ಲಂಡನ್ ನಲ್ಲಿ ನಡೆದ ಪ್ರಿಯಾಂಕ ಚೋಪ್ರಾ ನಿಶ್ಚಿತಾರ್ಥ : ವರ ಯಾರು..?

Published : Jul 28, 2018, 08:24 AM IST
ಲಂಡನ್ ನಲ್ಲಿ ನಡೆದ ಪ್ರಿಯಾಂಕ ಚೋಪ್ರಾ ನಿಶ್ಚಿತಾರ್ಥ : ವರ ಯಾರು..?

ಸಾರಾಂಶ

ಬಾಲಿವುಡ್ ಬ್ಯೂಟಿ ಪ್ರಿಯಾಂಕ ಚೋಪ್ರಾ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಲಂಡನ್ ನಲ್ಲಿ ತಮ್ಮ ಗೆಳೆಯನ ಜೊತೆ ಉಂಗುರ ಬದಲಾಯಿಸಿಕೊಂಡಿದ್ದು ವರ್ಷಾಂತ್ಯದ ವೇಳೆಗೆ ವಿವಾಹ ನೆರವೇರುವ ಸಾಧ್ಯತೆ ಇದೆ. 

ವಾಷಿಂಗ್ಟನ್: ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಗೆಳೆಯ ಗಾಯಕ, ನಟ ನಿಕ್ ಜೊನಾಸ್ ಜೊತೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ 36ನೇ ವರ್ಷಕ್ಕೆ ಕಾಲಿಟ್ಟ ಪ್ರಿಯಾಂಕಾ, ಅದೇ ಸಂದರ್ಭದಲ್ಲಿ ಲಂಡನ್‌ನಲ್ಲಿ ಅಮೆರಿಕ ಮೂಲದ ತನ್ನ ಗೆಳೆಯನ ಜೊತೆ ಉಂಗುರ ಬದಲಾಯಿಸಿಕೊಳ್ಳುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಅಮೆರಿಕ ಮೂಲದ ಪತ್ರಿಕೆಯೊಂದು ವರದಿ ಮಾಡಿದೆ.

2017 ರ ಅಂತ್ಯದಲ್ಲಿ ಅಮೆರಿಕದಲ್ಲಿ ಪರಿಚಯದವರ ಕಾರ್ಯಕ್ರಮವೊಂದರಲ್ಲಿ ಪ್ರಿಯಾಂಕಾ ಮತ್ತು ನಿಕ್ ಮೊದಲ ಬಾರಿ ಭೇಟಿಯಾಗಿದ್ದರು. ಈ ವೇಳೆ ಅವರ ನಡುವೆ ಪ್ರೇಮಾಂಕುರವಾಗಿತ್ತು. ಬಳಿಕ ಇಬ್ಬರೂ ಹಲವು ಕಡೆಗೆ ಒಟ್ಟಿಗೆ ಕಾಣಿಸಿಕೊಂಡಿದ್ದರು.

ಅಲ್ಲದೆ ಪ್ರಿಯಾಂಕಾ ಇತ್ತೀಚೆಗೆ ನಿಕ್‌ರನ್ನು ಮುಂಬೈಗೆ ಕರೆತಂದು ತಮ್ಮ ಕುಟುಂಬ ಸದಸ್ಯರನ್ನು ಭೇಟಿ ಕೂಡಾ ಮಾಡಿಸಿದ್ದರು. ಅದರ ಬೆನ್ನಲ್ಲೇ ಈ ಶುಭ ಸುದ್ದಿ ಹೊರಬಿದ್ದಿದೆ. ಆದರೆ ನಿಶ್ಚಿತಾರ್ಥದ ಕುರಿತು ಪ್ರಿಯಾಂಕಾ  ಅಥವಾ ನಿಕ್‌ರಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಮೂಲಗಳ ಪ್ರಕಾರ ವರ್ಷಾಂತ್ಯಕ್ಕೆ ಇಬ್ಬರ ವಿವಾಹ ನಡೆಯುವ ಸಾಧ್ಯತೆ ಇದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅಮಿತಾಭ್ 14 ಚಿತ್ರಗಳ ರೀಮೇಕ್ ಮಾಡಿ, 33 ವರ್ಷಗಳ ಬಳಿಕ ಅಮಿತಾಭ್ ಜೊತೆ ನಟಿಸಿದ ನಟ ರಜನಿಕಾಂತ್!
ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!