ಸ್ಯಾಂಡಲ್‌ವುಡ್ ನಟ ರಿಷಿ Engaged!

Published : Apr 20, 2019, 11:15 AM IST
ಸ್ಯಾಂಡಲ್‌ವುಡ್ ನಟ ರಿಷಿ Engaged!

ಸಾರಾಂಶ

ಸ್ಯಾಂಡಲ್ ವುಡ್ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾ ನೀಡಿದ ನಟ ರಿಷಿ ತನ್ನ ಗರ್ಲ್ ಫ್ರೆಂಡ್ ಜೊತೆ ಹೈದರಾಬಾದ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

 

ಆಪರೇಷನ್ ಅಲಮೇಲಮ್ಮ ಹಾಗೂ ಕವಲುದಾರಿ ಅಂತಹ ಬ್ಲಾಕ್ ಬಾಸ್ಟರ್ ಸಿನಿಮಾದಲ್ಲಿ ಅಭಿನಯಿಸಿರುವ ನಟಿ ರಿಷಿ ಈಗ ಫಾರೆವರ್ ಟೇಕನ್ ಬಾಯ್.

ಹೈದರಾಬಾದ್ ನ ಖಾಸಗಿ ಹೋಟೆಲ್ ವೊಂದರಲ್ಲಿ ಗುರು-ಹಿರಿಯರ ಆಶೀರ್ವಾದದಲ್ಲಿ ತನ್ನ ಗರ್ಲ್ ಫ್ರೆಂಡ್ ಸ್ವಾತಿ ಜೊತೆ ನಿಶ್ವಿತಾರ್ಥ ಮಾಡಿಕೊಂಡಿದ್ದಾರೆ. ಸ್ವಾತಿ ವೃತ್ತಿಯಲ್ಲಿ ಬರಹಗಾರ್ತಿ ಹಾಗೂ ರಿಷಿ ಜೀವನದಲ್ಲಿ ಬೆನ್ನೆಲುಬಾಗಿ ನಿಂತ ಸಂಗಾತಿ ಎಂದು ರಿಷಿ ಹಂಚಿಕೊಂಡಿದ್ದಾರೆ.

‘ಧನ್ಯವಾದಗಳು. ನೀವೆಲ್ಲರೂ ನನ್ನ ಕೆಲಸವನ್ನು ನೋಡಿ ಮೆಚ್ಚಿ ಪ್ರೋತ್ಸಾಹಿಸಿದ್ದೀರಿ. ನಿಮ್ಮ ಈ ಪ್ರೀತಿ ನನಗೆ ಇನ್ನಷ್ಟು ಒಳ್ಳೆ ಕೆಲಸಗಳ ಮೂಲಕ ನಿಮ್ಮೆಲ್ಲರನ್ನು ರಂಜಿಸಲು ಸ್ಫೂರ್ತಿ ಕೊಟ್ಟಿದೆ. ಈ ಗೆಲುವಿನ ಬೆನ್ನಲ್ಲೇ ನನ್ನ ವೈಯಕ್ತಿಕ ಜೀವನದಲ್ಲೂ ಒಂದು ಮಹತ್ತರ ಮೈಲಿಗಲ್ಲನ್ನು ಮುಟ್ಟಿದ್ದೇನೆಂದು ನಿಮ್ಮ ಬಳಿ ಹಂಚಿಕೊಳ್ಳಲು ನನಗೆ ಬಹಳ ಸಂತಸವಿದೆ. ನನ್ನ ಸಂಗಾತಿ ನನಗೆ ಸಿಕ್ಕಿದ್ದಾಳೆ. ಸ್ವಾತಿ, ಅವಳ ಹೆಸರು. ವೃತ್ತಿಯಿಂದ ಬರಹಗಾರ್ತಿ. ನನ್ನ ಎಲ್ಲ ಕೆಲಸಗಳಲ್ಲಿ ಬೆನ್ನೆಲುಬಾಗಿ ನಿಂತಿದ್ದಾಳೆ. ನಮ್ಮಿಬ್ಬರ ಕುಟುಂಬದವರ ಆಶೀರ್ವಾದದಿಂದ, ಹೈದರಾಬಾದ್ ನಲ್ಲಿ ಒಂದು ಚಿಕ್ಕ ಸಮಾರಂಭದಲ್ಲಿ ನಮ್ಮಿಬ್ಬರ ನಿಶ್ಚಿತಾರ್ಥ ನೆರವೇರಿದೆ.  ಸಿನಿಮಾ ಕೆಲಸಗಳಲ್ಲಿ ತೊಡಗಿದ್ದರಿಂದ ನಿಶ್ಚಿತಾರ್ಥದ ವಿಚಾರವನ್ನು ಈಗ ತಿಳಿಸುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಶುಭ ಹಾರೈಕೆ ನಮ್ಮ ಮೇಲೆ ಸದಾ ಹೀಗೆ ಇರಲಿ’ ಎಂದು ಹಂಚಿಕೊಂಡಿದ್ದಾರೆ.

ರಿಷಿ ಹಾಗೂ ಸ್ವಾತಿ ಮದುವೆ ದಿನಾಂಕ ನಿಗದಿಯಾಗಿಲ್ಲ.

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬೆಳಗೆದ್ದು .. ನಾಚುತ್ತಲೇ ಮಲಗುವ ಕೋಣೆಯ ರಹಸ್ಯ ಬಹಿರಂಗಪಡಿಸಿದ ಪಿಗ್ಗಿ
ವೈವಾಹಿಕ ಜೀವನಕ್ಕೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಹಿಂದೂ ಮುಸ್ಲಿಂ ಸಂಪ್ರದಾಯದಂತೆ ಮದುವೆ