
ಕೇವಲ ಸಿನಿಮಾ ಪ್ರೀತಿಯಿಂದ ಸಿದ್ಧವಾದ ಚಿತ್ರ ‘ಜೀರ್ಜಿಂಬೆ’. ನಿರ್ದೇಶಕ ಕಾರ್ತಿಕ್ ಸರಗೂರು ಮತ್ತು ಅವರ 18 ಮಂದಿ ಸ್ನೇಹಿತರು ಸ್ವಲ್ಪ ಸ್ವಲ್ಪ ದುಡ್ಡು ಹಾಕಿದ ಕಾರಣದಿಂದ ಸಿನಿಮಾ ಶುರುವಾಯಿತು. ದುಡ್ಡು ಸಾಲದೇ ಒಂದು ಹಂತದಲ್ಲಿ ನಿಂತುಬಿಟ್ಟಿತು. ಮತ್ತೊಂದಷ್ಟು ಮಂದಿ ಸ್ನೇಹಿತರು ಜೊತೆಯಾದರು. ಸಿನಿಮಾ ಪೂರ್ತಿ ಮಾಡಲು ಮತ್ತೊಂದಷ್ಟು ದುಡ್ಡು ಕೂಡಿತು. ಈ ಸಿನಿಮಾದ ಕತೆ ಕೇಳಿದ ಒಬ್ಬ ವೃದ್ಧರು ತಾನು ಎಫ್‌ಡಿ ಇಟ್ಟಿದ್ದ ಒಂದು ಲಕ್ಷ ಹಣವನ್ನು ತಂಡಕ್ಕೆ ನೀಡಿದರು. ಈ ತಂಡವನ್ನು ಕೊನೆಯಲ್ಲಿ ಸೇರಿಕೊಂಡಿದ್ದು ಪುಷ್ಕರ್ ಮಲ್ಲಿಕಾರ್ಜುನಯ್ಯ.
ಅತ್ಯುತ್ತಮ ಚಿತ್ರ ರಾಜ್ಯ ಪ್ರಶಸ್ತಿ ಹಾಗೂ ವಿವಿಧ ಮೂರು ವಿಭಾಗಗಳಲ್ಲಿ ರಾಜ್ಯ ಪ್ರಶಸ್ತಿಗಳನ್ನ ಪಡೆದಿರುವ, ಸಿರಿ ವಾನಳ್ಳಿ, ಸುಮನ್ ನಗರ್‌ಕರ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರವನ್ನು ನೋಡಿ ಚಿತ್ರೋತ್ಸವದಲ್ಲಿ ಅದೆಷ್ಟೋ ಮಂದಿ ಕಣ್ಣೀರು ಹಾಕಿದ್ದಾರೆ. ಚಿತ್ರದ ಕೊನೆಯಲ್ಲಿ ನಗು ಬೀರಿದ್ದಾರೆ. ಚಿತ್ರದ ಕುರಿತು ಚರ್ಚೆ ಮಾಡಿದ್ದಾರೆ. ಈ ಸಿನಿಮಾ ನವೆಂಬರ್ 16 ರಂದು ಬಿಡುಗಡೆಯಾಗುತ್ತಿದೆ.
ಈ ಸಿನಿಮಾ ಯಾಕೆ ನೋಡಬೇಕು?
ಕಾರ್ತಿಕ್ ಸರಗೂರು ಹೇಳಿದ್ದು
‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಚಿತ್ರದಿಂದಲೂ ನಾನು ಒಂದೊಳ್ಳೆಯ ಕತೆ ಹೇಳುವ ಸಿನಿಮಾ ಮಾಡಬೇಕು ಎನ್ನುವ ಆಸೆ ಹೊಂದಿದ್ದೆ. ಒಂದು ಸಂದರ್ಭದಲ್ಲಿ ಸಂಗೀತ ನಿರ್ದೇಶಕ ಚರಣ್‌ರಾಜ್ ಈ ಚಿತ್ರದ ಕುರಿತು ಹೇಳಿದರು. ಆಗ ಈ ಚಿತ್ರದ ಕೆಲವು ಭಾಗಗಳನ್ನು ನೋಡಿ, ಈ ಕತೆ ಜನರಿಗೆ ತಲುಪಬೇಕು ಎಂಬು ಆಸೆಯಿಂದ ನಾನು ನಿರ್ಮಾಣಕ್ಕೆ ಜೊತೆಯಾದೆ. ನಾನು ಹಳ್ಳಿಯಿಂದ ಬಂದವನು. ಹಳ್ಳಿಯ ಹೆಣ್ಣು ಮಕ್ಕಳ ಕಷ್ಟ ದೂರಾಗಬೇಕು ಎಂಬ ಉದ್ದೇಶ ಇರುವ ಚಿತ್ರವಿದು. ಜಾಸ್ತಿ ಜನರಿಗೆ ತಲುಪಿ ಸ್ವಲ್ಪ ಬದಲಾವಣೆ ಸಾಧ್ಯವಾದರೂ ನಮ್ಮ ಉದ್ದೇಶ ಸಾರ್ಥಕ - ಪುಷ್ಕರ್ ಮಲ್ಲಿಕಾರ್ಜುನಯ್ಯ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.