Naa Ninna Bidalare: ಮಾತು ಬಾರದ ಬಾಲಕಿ ಅಮ್ಮಾ ಎಂದಾಗ... 'ನಾನಿನ್ನ ಬಿಡಲಾರೆ' ಹಿತಾ ನಟನೆಗೆ ವೀಕ್ಷಕರ ಕಣ್ಣೀರು!

Published : Jun 13, 2025, 10:46 PM IST
Naa Ninna Bidalare Hita

ಸಾರಾಂಶ

ನಾ ನಿನ್ನ ಬಿಡಲಾರೆ ಸೀರಿಯಲ್​ನಲ್ಲಿ ಮೂಕಿಯಾಗಿ ನಟಿಸ್ತಿರೋ ಹಿತಾ ಉರ್ಫ್​ ಮಹಿತಾ ನಟನೆಗೆ ಇನ್ನಿಲ್ಲದಂತೆ ಶ್ಲಾಘನೆಗಳ ಮಹಾಪೂರವೇ ಹರಿದುಬಂದಿದೆ. ಯಾರೀ ಬಾಲಕಿ? ಈಕೆಯ ಇಂಟರೆಸ್ಟಿಂಗ್​ ಸ್ಟೋರಿ. 

ಶರತ್ ಮತ್ತು ಅಂಬಿಕಾ ದಂಪತಿಗೆ ಮಗಳು ಹಿತಾಳೇ ಸರ್ವಸ್ವ. ಆದರೆ, ಈ ಮುದ್ದಾದ ಸಂಸಾರಕ್ಕೆ ಕೊಳ್ಳಿ ಇಟ್ಟವಳು ಮಾಯಾ. ಶರತ್‌ನನ್ನು ತನ್ನ ವಶಮಾಡಿಕೊಳ್ಳಬೇಕು ಎಂಬ ಆಸೆಯಿಂದ ಆಕೆ ಅಂಬಿಕಾಳನ್ನು ಮಾಯಾ ಸಾಯಿಸುತ್ತಾಳೆ. ಅಮ್ಮನ ಸಾವನ್ನು ಕಂಡ ಹಿತಾ, ಅದೇ ಶಾಕ್​ನಲ್ಲಿ ಮೂಕಿಯಾಗುತ್ತಾಳೆ. ಅಮ್ಮನ ಪ್ರೀತಿಯಿಲ್ಲದೇ ಬೆಳೆಯುವ ಹಿತಾ, ತನ್ನ ಅಮ್ಮನ ಸಾವಿಗೆ ತಂದೆಯೇ ಕಾರಣ ಎಂದುಕೊಂಡು ಮಾತು ಬಿಡುತ್ತಾಳೆ. ಇತ್ತ ಮಾಯಾ ತನ್ನ ದಾರಿಗೆ ಹಿತಾ ಅಡ್ಡವಾಗಿದ್ದಾಳೆ ಎಂದು ಅವಳನ್ನು ಕೊಲ್ಲುವುದಕ್ಕೆ ಸಂಚು ರೂಪಿಸುತ್ತಾಳೆ. ಯಾವಾಗ ಹಿತಾಳಿಗೆ ತೊಂದರೆಯಾಗುತ್ತದೆ ಅಂತ ಗೊತ್ತಾಗುತ್ತದೋ, ಆಗ ಸತ್ತುಹೋದ ತಾಯಿ ಅಂಬಿಕಾ ಆಕೆಯ ರಕ್ಷಣೆಗೆ ನಿಲ್ಲಿತ್ತಾಳೆ. ಆತ್ಮವಾಗಿ ಮಗಳ ರಕ್ಷಣೆಯಲ್ಲಿ ತೊಡಗುತ್ತಾಳೆ. ಪತಿಯ ಕಚೇರಿಯಲ್ಲಿ ಕೆಲಸ ಮಾಡುವ ದುರ್ಗಾಳ ಗುಣ ಇಷ್ಟವಾಗಿ ಹಿತಾಳಿಗೆ ಅಮ್ಮನ ಪ್ರೀತಿ ಅವಳು ಕೊಡಲು ಸಾಧ್ಯ ಎಂದು ಅವಳಿಗೆ ಮಾತ್ರ ಕಾಣಿಸಿಕೊಳ್ಳುತ್ತಾಳೆ ಅಂಬಿಕಾ. ಆದರೆ ಇದರ ಅರಿವು ದುರ್ಗಾಗೆ ಇರುವುದೇ ಇಲ್ಲ. ಆದರೆ ಆಕೆ ಹಿತಾಳಿಗೆ ಅಮ್ಮನ ಪ್ರೀತಿ ಕೊಡುತ್ತಾಳೆ. ಇದೀಗ ಹಿತಾಳನ್ನು ಅಪಘಾತದಿಂದ ತಪ್ಪಿಸಲು ಹೋಗಿ ತಾನೇ ಅಪಘಾತದಲ್ಲಿ ಸಿಲುಕಿಕೊಳ್ಳುತ್ತಾಳೆ.

ಇದು ಜೀ ಕನ್ನಡದಲ್ಲಿ ಪ್ರಸಾರ ಆಗ್ತಿರೋ ನಾನಿನ್ನ ಬಿಡಲಾರೆ ಸೀರಿಯಲ್​ ಸ್ಟೋರಿ. ಇದರಲ್ಲಿ ಮಗಳು ಹಿತಾ ಆಗಿ ನಟನೆ ಮಾಡ್ತಿರೋ ಬಾಲಕಿ ಹೆಸರು ಮಹಿತಾ. ಈ ಹಿಂದೆ ನನ್ನಮ್ಮ ಸೂಪರ್ ಸ್ಟಾರ್ ಸೇರಿದಂತೆ ಕೆಲ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದ ಮಹಿತಾ, ನಂತರ ಚುಕ್ಕಿತಾರೆ ಧಾರಾವಾಹಿಯಲ್ಲಿ ಲೀಡ್‌ ರೋಲ್‌ನಲ್ಲಿ ಕಾಣಿಸಿಕೊಂಡಿದ್ದಳು. ಸದಾ ನಟನೆಯಲ್ಲಿ ಮಿಂಚುತ್ತಿರುವ ಮಹಿತಾಳಿಗೆ ಇದೀಗ ಶ್ಲಾಘನೆಗಳ ಮಹಾಪೂರವೇ ಹರಿದು ಬಂದಿದೆ. ನಾನಿನ್ನ ಬಿಡಲಾರೆ ಸೀರಿಯಲ್​ನಲ್ಲಿ ಮೂಕಿಯಾಗಿ ಸಕತ್​ ನಟನೆಯಿಂದ ಮಿಂಚುತ್ತಿರೋ ಹಿತಾ, ಈಗ ದುರ್ಗಾಳನ್ನು ಹೇಗಾದರೂ ಮಾಡಿ ರಕ್ಷಿಸಿಕೊಳ್ಳುವ ಪಣ ತೊಟ್ಟಿದ್ದಾಳೆ. ಹೇಳಿ ಕೇಳಿ ಇರುವ ಆತ್ಮ, ದೇವರು, ಮಾಟ-ಮಂತ್ರದ ಕಥೆ. ದೇವಿಯೇ ಅಜ್ಜಿಯ ರೂಪದಲ್ಲಿ ಬಂದು ನೀನು ದುರ್ಗಾಳನ್ನು ಉಳಿಸಿಕೊಳ್ಳಬೇಕು ಎಂದರೆ ಮಾತನಾಡಲೇಬೇಕು ಎಂದು ಹಿತಾಗೆ ಹೇಳುತ್ತಾಳೆ.

ಮೂಕಿಯಾಗಿರೋ ಹಿತಾ, ಮಾತನಾಡಲು ಪ್ರಯತ್ನ ಪಡುವ ರೀತಿ, ಕೊನೆಗೆ ಅಮ್ಮಾ ಎಂದು ಕೂಗುವ ರೀತಿ ಎಂಥವರ ಕಣ್ಣಲ್ಲೂ ನೀರು ತರಿಸುವಂತಿದೆ. ಪುಟಾಣಿ ಮಹಿತಾಳ ಈ ನಟನೆಗೆ ಹಾರ್ಟ್​ ಇಮೋಜಿಗಳಿಂದ ಕಮೆಂಟ್​ ಬಾಕ್ಸ್​ ತುಂಬಿಹೋಗಿದೆ. ಈ ವಾರದ ಚಪ್ಪಾಳೆ ಹಿತಾ ಪುಟ್ಟಿಗೆ ಎನ್ನುತ್ತಿದ್ದಾರೆ ನೆಟ್ಟಿಗರು. ಅಂದಹಾಗೆ ಮಹಿತಾ, ಸ್ಕೂಲ್ ಮತ್ತು ಸೀರಿಯಲ್‌ ಎರಡನ್ನೂ ಮ್ಯಾನೇಜ್ ಮಾಡುತ್ತಿದ್ದಾಳೆ. ಈ ಕುರಿತು ಹಿಂದೊಮ್ಮೆ ಈಕೆಯ ಅಮ್ಮ ತನುಜಾ ಮಾಧ್ಯಮದ ಜೊತೆ ಮಾತನಾಡಿದ್ದರು. 'ಚಿಕ್ಕ ವಯಸ್ಸಿನಲ್ಲಿ ಮಹಿತಾಗೆ ಹಾಡಿನಲ್ಲಿ ತುಂಬಾ ಆಸಕ್ತಿ ಇತ್ತು. ಕೋವಿಡ್​ ಸಮಯದಲ್ಲಿ ನಾನು ಜನರಿಗೆ ಅರಿವು ಮೂಡಿಸುವ ವಿಡಿಯೋ ಮಾಡುತ್ತಿದ್ದ ವೇಳೆ ಅವಳಲ್ಲಿ ಇದ್ದ ನಟನೆಯ ಕಲೆಯನ್ನು ಗುರುತಿಸಿದೆ. ಮಗಳು ಬರೀ ಓದಬೇಕು ಎಂದು ನಾನು ಯಾವತ್ತೂ ಒತ್ತಡ ಹಾಕುವುದಿಲ್ಲ. ಆಕೆಗೆ ಯಾವುದೇ ಟ್ಯಾಲೆಂಟ್ ಇದ್ದರೂ ಸಪೋರ್ಟ್ ಮಾಡಬೇಕು ಅನ್ನೋ ಆಸೆ ನನಗೆ ಇತ್ತು. ಅದರಂತೆಯೇ ಅವಳ ಆಸಕ್ತಿಗೆ ನೀರೆರೆದೆ. ಅವರಿಗೆ ಒಳ್ಳೆಯ ವೇದಿಕೆಯೂ ಸಿಗುತ್ತಾ ಹೋಯಿತು ಎಂದಿದ್ದರು. ಅವಳ ಹಣೆಯಲ್ಲಿ ನಟಿಯಾಗುವುದೇ ಬರೆದಿದ್ದರೆ ಅದೇ ಆಗುತ್ತಾಳೆ. ಅವಳಿಗೆ ಏನೇ ಆಸಕ್ತಿ ಇದ್ದರೂ ಆ ಕ್ಷೇತ್ರದಲ್ಲಿ ನಾವು ಮುಂದುವರೆಯಲು ಬಿಡುತ್ತೇವೆ ಎಂದಿದ್ದರು.

 

ಇನ್ನು ನಾನಿನ್ನ ಬಿಡಲಾರೆ ಸೀರಿಯಲ್ ವಿಷ್ಯಕ್ಕೆ ಬರುವುದಾದರೆ, ಪಾರು ಸೀರಿಯಲ್‌ ಮೂಲಕ ಮನೆಮಾತಾಗಿದ್ದ ಶರತ್ ಪದ್ಮನಾಭ್ ಶರತ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಕ್ರಾಂತ್ ರೋಣ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದ ನೀತಾ ಅಶೋಕ್, ಹಿತಾ ಅಮ್ಮ ಅಂಬಿಕಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರೆ, ದುರ್ಗಾಗಳಾಗಿ ರಿಷಿಕಾ ಕಾಣಿಸಿಕೊಂಡಿದ್ದಾರೆ. ರುಹಾನಿ ಶೆಟ್ಟಿ ಈ ಸೀರಿಯಲ್‌ನ ಖಳನಾಯಕಿ. ಉಳಿದಂತೆ ಕುಟುಂಬದ ಯಜಮಾನಿಯ ಪಾತ್ರದಲ್ಲಿ ವೀಣಾ ಸುಂದರ್ ಕಾಣಿಸಿಕೊಂಡಿದ್ದು, ಅವರದ್ದು ಕೂಡ ನೆಗೆಟಿವ್ ರೋಲ್. ರಂಗಭೂಮಿ ಕಲಾವಿದ ಹಾಗೂ ನಟ ಬಾಬು ಹಿರಣ್ಯ ಕೂಡ ಪ್ರಮುಖ ನಟಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಅರೆರೆ! ಗೋಲ್ಡನ್‌ ಸ್ಟಾರ್‌ ಗಣೇಶ್‌ಗೆ ಇದೇನಾಯ್ತು.. ಇದ್ದಕ್ಕಿದ್ದಂತೆ ಇಬ್ಬರು ನಟಿಯರ ಜೊತೆ ಬಾಲಿವುಡ್‌ಗೆ ಹೊರಟಿದ್ಯಾಕೆ?