ಒಳ್ಳೆಯದಾಗಲಿ ಮೊಮ್ಮಗನೇ.. ನಿಖಿಲ್ ಕುಮಾರ್ ಹೊಸ ಸಿನಿಮಾಕ್ಕೆ ದೇವೇಗೌಡ ಚಾಲನೆ

Published : Aug 25, 2023, 08:03 AM IST
ಒಳ್ಳೆಯದಾಗಲಿ ಮೊಮ್ಮಗನೇ.. ನಿಖಿಲ್ ಕುಮಾರ್ ಹೊಸ ಸಿನಿಮಾಕ್ಕೆ ದೇವೇಗೌಡ ಚಾಲನೆ

ಸಾರಾಂಶ

ನಿಖಿಲ್ ಕುಮಾರ್ ನಟನೆಯ ಹೊಸ ಸಿನಿಮಾದ ಮುಹೂರ್ತ ನಡೆದಿದೆ. ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.   

ನಿಖಿಲ್ ಕುಮಾರ್ ನಟನೆಯ ಹೊಸ ಸಿನಿಮಾದ ಮುಹೂರ್ತ ನಡೆದಿದೆ. ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಚಿತ್ರದ ಕುರಿತು ಮಾತನಾಡಿದ ನಿಖಿಲ್ ಕುಮಾರ್, ‘ಈ ಸಿನಿಮಾದ ಮೂಲಕ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಕನ್ನಡಕ್ಕೆ ಬಂದಿದೆ. ಸಂಸ್ಥೆಯ ಮುಖಂಡ ಸುಭಾಸ್ಕರನ್ ‘ಸೀತಾರಾಮ ಕಲ್ಯಾಣ’ ಸಿನಿಮಾದ ಆಡಿಯೋ ಬಿಡುಗಡೆಗೆ ಬಂದು ತಮ್ಮ ಸಂಸ್ಥೆಯ ಸಿನಿಮಾದಲ್ಲಿ ನಟಿಸಬೇಕು ಎಂದು ಕೇಳಿಕೊಂಡಿದ್ದರು. 

ಅದು ಈಗ ನೆರವೇರುತ್ತಿದೆ. ನಿರ್ದೇಶಕ ಲಕ್ಷ್ಮಣ್ ಒಂದು ವರ್ಷದಿಂದ ಬೆಂಗಳೂರಿನಲ್ಲೇ ಇದ್ದು ಕೆಲಸ ಮಾಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಹೆಚ್ಚಿನ ಮಾಹಿತಿ ನೀಡುತ್ತೇವೆ’ ಎಂದರು. ತಮ್ಮ‌ ತಂಡವನ್ನು ಪರಿಚಯಿಸುತ್ತಾ ಮಾತು ಪ್ರಾರಂಭಿಸಿದ ನಿರ್ದೇಶಕ ಲಕ್ಷ್ಮಣ್, ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ನಾನು ಬರೆದ ಕಥೆಯನ್ನು ಒಪ್ಪಿ ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ನಿರ್ಮಾಪಕರಿಗೆ ಹಾಗೂ ನಾಯಕ ನಿಖಿಲ್ ಕುಮಾರ್ ಅವರಿಗೆ ಧನ್ಯವಾದ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ನೀಡುವ ನಂಬಿಕೆ ಇದೆ.

ರಾಜ್ಯ ಪ್ರಶಸ್ತಿಯ ಸಾಕ್ಷ್ಯಚಿತ್ರ ವಿಭಾಗ ನಿಯಮ ಬದಲಿಸಿ: ಅನಿರುದ್ಧ ಜತ್ಕರ್‌

ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ವಿವರಣೆ ನೀಡುತ್ತೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು. ಈ ಚಿತ್ರದಲ್ಲಿ ನಟಿಸುವಂತೆ ನಿಖಿಲ್ ಅವರು ಹೇಳಿದರು. ನಾನು ಕಥೆ ಕೇಳಿ ಒಪ್ಪಿಕೊಂಡೆ. ಕಥೆ ಚೆನ್ನಾಗಿದೆ ಎಂದು ನಟ ಕೋಮಲ್ ತಿಳಿಸಿದರು. ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಕನ್ನಡ ಚಿತ್ರವಿದು. ಚಿತ್ರ ಯಶಸ್ವಿಯಾಗಲಿ ಎಂದು ಲೈಕಾ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ಸುಭಾಸ್ಕರನ್  ಹಾರೈಸಿದರು. ನಾಯಕಿ ಯುಕ್ತಿ ತರೇಜ ಸಹ ನೂತನ ಚಿತ್ರದ ಕುರಿತು ಮಾತನಾಡಿದರು. ಹಲವಾರು ತಂತ್ರಜ್ಞರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. 

ಮಗು ಇರುವೆಯನ್ನು ಚುಚ್ಚಿ ಸಾಯಿಸುತ್ತೆ, ಅದು ಕ್ರೌರ್ಯ: ರಾಜ್ ಬಿ ಶೆಟ್ಟಿ ಹೀಗೆ ಹೇಳಿದ್ಯಾಕೆ?

ಕಾಂತಾರ ಮತ್ತು ವಿಕ್ರಾಂತ್ ರೋಣ ಸಿನಿಮಾಗಳ ಸಂಗೀತಕ್ಕಾಗಿ ಮೆಚ್ಚುಗೆ ಪಡೆದ ಅಜನೀಶ್ ಲೋಕನಾಥ್ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಲಿದ್ದು, ವಂಶಿ ಪಚ್ಚಿಪುಲುಸು ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರದ ಸಂಭಾಷಣೆಯನ್ನು ರಘು ನಿಡುವಳ್ಳಿ ಬರೆಯಲಿದ್ದಾರೆ. ಇನ್ನು ನಿಖಿಲ್ ಕುಮಾರ್ ದೊಡ್ಡದೊಂದು ಬ್ರೇಕ್‌ಗಾಗಿ ಕಾಯುತ್ತಿದ್ದಾರೆ. ಈವರೆಗೂ ಬಂದ ಚಿತ್ರಗಳು ನಿಖಿಲ್ ಅವರಿಗೆ ಅಷ್ಟೇನೂ ಹೇಳಿಕೊಳ್ಳುವಂತಹ ಆದಾಯ ಮತ್ತು ಹೆಸರು ತಂದುಕೊಟ್ಟಿಲ್ಲ. ಹಾಗಾಗಿ ದೊಡ್ಡ ಬ್ರೇಕ್‌ಗಾಗಿಯೇ ಅವರು ಕಾಯುತ್ತಿದ್ದಾರೆ. ಒಪ್ಪಿಕೊಂಡ ಚಿತ್ರಗಳು ಅವರ ಕೈ ಹಿಡಿಯಲಿ ಎನ್ನುವುದು ಅಭಿಮಾನಿಗಳ ಆಸೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಬಸ್‌ ಅಪಘಾತದಿಂದ ಪವಾಡಸದೃಶ್ಯವಾಗಿ ಪಾರಾದ 'ರಾಧಾ ಮಿಸ್‌' ಶ್ವೇತಾ ಪ್ರಸಾದ್‌!
BBK 12 Video: ಸ್ನಾನ ಮಾಡದೇ ತೆಪ್ಪಗೆ ಕುಳಿತ ಸೂರಜ್; ಫ್ಲೈಯಿಂಗ್ ಕಿಸ್ ಕೊಟ್ಟು ಸಂತಸಪಟ್ಟ ರಕ್ಷಿತಾ ಶೆಟ್ಟಿ!