ರಿಲೀಸ್‌ಗೆ ರೆಡಿಯಾದ ಎಂಎಸ್‌ ಧೋನಿ ನಿರ್ಮಾಣದ ಮೊದಲ ಸಿನಿಮಾ!

Published : Jun 18, 2023, 08:34 PM IST
ರಿಲೀಸ್‌ಗೆ ರೆಡಿಯಾದ ಎಂಎಸ್‌ ಧೋನಿ ನಿರ್ಮಾಣದ ಮೊದಲ ಸಿನಿಮಾ!

ಸಾರಾಂಶ

ಟೀಮ್‌ ಇಂಡಿಯಾ ಮಾಜಿ ನಾಯಕ ಎಂಎಸ್‌ ಧೋನಿ ನಿರ್ಮಾಣದ ಚೊಚ್ಚಲ ಸಿನಿಮಾ ಎಲ್‌ಜಿಎಂ ಅಂದರೆ ಲೆಟ್ಸ್‌ ಗೆಟ್‌ ಮ್ಯಾರೀಡ್‌ ರಿಲೀಸ್‌ಗೆ ರೆಡಿಯಾಗಿದೆ. ತಮಿಳುನಾಡು ಮಾತ್ರವಲ್ಲದೆ, ಕರ್ನಾಟಕದಲ್ಲಿಯೂ ಇದನ್ನು ರಿಲೀಸ್‌ ಮಾಡಲು ಮುಂದಾಗಿದ್ದಾರೆ.

ಚೆನ್ನೈ (ಜೂ.18): ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ ತಮ್ಮ ಪತ್ನಿ ಸಾಕ್ಷಿ ಜೊತೆಗೂಡಿ ತಮ್ಮದೇ ಧೋನಿ ಎಂಟರ್ ಟೇನ್ಮೆಂಟ್ ಮೂಲಕ ನಿರ್ಮಿಸುತ್ತಿರುವ ಚೊಚ್ಚಲ ಸಿನಿಮಾ ಲೆಟ್ಸ್ ಗೆಟ್ ಮ್ಯಾರೀಡ್. ಟೀಸರ್ ಮೂಲಕ ನಗುವಿನ ಕಿಕ್ ಕೊಟ್ಟಿರುವ ಈ ಚಿತ್ರವನ್ನು ರಾಜ್ಯದಲ್ಲಿಯೂ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ಇತ್ತೀಚಿಗೆ ಪರಭಾಷೆ ಸಿನಿಮಾಗಳಿಗೆ ಕರ್ನಾಟಕದದಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾ ಕೂಡ ಕರ್ನಾಟಕದಲ್ಲಿ ತೆರೆಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ.  ಫ್ಯಾಮಿಲಿ ಎಂಟರ್ಟೇನರ್ ಕಥಾಹಂದರ ಹೊಂದಿರುವ ಸಿನಿಮಾವನ್ನು ರಮೇಶ್ ತಮಿಳ್ಮಣಿ  ನಿರ್ದೇಶನ ಮಾಡಿದ್ದಾರೆ. ನಾಯಕ ಹರೀಶ್ ಕಲ್ಯಾಣ್, ನಾಯಕಿ ಇವಾನಾ ನಟಿಸಿದ್ದು, ಹಿರಿಯ ನಟಿ ನದಿಯಾ, ಯೋಗಿ ಬಾಬು ಮತ್ತು ಆರ್‌ಜೆ ವಿಜಯ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. 

ರಮೇಶ್ ತಮಿಳ್ಮಣಿ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ. ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ಶೀಘ್ರದಲ್ಲೇ ಆಡಿಯೋ ಹಾಗೂ ಟ್ರೇಲರ್‌ನ್ನು ಚಿತ್ರತಂಡ ಬಿಡುಗಡೆ ಮಾಡಲಿದೆ.ಚಿತ್ರೀಕರಣ ಮುಗಿಸಿರುವ ಈ ಸಿನಿಮಾ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯಕ್ರಮಗಳನ್ನು ಮುಗಿಸುತ್ತಿದೆ. ಸದ್ಯದಲ್ಲೇ ಟ್ರೇಲರ್ ಮತ್ತು ಆಡಿಯೋ ಬಿಡುಗಡೆ ಮಾಡಲು ನಿರ್ಮಾಪಕರು ತಯಾರಿ ನಡೆಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ಸಾಕ್ಷಿ ಧೋನಿ ಭಾಗವಹಿಸಲಿದ್ದಾರೆ.

ಧೋನಿ ನಿರ್ಮಾಣದ Lets Get Married ಚಿತ್ರದ ಟೀಸರ್​ ಬಿಡುಗಡೆ: ಫ್ಯಾನ್ಸ್​ ಫಿದಾ

ಈ ಸಂದರ್ಭದಲ್ಲಿ ಚಿತ್ರ ನಿರ್ದೇಶಕ ರಮೇಶ್ ತಮಿಳ್ ಮಣಿ ಮಾತನಾಡಿ, ಎಲ್ ಜಿಎಂ ಸಿನಿಮಾವನ್ನು ಕುಟುಂಬ ಸಮೇತರಾಗಿ ನೋಡುವಂತಹ ಕಾಮಿಡಿ ಫ್ಯಾಮಿಲಿ ಡ್ರಾಮಾ ಮಾಡುತ್ತಿದ್ದೇವೆ. ಸಿನಿಮಾ ಪ್ರೇಕ್ಷಕರನ್ನು ನಗಿಸುತ್ತಲೇ ಅವರ ಮನ ಮುಟ್ಟುತ್ತದೆ. LGM ಚಿತ್ರಕ್ಕೆ ಪ್ರೇಕ್ಷಕರು ತಮ್ಮ ಪ್ರೀತಿ ಮತ್ತು ಬೆಂಬಲವನ್ನು ನೀಡುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.

ಕೈ ಕೊಯ್ದುಕೊಂಡ ಪ್ರಭಾಸ್ ಅಭಿಮಾನಿ: ಇದು ಅತಿರೇಕದ ಅಭಿಮಾನವೆಂದ ಜನ

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಗಳಗಳನೆ ಅತ್ತ ಕಾವ್ಯಾ; ಟಾಸ್ಕ್‌ ಗೆದ್ದ ಗಿಲ್ಲಿ, ಸ್ನೇಹದಲ್ಲಿ ಸೋತ!
Bigg Boss ಬಗ್ಗೆ ನಂಬಲಸಾಧ್ಯ, ಯಾರೂ ಹೇಳದ ಗುಟ್ಟುಗಳನ್ನು ರಿವೀಲ್​ ಮಾಡಿದ ಅಭಿಷೇಕ್​ ಶ್ರೀಕಾಂತ್​