
ಬಾಲಿವುಡ್ ಸ್ಟಾರ್ ನಟಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಕೃತಿ ಸನೋನ್ ತಮ್ಮ ವೃತ್ತಿಜೀವನದ ಒಂದು ದೊಡ್ಡ ಆಸೆಯನ್ನು ಹೊರಹಾಕಿದ್ದಾರೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಜೊತೆ ಸಿನಿಮಾದಲ್ಲಿ ನಟಿಸಬೇಕೆಂಬುದು ಅವರ ಬಯಕೆ. ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾವಂತ ನಟರಲ್ಲಿ ಅಲ್ಲು ಅರ್ಜುನ್ ಕೂಡ ಒಬ್ಬರು ಎಂದು ಕೃತಿ ಹೊಗಳಿದ್ದಾರೆ. ಅವರೊಂದಿಗೆ ತೆರೆ ಹಂಚಿಕೊಳ್ಳುವ ಅವಕಾಶ ಸಿಕ್ಕರೆ ಖಂಡಿತ ನಟಿಸುವುದಾಗಿ ತಿಳಿಸಿದ್ದಾರೆ.
ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಕೃತಿ ಸನೋನ್ ಈ ಬಗ್ಗೆ ಮಾತನಾಡಿದ್ದಾರೆ. 'ಪುಷ್ಪ' ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರ ನಟನೆ ಬಹಳಷ್ಟು ಆಕರ್ಷಿಸಿದೆ ಎಂದು ಅವರು ಹೇಳಿದ್ದಾರೆ. ಕೇವಲ ಒಂದು ಸಿನಿಮಾದಲ್ಲ, ತಮ್ಮ ಇಡೀ ವೃತ್ತಿಜೀವನದಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸುವ ಮೂಲಕ ನಟನಾಗಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ ಎಂದು ಹೊಗಳಿದ್ದಾರೆ. ಅಲ್ಲು ಅರ್ಜುನ್ ಅವರನ್ನು 'ಅದ್ಭುತ ನಟ' ಎಂದು ಬಣ್ಣಿಸಿದ ಕೃತಿ, ಭವಿಷ್ಯದಲ್ಲಿ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.
ಆದರೆ, ಈ ಕ್ರೇಜಿ ಕಾಂಬಿನೇಷನ್ ಯಾವಾಗ ಸಾಧ್ಯವಾಗುತ್ತದೆ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಅಲ್ಲು ಅರ್ಜುನ್ ಸದ್ಯ ನಿರ್ದೇಶಕ ಅಟ್ಲಿ ಅವರೊಂದಿಗಿನ ಬೃಹತ್ ಪ್ರಾಜೆಕ್ಟ್ ಸೇರಿದಂತೆ ಹಲವು ಕಮಿಟ್‌ಮೆಂಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ, ಈ ಇಬ್ಬರೂ ಒಟ್ಟಿಗೆ ನಟಿಸುವ ಸಿನಿಮಾ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಕುತೂಹಲಕಾರಿ ವಿಷಯವೆಂದರೆ, ಅಲ್ಲು ಅರ್ಜುನ್ ಅವರ ವೃತ್ತಿಜೀವನದ ಅತಿದೊಡ್ಡ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾದ 'ಅಲಾ ವೈಕುಂಠಪುರಮುಲೋ' ಚಿತ್ರದೊಂದಿಗೆ ಕೃತಿ ಸನೋನ್‌ಗೆ ಪರೋಕ್ಷ ಸಂಬಂಧವಿದೆ.
ಈ ಚಿತ್ರದ ಹಿಂದಿ ರಿಮೇಕ್‌ನಲ್ಲಿ ಕೃತಿ ನಾಯಕಿಯಾಗಿ ನಟಿಸಿದ್ದರು. ಅಲ್ಲು ಅರ್ಜುನ್ ಪಾತ್ರಕ್ಕಿಂತ ಭಿನ್ನವಾಗಿ, ತಮ್ಮದೇ ಶೈಲಿಯಲ್ಲಿ ಆ ಕಥೆಯನ್ನು ಪ್ರೇಕ್ಷಕರ ಮುಂದೆ ತಂದಿದ್ದರು. ಪ್ರಸ್ತುತ ಅಲ್ಲು ಅರ್ಜುನ್ ಸಾಲು ಸಾಲು ದೊಡ್ಡ ಚಿತ್ರಗಳಲ್ಲಿ ಬ್ಯುಸಿಯಾಗಿದ್ದರೆ, ಕೃತಿ ಸನೋನ್ ಕೂಡ ಬಾಲಿವುಡ್‌ನಲ್ಲಿ ದೊಡ್ಡ ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೂ, ಅಲ್ಲು ಅರ್ಜುನ್ ಜೊತೆ ನಟಿಸುವ ತಮ್ಮ ಆಸೆಯನ್ನು ಅವರು ಬಹಿರಂಗವಾಗಿ ವ್ಯಕ್ತಪಡಿಸಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಈ ಇಬ್ಬರು ಸ್ಟಾರ್‌ಗಳು ಭವಿಷ್ಯದಲ್ಲಿ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.