ್ನೊಳಗೊಂಡ ಆ್ಯಕ್ಷನ್ ಡ್ರಾಮಾದಲ್ಲಿ ಸಾಯಿ ತೇಜ್‌ಗೆ ಜೋಡಿಯಾಗಿ ‘ಕಾಂತಾರ’ ಫೇಮ್ ಸಪ್ತಮಿ ಗೌಡ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.

ಇಂಜಿನಿಯರಿಂಗ್ ಪದವೀಧರೆಯಾಗಿರುವ, ರಾಷ್ಟ್ರೀಯ ಮಟ್ಟದ ಈಜುಪಟುವಾಗಿರುವ ಕನ್ನಡದ ಬೆಡಗಿಗೆ ಇದು ಟಾಲಿವುಡ್‌ನಲ್ಲಿ ಮತ್ತೊಂದು ಪ್ರಮುಖ ಅವಕಾಶವಾಗಲಿದೆ. ಈ ತಿಂಗಳಾಂತ್ಯದಲ್ಲೇ ಸಿನಿಮಾದ ರೆಗ್ಯುಲರ್ ಶೂಟಿಂಗ್ ಆರಂಭವಾಗಲಿದೆ ಎನ್ನಲಾಗಿದೆ. ಇತ್ತ ಸಾಯಿ ತೇಜ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಸಂಬರಾಲ ಏಟಿಗಟ್ಟು’ ಸಂಕ್ರಾಂತಿ ಹಬ್ಬದ ಪ್ರಯುಕ್ತ 2027ರ ಜನವರಿ 12ರಂದು ತೆರೆಗೆ ಬರಲು ಸಜ್ಜಾಗುತ್ತಿದೆ.

ಸಾಯಿ ತೇಜ್ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ!

ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ವಿಭಿನ್ನ ಕಥಾಹಂದರದ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಟಾಲಿವುಡ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ. ಇತ್ತೀಚೆಗಷ್ಟೇ ನಿರ್ದೇಶಕ ತೇಜ ಕಾಕುಮಾನಿ ಸಾರಥ್ಯದಲ್ಲಿ, ನಿರ್ಮಾಪಕ ಅನಿಲ್ ಸುಂಕರ ನಿರ್ಮಾಣದಲ್ಲಿ ಹೊಸ ಪ್ರಾಜೆಕ್ಟ್‌ವೊಂದನ್ನು ಘೋಷಿಸಿದ್ದ ಸಾಯಿ ತೇಜ್, ಈ ಸಿನಿಮಾದ ಮೂಲಕ ಪ್ರೇಕ್ಷಕರಿಗೆ ವಿಭಿನ್ನ ಸಿನಿಮಾಟಿಕ್ ಅನುಭವ ನೀಡಲು ಸಜ್ಜಾಗುತ್ತಿದ್ದಾರೆ. ಈ ಕ್ರೇಜಿ ಪ್ರಾಜೆಕ್ಟ್‌ಗೆ ಸಂಬಂಧಿಸಿದ ಹೊಸ ಅಪ್‌ಡೇಟ್‌ಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ.

ಸಿನಿಮಾ ಮೂಲಗಳ ಪ್ರಕಾರ, ಈ ಚಿತ್ರವು ಮುಖ್ಯವಾಗಿ ಕಾಡಿನ ಹಿನ್ನೆಲೆಯಲ್ಲೇ ಸಾಗುವ ಹೈ-ವೋಲ್ಟೇಜ್ ಆ್ಯಕ್ಷನ್ ಡ್ರಾಮಾ ಆಗಿರಲಿದೆ. ವಿಭಿನ್ನ ಕಥಾಹಂದರದ ಜೊತೆಗೆ ಗ್ರಾಫಿಕ್ಸ್ ಹಾಗೂ ವಿಸ್ಯುವಲ್ ಎಫೆಕ್ಟ್ಸ್ ಸಿನಿಮಾದ ಪ್ರಮುಖ ಹೈಲೈಟ್ ಆಗಲಿವೆ. ತಾಂತ್ರಿಕವಾಗಿ ಉನ್ನತ ಮಟ್ಟದಲ್ಲಿ ಚಿತ್ರವನ್ನು ಮೂಡಿಸಲು ಚಿತ್ರತಂಡ ಸಿದ್ಧತೆ ನಡೆಸುತ್ತಿದ್ದು, ಪ್ರೀ-ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಈ ತಿಂಗಳಾಂತ್ಯದಲ್ಲೇ ರೆಗ್ಯುಲರ್ ಶೂಟಿಂಗ್ ಆರಂಭವಾಗಲಿದೆ ಎನ್ನಲಾಗಿದೆ.

ನಾಯಕಿಯಾಗಿ ಸಪ್ತಮಿ ಗೌಡ

ಈ ಸಿನಿಮಾದಲ್ಲಿ ಸಾಯಿ ದುರ್ಗಾ ತೇಜ್‌ಗೆ ಜೋಡಿಯಾಗಿ ಕನ್ನಡದ ಬೆಡಗಿ ಸಪ್ತಮಿ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ‘ಕಾಂತಾರ’ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆದಿದ್ದ ಸಪ್ತಮಿ, ಬಳಿಕ ಬಾಲಿವುಡ್‌ನ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸಿ ಮೆಚ್ಚುಗೆ ಪಡೆದಿದ್ದರು. ಈ ಹಿಂದೆ ನಿತಿನ್ ಅಭಿನಯದ ‘ತಮ್ಮುಡು’ ಚಿತ್ರದ ಮೂಲಕ ಟಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದರೂ, ಆ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ಆದರೆ ಸಪ್ತಮಿ ಗೌಡ ಅವರ ಅಭಿನಯ ಹಾಗೂ ಪ್ರತಿಭೆಯನ್ನು ಗುರುತಿಸಿರುವ ಚಿತ್ರತಂಡ, ಇದೀಗ ಈ ಬಿಗ್ ಪ್ರಾಜೆಕ್ಟ್‌ಗೆ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿದೆ ಎನ್ನಲಾಗಿದೆ. ಮೆಗಾ ಹೀರೋ ಸಾಯಿ ತೇಜ್‌ಗೆ ಜೋಡಿಯಾಗುವ ಅವಕಾಶ ಸಪ್ತಮಿ ಗೌಡ ಅವರ ವೃತ್ತಿಜೀವನಕ್ಕೆ ಮತ್ತೊಂದು ದೊಡ್ಡ ತಿರುವು ನೀಡುವ ಸಾಧ್ಯತೆಯಿದೆ.

ಸ್ವಿಮ್ಮಿಂಗ್ ಚಾಂಪಿಯನ್‌ನಿಂದ ಸಿನಿಮಾ ತಾರೆಯವರೆಗೆ..

ಸಪ್ತಮಿ ಗೌಡ ಅವರ ಸಿನಿ ಜರ್ನಿ ಕೂಡ ಸಾಕಷ್ಟು ಇಂಟರೆಸ್ಟಿಂಗ್ ಆಗಿದೆ. ಸಿವಿಲ್ ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರುವ ಸಪ್ತಮಿ, ವಿದ್ಯಾರ್ಥಿಯಾಗಿದ್ದಾಗಲೇ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಪದಕಗಳನ್ನು ಗೆದ್ದಿದ್ದಾರೆ. ಕ್ರೀಡಾ ಹಿನ್ನೆಲೆಯಿಂದ ಚಿತ್ರರಂಗಕ್ಕೆ ಕಾಲಿಟ್ಟ ಅವರು, ತಮ್ಮ ನಟನೆಯ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ಸಪ್ತಮಿ, ಸಾಮಾಜಿಕ ಜಾಲತಾಣಗಳ ಮೂಲಕವೂ ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ.

ಸಂಕ್ರಾಂತಿ ಕಣಕ್ಕೆ ‘ಸಂಬರಾಲ ಏಟಿಗಟ್ಟು’

ಇನ್ನೊಂದೆಡೆ ಸಾಯಿ ದುರ್ಗಾ ತೇಜ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಸಂಬರಾಲ ಏಟಿಗಟ್ಟು’ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ರೋಹಿತ್ ಕೆಪಿ ನಿರ್ದೇಶನದ ಈ ಆ್ಯಕ್ಷನ್ ಎಂಟರ್‌ಟೈನರ್ ಸಿನಿಮಾವನ್ನು ‘ಹನುಮಾನ್’ನಂತಹ ಬ್ಲಾಕ್‌ಬಸ್ಟರ್ ಸಿನಿಮಾ ನೀಡಿರುವ ಪ್ರೈಮ್‌ಶೋ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ. ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಅದ್ಧೂರಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದಾರೆ. ಸಿನಿಮಾದಲ್ಲಿ ಸಾಯಿ ತೇಜ್ ‘ಬಲಿ’ ಎಂಬ ಪವರ್‌ಫುಲ್ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಐಶ್ವರ್ಯ ಲಕ್ಷ್ಮಿ ನಾಯಕಿಯಾಗಿ ನಟಿಸುತ್ತಿದ್ದು, ಹಿರಿಯ ನಟ ಶ್ರೀಕಾಂತ್ ‘ಬ್ರಿಟಿಷ್’ ಎಂಬ ವಿಭಿನ್ನ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಜಗಪತಿ ಬಾಬು, ಸಾಯಿ ಕುಮಾರ್, ಅನನ್ಯ ನಾಗಳ್ಳ ಸೇರಿದಂತೆ ಹಲವು ಪ್ರಮುಖ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ. ‘ವಿರೂಪಾಕ್ಷ’ ಸಿನಿಮಾದ ಸೂಪರ್ ಹಿಟ್ ಬಳಿಕ ಸಾಯಿ ತೇಜ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಕಾಂಬಿನೇಷನ್ ಮತ್ತೊಮ್ಮೆ ಈ ಚಿತ್ರದ ಮೂಲಕ ಒಂದಾಗುತ್ತಿದೆ. ಈ ವಿಸ್ಯುವಲ್ ಗ್ರಾಂಡ್ ಸಿನಿಮಾವನ್ನು 2027ರ ಜನವರಿ 12ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶ್ವದಾದ್ಯಂತ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ. ತೆಲುಗು ಜೊತೆಗೆ ಹಿಂದಿ, ತಮಿಳು, ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲೂ ಸಿನಿಮಾ ಬಿಡುಗಡೆಯಾಗಲಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಕುದುರೆ ಮೋಟಿಫ್, ಮಿರರ್ ವರ್ಕ್, ಕಪ್ಪು ಲೆಹೆಂಗಾ: ನಟಿ ಕೃತಿ ಸನೋನ್ ರ‍್ಯಾಂಪ್ ವಾಕ್‌ಗೆ ಫ್ಯಾನ್ಸ್ ಫಿದಾ
ವಿದೇಶಿ ಗೆಳೆಯನ ಕೈಹಿಡಿದ ನಟ ಅರ್ಜುನ್ ಸರ್ಜಾ ಕಿರಿಯ ಪುತ್ರಿ.. ಅದ್ದೂರಿಯಾಗಿ ನೆರವೇರಿತು ಅಂಜನಾ-ಇಸಾಯ್ ವಿವಾಹ