
ಬೆಂಗಳೂರು : ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿರುದ್ಧ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಕಾರಣವಾಗಿದ್ದು, ನಟ ಪುನೀತ್ ರಾಜಕುಮಾರ್ ಅವರು ತಮ್ಮ ಹೊಸಚಿತ್ರಕ್ಕಾಗಿ ಹೇರ್ ಸ್ಟೈಲ್ನಲ್ಲಿ ಬದಲಾವಣೆ ಮಾಡಿರುವುದೇ ಆಗಿದೆ.
ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ಹೊಸ ಚಿತ್ರಕ್ಕಾಗಿ ಪುನೀತ್ ಈ ರೀತಿಯ ಹೊಸ ಕೇಶ ವಿನ್ಯಾಸ ಮಾಡಿಸಿದ್ದಾರೆ. ಆದರೆ ಪುನೀತ್ ರಾಜಕುಮಾರ್ ಅವರಿಗೆ ಇದು ಬೇಕಿರಲಿಲ್ಲ ಎಂದು ರಮೇಶ್ ಗೌಡ ಬಹಿರಂಗವಾಗಿಯೇ ಹೇಳಿದ್ದಾರೆ.
ಏಕೆಂದರೆ ನಾವು ಪುನೀತ್ರಲ್ಲಿ ಡಾ. ರಾಜಕುಮಾರ್ ಅವರನ್ನ ಕಾಣುತ್ತಿದ್ದೇವೆ. ಅವರು ಸರಳವಾಗಿಯೇ ತಮ್ಮ ಚಿತ್ರಗಳಲ್ಲಿ ಕಾಣಿಸಿಕೊಂಡು ಜನಸಾಮಾನ್ಯರಿಗೆ, ಸಮಾಜಕ್ಕೆ ಒಳ್ಳೆಯ ಸಂದೇಶ ಕೊಟ್ಟಿದ್ದಾರೆ. ಆದರೆ ಚಿತ್ರ ಗೆಲ್ಲುವುದಕ್ಕೆ ಇಂತಹ ಗಿಮಿಕ್ ಬೇಕಿಲ್ಲ ಎಂದು ತಮ್ಮ ಕಾಮೆಂಟ್ನಲ್ಲಿ ತಿಳಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.