'RCB ತರನೇ ಬೆಂಗಳೂರು ಜವಾನ್ಸ್'.. ಕುಕ್ಕೆ ಸುಬ್ರಹ್ಮಣ್ಯ ಆರಾಧಕ ಅಟ್ಲಿ ಬೆಂಗಳೂರಿನ ಬಗ್ಗೆ ಅಭಿಮಾನದ ನುಡಿ!

Published : Oct 10, 2025, 07:18 PM IST
Atlee Kumar Pickleball in India

ಸಾರಾಂಶ

ಕಳೆದ ಬಾರಿ ಭಾರತದ ಮೊಟ್ಟ ಮೊದಲ ಪಿಕಲ್ ಬಾಲ್ ಲೀಗ್ ಅನ್ನು ಕರ್ನಾಟಕ ಸ್ಟೇಟ್ ಪಿಕಲ್ ಬಾಲ್ ಅಸೋಸಿಯೇಷನ್ ಸಾರಥ್ಯದಲ್ಲಿ ಯಶಸ್ವಿಯಾಗಿ ಮಾಡಲಾಗಿತ್ತು. ಇದೀಗ ಎರಡನೇ ಪಿಕಲ್ ಬಾಲ್ ಲೀಗ್ ಆವೃತ್ತಿಗೆ ಚಾಲನೆ ನೀಡಲಾಗಿದೆ.

ಪಿಕಲ್ ಬಾಲ್ ಆಟ ಆಡಿದ ಬೆಂಗಳೂರು ಜವಾನ್ಸ್ ತಂಡದ ಮಾಲಿಕ ಅಟ್ಲಿ ಕುಮಾರ್!

ಬೆಂಗಳೂರು ಒಪನ್ 2025 ವರ್ಲ್ಡ್ ಪಿಕಲ್ ಬಾಲ್ ಲೀಗ್ ಉದ್ಘಾಟಿಸಿದ ಜವಾನ್ ಡೈರೆಕ್ಟರ್ ಅಟ್ಲಿ ಕುಮಾರ್ ಅವರು, 'ಕಾಂತಾರ ಚಾಪ್ಟರ್ 1' ಅದ್ಭುತ ಸಿನಿಮಾ ಎಂದು ಪ್ರಶಂಸಿಸಿದ್ದಾರೆ. ಜೊತೆಗೆ, ಯಶ್ ಹಾಗೂ ರಿಷಬ್ ಶೆಟ್ಟಿ ಬಗ್ಗೆ ವಿಶೇಷವಾಗಿ ಮಾತನ್ನಾಡಿದ್ದಾರೆ.

ಇದೇ ವೇಳೆ, RCBತರನೇ ಬೆಂಗಳೂರು ಜವಾನ್ಸ್, ಕುಕ್ಕೆ ಸುಬ್ರಹ್ಮಣ್ಯ ಆರಾಧಕ ಅಟ್ಲಿ ಬೆಂಗಳೂರಿನ ಬಗ್ಗೆ ಅಭಿಮಾನದ ನುಡಿ!

ರಾಜರಾಣಿ, ತೇರಿ, ಬಿಗಿಲ್, ಜವಾನ್ ಖ್ಯಾತಿಯ ಹಾಗೂ ಅಲ್ಲು ಅರ್ಜುನ್ ಮುಂದಿನ ಚಿತ್ರದ ನಿರ್ದೇಶಕ‌

ನಿರ್ದೇಶಕ ಅಟ್ಲಿ ಕುಮಾರ್ ರಿಂದ ವರ್ಲ್ಡ್ ಪಿಕಲ್‌ಬಾಲ್ ಲೀಗ್ ಬೆಂಗಳೂರು ಒಪನ್ 2025 ನಲ್ಲಿ ಅಟ್ಲಿ ಮಾಲಿಕತ್ವದ ಬೆಂಗಳೂರು ಜವಾನ್ಸ್ ತಂಡ ಆಡುತ್ತಿದೆ. ಈ ಕಾರ್ಯಕ್ರಮವನ್ನ ಇಂದು ಬೆಂಗಳೂರಿನ ಪಿಕಲ್ ಬಾಲ್ ಕ್ಲಬ್ ನಲ್ಲಿ‌ ಚಾಲನೆ ನೀಡಲಾಯಿತು.

ಕಳೆದ ಬಾರಿ ಭಾರತದ ಮೊಟ್ಟ ಮೊದಲ ಪಿಕಲ್ ಬಾಲ್ ಲೀಗ್ ಅನ್ನು ಕರ್ನಾಟಕ ಸ್ಟೇಟ್ ಪಿಕಲ್ ಬಾಲ್ ಅಸೋಸಿಯೇಷನ್ ಸಾರಥ್ಯದಲ್ಲಿ ಯಶಸ್ವಿಯಾಗಿ ಮಾಡಲಾಗಿತ್ತು. ಇದೀಗ ಎರಡನೇ ಪಿಕಲ್ ಬಾಲ್ ಲೀಗ್ ಆವೃತ್ತಿಗೆ ಚಾಲನೆ ನೀಡಲಾಗಿದೆ. ಅದ್ರಂತೆ ಅಕ್ಟೋಬರ್ 10ರಿಂದ 12 ತಾರೀಖ್ ತನಕ ರೋಚಕ ಪಿಕಲ್ ಬಾಲ್ ಪಂದ್ಯಾವಳಿಗಳು ನಡೆಯಲಿವೆ.

ಅಟ್ಲಿ ಕುಮಾರ್ ಬೆಂಗಳೂರು ಜವಾನ್ಸ್ ಹೆಸರಿನ ತಂಡವನ್ನು ಖರೀದಿ

ಈ ವಿಚಾರವಾಗಿ ಬೆಂಗಳೂರಿಗೆ ಆಗಮಿಸಿದ ತಮಿಳು ಸಿನಿಮಾರಂಗದ ಹೆಸರಾಂತ ನಿರ್ದೇಶಕ ಜವಾನ್ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿದ ಅಟ್ಲಿ ಕುಮಾರ್ ಬೆಂಗಳೂರು ಜವಾನ್ಸ್ ಹೆಸರಿನ ತಂಡವನ್ನು ಖರೀದಿ ಮಾಡಿದ್ದಾರೆ. ಕಳೆದ ವರ್ಷ ಆರ್.ಸಿ ಬಿ ತಂಡ ಐಪಿಎಲ್ ಟ್ರೋಫಿ ಗೆದ್ದತ್ತು.. ಬೆಂಗಳೂರು ಜವಾನ್ಸ್ ಕೂಡ ಚಾಂಪಿಯನ್ಸ್ ಆಗಿತ್ತು.

ಬೆಂಗಳೂತು ಒಪನ್ 2025 ವರ್ಲ್ಡ್ ಪಿಕಲ್ ಬಾಲ್ ಲೀಗ ಉದ್ಘಾಟಿಸಿ, ಸ್ಫರ್ಧಾಳುಗಳ ಜತೆ ಸ್ನೇಹಪೂರ್ವಕ ಮ್ಯಾಚ್ ಆಡಿದ ‌ಅಟ್ಲಿ ಕುಮಾರ್,‌ ನಾನು ಆರ್.ಸಿ .ಬಿ ಫ್ಯಾನ್. ಬೆಂಗಳೂರು ತಂಡ ಕಳೆದ ಬಾರಿ ಐಪಿಎಲ್ ಕಪ್ ಗೆದ್ದಿತ್ತು.. ಅದರಂತೆ ನಮ್ಮ ತಂಡ ಬೆಂಗಳೂರು ಜವಾನ್ಸ್ ತಂಡ ಕೂಡ ಗೆದ್ದಿತ್ತು. ಬೆಂಗಳೂರು ಸಿಟಿ ಅಂದ್ರೆ ನಂಗೆ ತುಂಬಾ ಇಷ್ಟ. ಇಲ್ಲಿನ ಸಿನಿಮಾ ನಟರಾದ ಯಶ್, ರಿಷಬ್ ಶೆಟ್ಟಿ ಮುಂತಾದವರ ಜೊತೆಗೆ ನನಗೆ ಉತ್ತಮ ಸ್ನೇಹವಿದೆ. ಎಲ್ಲರೂ ಅದ್ಭುತವಾಗಿ ಕೆಲಸ ಮಾಡ್ತಾ ಇದ್ದಾರೆ.

ಕಾಂತಾರ ನಿಜಕ್ಕೂ ಅದ್ಭುತ ಸಿನಿಮಾ!

ಕಾಂತಾರ ಅಧ್ಯಾಯ 1 ರ ಬಗ್ಗೆ ಮಾತನಾಡಿದ ಅಟ್ಲಿ ‘‘ಕಾಂತಾರ ನಿಜಕ್ಕೂ ಅದ್ಭುತ ಸಿನಿಮಾ‘‘ ನಾನು ನೋಡಿ ಬೆರಗಾಗಿದ್ದೇನೆ ಎಂದು ಮೆಚ್ಚಿಗೆ ವ್ಯಕ್ತ ಪಡಿಸಿದ್ದಾರೆ. ಮೂಲತಃ ತಮಿಳು ನಾಡಿನವರಾಗಿದ್ದರು ಅಟ್ಲಿಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಅಂದ್ರೆ ಸಖತ್ ಭಕ್ತಿ ಅಂತೆ. ಆಗಾಗ ಕುಕ್ಕೆ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆಯುತ್ತಿನಿ ಎಂದರು. ಜವಾನ್ ಸಿನಿಮಾ ಸೂಪರ್ ಹಿಟ್ ಆದ ಕಾರಣ ನಾನು ಖರೀದಿ ಮಾಡಿರುವ ಪಿಕಲ್ ಬಾಲ್ ತಂಡಕ್ಕೆ ಬೆಂಗಳೂರು ಜವಾನ್ಸ್ ಎಂದು ಹೆಸರಿಟ್ಟಿರುವೆ ಎಂದಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ
ಸಾಯಿಬಾಬ ನಟ ಸುಧೀರ್ ಆಸ್ಪತ್ರೆ ದಾಖಲು, ಚಿಕಿತ್ಸೆಗೆ 11 ಲಕ್ಷ ರೂ ನೀಡಲು ಶಿರಡಿ ಟ್ರಸ್ಟ್‌ಗೆ ಸೂಚನೆ