ಶ್ರೀಮುರಳಿಗೆ ಬಿಗ್ ಬಾಸ್ ಸ್ಪರ್ಧಿ ‘ಭರಾಟೆ’!

Published : Apr 30, 2019, 10:05 AM IST
ಶ್ರೀಮುರಳಿಗೆ ಬಿಗ್ ಬಾಸ್ ಸ್ಪರ್ಧಿ  ‘ಭರಾಟೆ’!

ಸಾರಾಂಶ

  ಶ್ರೀಮುರಳಿ ಅಭಿನಯದ 'ಭರಾಟೆ' ಚಿತ್ರದಲ್ಲಿ ಹಲವಾರು ನಟಿಯರು ಗೆಸ್ಟ್ ಅಪಿಯರೆನ್ಸ್ ಮಾಡಿದ್ದಾರೆ. ಚಿತ್ರದ ನಾಯಕಿ ಶ್ರೀಲೀಲಾ ಆಗಿದ್ದು ಟೈಟಲ್ ಸಾಂಗ್ ನಲ್ಲಿ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ. ಈಗ ಚಿತ್ರದ ಮತ್ತೊಂದು ಹಾಡಿನಲ್ಲಿ ಬಿಗ್ ಬಾಸ್ ಸ್ಪರ್ಧಿ ಕೃಷಿ ಹೆಜ್ಜೆ ಹಾಕುತ್ತಿದ್ದಾರೆ.

 

ರೊರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಭರಾಟೆ’ ಸ್ಯಾಂಡಲ್ ವುಡ್ ಮಂದಿಗೆ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಹುಟ್ಟಿಸಿದೆ. ಇನ್ನು ಶ್ರೀ ಮುರಳಿಗೆ ನಾಯಕಿಯಾಗಿ ಕ್ಯೂಟ್ ಬಾರ್ಬಿ ಡಾಲ್ ಶ್ರೀಲೀಲಾ ಅಭಿನಯಿಸುತ್ತಿದ್ದಾರೆ.

ಕೆಲ ದಿನಗಳ ಹಿಂದೆ ಭರಾಟೆ ಚಿತ್ರದ ಟೈಟಲ್ ಹಾಡೊಂದರ ಶೂಟಿಂಗ್ ನಡೆದಿದ್ದು ಅದರಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ಹೆಜ್ಜೆ ಹಾಕಿದ್ದರು. ಈಗ ಬಿಗ್ ಬಾಸ್ ಸ್ಪರ್ಧಿ ಸ್ಮೈಲಿಂಗ್ ಗರ್ಲ್ ಕೃಷಿ ತಾಪಂಡ ಹೆಜ್ಜೆ ಹಾಕುವುದರ ಜೊತೆಗೆ ಕೆಲವೊಂದು ಚಿತ್ರದ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಇದರ ಬಗ್ಗೆ ಸ್ವತಃ ಕೃಷಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಚಿತ್ರದ ಮತ್ತೊಂದು ವಿಶೇಷ ಅಂದರೆ ಇದರಲ್ಲಿ 10 ಖ್ಯಾತ ಖಳನಟರು ಕಾಣಿಸಿಕೊಂಡಿದ್ದಾರೆ. ಈ ಬಹುನಿರೀಕ್ಷಿತ ಚಿತ್ರಕ್ಕೆ ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದು ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?