
ಬೆಂಗಳೂರು (ಸೆ. 27): ಬಿಂದಾಸ್ ಹುಡುಗಿ ನಟಿ ಪ್ರಿಯಾ ಹಾಸನ್ ಸಿಕ್ಕಾಪಟ್ಟೆ ಖುಷಿಯಲ್ಲಿದ್ದಾರೆ. ಅವರ ಈ ಖುಷಿಗೆ ಮೂರು ಕಾರಣಗಳಿವೆ.
ಸೆ. 24 ಕ್ಕೆ ಅವರು ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡರು. ಅದೇ ಸಮಯಕ್ಕೆ ಜರ್ಮನಿ ವಿಶ್ವವಿದ್ಯಾಲಯದಿಂದ ಅವರಿಗೆ ಗೌರವ ಡಾಕ್ಟರೇಟ್ ಪದವಿ ಸಿಕ್ಕಿದೆ. ಮತ್ತೊಂದೆಡೆ ಅವರದೇ ನಿರ್ದೇಶನ ಮತ್ತು ನಟನೆಯಲ್ಲಿ ‘ರಣ ಚತುರೆ’ ಹೆಸರಿನ ಹೊಸ ಸಿನಿಮಾ ಶುರುವಾಗುತ್ತಿದೆ.
‘ನನ್ನ ಕನ್ನಡ ಪರ ಕೆಲಸ ಸಿನಿಮಾ ಸೇವೆಯನ್ನು ಪರಿಗಣಿಸಿ ಜರ್ಮನಿ ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ. ಇದು ನನ್ನ ಜೀವನದ ಮಹತ್ತರ ಘಟನೆ’ ಎನ್ನುತ್ತಾರೆ ಪ್ರಿಯಾ ಹಾಸನ್
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.