
ನಾಯಕಿ ಸೇರಿದಂತೆ ಪೋಷಕ ಕಲಾವಿದರ ಆಯ್ಕೆಯಲ್ಲಿ ಬ್ಯುಸಿ ಆಗಿರುವ ಚಿತ್ರ ತಂಡ, ಮೇ ತಿಂಗಳ ಎರಡನೇ ವಾರದಿಂದ ಚಿತ್ರೀಕರಣ ಶುರು ಮಾಡುತ್ತಿದೆ. ಕನ್ನಡ ಚಿತ್ರೋದ್ಯಮದಲ್ಲಿ ಅಜಯ ರಾವ್ ಅಂದ್ರೆ ರೊಮ್ಯಾಂಟಿಕ್, ಆ್ಯಕ್ಷನ್ ಹಾಗೂ ಕಾಮಿಡಿ ಚಿತ್ರಗಳಲ್ಲೂ ಹೆಸರು ಮಾಡಿದವರು. ವಿಶೇಷವಾಗಿ ಅವರಿಗೆ ಜನಪ್ರಿಯತೆ ಸಿಕ್ಕಿದ್ದು ರೊಮ್ಯಾಂಟಿಕ್ ಸಿನಿಮಾಗಳ ಮೂಲಕವೇ. ಅದಕ್ಕೆ ತಕ್ಕಂತೆಯೇ ಅಜಯ್ ಅವರನ್ನು ತಮ್ಮ ಚಿತ್ರದಲ್ಲಿ ರೊಮ್ಯಾಂಟಿಕ್ ಹೀರೋ ಆಗಿಯೇ ತೋರಿಸಲು ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ನಿರ್ದೇಶಕ ತಿಮ್ಮೇಗೌಡ.
ನಿರ್ದೇಶಕನಾಗಿ ತಿಮ್ಮೇಗೌಡರಿಗೆ ಇದು ಮೊದಲ ಸಿನಿಮಾ. ಸುಮಾರು ಹತ್ತು ವರ್ಷಗಳ ಕಾಲ ಚಿತ್ರೋದ್ಯಮದಲ್ಲಿ ದುಡಿದ ಅನುಭವ ಇದೆ. ತಮ್ಮದೇ ಸಿನಿಮಾ ಶುರು ಮಾಡಿದ್ದರಿಂದ ಅವರು ‘ಕೆಜಿಎಫ್ ಚಾಪ್ಟರ್ 2’ನಲ್ಲಿ ಕೆಲಸ ಮಾಡುತ್ತಿಲ್ಲ ಎನ್ನಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.