ನಿಖಿಲ್ ಕುಮಾರಸ್ವಾಮಿ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಸಿಎಂ ಕುಮಾರಸ್ವಾಮಿ ತಮ್ಮ ಪುತ್ರನ ಸಿನಿಮಾಕ್ಕೆ ಕ್ಯಾಬಿನೆಟ್ ಸಚಿವರನ್ನು ಒಳಗೊಂಡಂತೆ ವಿವಿಧ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಿದ್ದಾರೆ.
ಬೆಂಗಳೂರು[ಜ. 24] ಮಗನ ಸಿನಿಮಾಗೆ ಖುದ್ದು ದೂರವಾಣಿ ಮೂಲಕ ಸಿಎಂ ಕುಮಾರಸ್ವಾಮಿ ಗಣ್ಯರಿಗೆ ಆಹ್ವಾನ ನೀಡಿದ್ದಾರೆ. ಪಕ್ಷತೀವಾಗಿ ಎಲ್ಲಾ ಶಾಸಕರಿಗೆ ಕರೆ ಮಾಡಿ ಹೆಚ್ ಡಿ ಕುಮಾರಸ್ವಾಮಿ ಅಹ್ವಾನ ನೀಡಿದ್ದಾರೆ.
ಬೆಂಗಳೂರಿನ ಒರಯಾನ್ ಮಾಲ್‌ನಲ್ಲಿ ಪ್ರೀಮಿಯರ್ ಶೋ ನಡೆಯುತ್ತಿದೆ. ಬಜೆಟ್ ಪೂರ್ವಭಾವಿ ಸಭೆಯ ಒತ್ತಡದ ನಡುವೆಯೂ ಬಿಡುವು ಮಾಡಿಕೊಂಡ ಸಿಎಂ ಶಾಸಕರನ್ನು ಆಹ್ವಾನಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿಗೆ ಕಂಕಣ ಭಾಗ್ಯ
ಈಶ್ವರಪ್ಪ. ಸೌಮ್ಯರೆಡ್ಡಿ. ಡಿಜಿ ನೀಲಾಮಣಿ. ಬಂಡೆಪ್ಪ ಕಾಶಂಪುರ್ ಸಿನಿಮಾ ವೀಕ್ಷಣೆಗೆ ಆಗಮಿಸಿದ್ದಾರೆ. ಎ. ಹರ್ಷ ನಿರ್ದೇಶನದ ಸಿನಿಮಾ ಸೀತಾರಾಮ ಕಲ್ಯಾಣದಲ್ಲಿ ನಿಖಿಲ್‌ಗೆ ಜೋಡಿಯಾಗಿ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ.