
ಇಸ್ಲಾಮಾಬಾದ್ (ಮೇ. 25): ರಂಜಾನ್ ಹಬ್ಬದ ಪ್ರಯುಕ್ತ ಬಾಲಿವುಡ್ ಚಿತ್ರಗಳಿಗೆ ಪಾಕಿಸ್ತಾನ ತಾತ್ಕಾಲಿಕ ನಿಷೇಧ ಹೇರಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಪಾಕಿಸ್ತಾನ ಮಾಹಿತಿ ಮತ್ತು ಪ್ರಸಾರ ಇಲಾಖೆ, ರಂಜಾನ್ ಹಬ್ಬ ಮುಗಿಯುವವರೆಗೂ ಬಾಲಿವುಡ್ ಚಿತ್ರಗಳ ಪ್ರದರ್ಶನಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಪಾಕಿಸ್ತಾನ ಚಿತ್ರ ವಿತರಕ ಸಂಘದ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಕೇವಲ ಬಾಲಿವುಡ್ ಮಾತ್ರವಲ್ಲದೇ ಹಾಲಿವುಡ್ ಸಿನಿಮಾ ಪ್ರದರ್ಶನಕ್ಕೂ ಅನುಮತಿ ನಿರಾಕರಿಸಲಾಗಿದೆ. ಹಬ್ಬದ ಪ್ರಯುಕ್ತ ರಜೆ ಇರುವುದರಿಂದ ಈ ಸಂದರ್ಭ ಬಳಸಿಕೊಂಡು ಪಾಕಿಸ್ತಾನದ ಚಿತ್ರಗಳಿಗೆ ಮಾರುಕಟ್ಟೆ ಒದಗಿಸುವ ಮೂಲಕ ಚಿತ್ರರಂಗದ ಬೆಳವಣಿಗೆಗೆ ಸರ್ಕಾರ ಮುಂದಾಗಿದೆ.
ಪಾಕಿಸ್ತಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಬಾಲಿವುಡ್ ಮತ್ತು ಹಾಲಿವುಡ್ ಚಿತ್ರಗಳ ಹಾವಳಿ ಹೆಚ್ಚಾಗಿದ್ದು, ದೇಶೀಯ ಸಿನಿಮಾ ಮಾರುಕಟ್ಟೆಗೆ ಭಾರೀ ಹೊಡೆತ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಜಾ ದಿನ ಗಮನದಲ್ಲಿರಿಸಿ ಬಾಲಿವುಡ್ ಮತ್ತು ಹಾಲಿವುಡ್ ಸಿನಿಮಾ ಪ್ರದರ್ಶನಕ್ಕೆ ನಿಷೇಧ ಹೇರಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.