ದುನಿಯಾ ವಿಜಯ್ ವಿರುದ್ಧ ಎಫ್ ಐಆರ್

Published : May 31, 2018, 08:21 PM IST
ದುನಿಯಾ ವಿಜಯ್ ವಿರುದ್ಧ ಎಫ್ ಐಆರ್

ಸಾರಾಂಶ

ವಾರೆಂಟ್  ಹಿನ್ನೆಲೆಯಲ್ಲಿ ತಡರಾತ್ರಿ ಆರೋಪಿಯನ್ನು ಬಂಧಿಸಲು ಹೋದಾಗ ನಟ ದುನಿಯಾ ವಿಜಯ್ ಆರೋಪಿ ಮನೆಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದರು. ಅಲ್ಲದೆ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪ ಕೂಡ ದಾಖಲಾಗಿತ್ತು. 

ಬೆಂಗಳೂರು[ಮೇ.31]: ನಟ ದುನಿಯಾ ವಿಜಯ್'ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಆರೋಪಿಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಕಾರಣಕ್ಕಾಗಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಒಂದೂವರೆ ವರ್ಷದ ಹಿಂದೆ ಮಾಸ್ತಿಗುಡಿ ಚಿತ್ರದ ಚಿತ್ರೀಕರಣ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಮುಳುಗಿ ಅನಿಲ್ ಹಾಗೂ ಉದಯ್ ಎಂಬ ಇಬ್ಬರು ನಟರು ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಪ್ರಕರಣದ ಆರೋಪಿ ಸುಂದರ್ ಪಿ ಗೌಡ ವಿರುದ್ಧ ರಾಮನಗರ ಜೆಎಂಎಫ್ ಸಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿತ್ತು.

ವಾರೆಂಟ್  ಹಿನ್ನೆಲೆಯಲ್ಲಿ ತಡರಾತ್ರಿ ಆರೋಪಿಯನ್ನು ಬಂಧಿಸಲು ಹೋದಾಗ ನಟ ದುನಿಯಾ ವಿಜಯ್ ಆರೋಪಿ ಮನೆಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದರು. ಅಲ್ಲದೆ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪ ಕೂಡ ದಾಖಲಾಗಿತ್ತು. ಈ ಹಿನ್ನಲೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353 ಅಡಿ ಎಫ್ಐಆರ್ ದಾಖಲಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
Sonali Bendre: 'ಅಡುಗೆಮನೆಗೆ ಹೋಗ್ಬೇಡ ನೀನು'.. ಅಂತ ಖಡಕ್ ಆಗಿ ಹೇಳಿದ್ರು ನನ್ ಅತ್ತೆ!