
ಬೆಂಗಳೂರು (ಡಿ. 12): ನಟಿ ರಾಧಿಕಾ ಕುಮಾರಸ್ವಾಮಿ ದಮಯಂತಿ ಚಿತ್ರದ ಜೊತೆಗೆ ಇನ್ನೊಂದು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ದಮಯಂತಿ ಆಯ್ತು, ಈಗ ಅಘೋರಿಯಾಗಿದ್ದಾರೆ.
ರಾಧಿಕಾ ’ಭೈರಾದೇವಿ’ ಎನ್ನುವ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು ಸಾಂಗ್ ಶೂಟಿಂಗ್ ವೊಂದರಲ್ಲಿ ಮೊದಲ ಬಾರಿಗೆ ಅಘೋರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸಾಂಗ್ ಶೂಟ್ ಗಾಗಿ ಅದ್ದೂರಿ ಗುಹೆ, 90 ಲಕ್ಷದ ಸೆಟ್ ಹಾಕಲಾಗಿದೆ. 200 ಕ್ಕೂ ಹೆಚ್ಚು ಡ್ಯಾನ್ಸ್ ರ್ ಗಳನ್ನು ಬಳಸಿಕೊಳ್ಳಲಾಗಿದೆ.
ಶಮಿಕಾ ಎಂಟರ್ ಪ್ರೈಸಸ್ ನಲ್ಲಿ ಭೈರಾದೇವಿ ಸಿನಿಮಾ ಮೂರು ಭಾಷೆಯಲ್ಲಿ ನಿರ್ಮಾಣವಾಗುತ್ತಿದೆ. ನಿರ್ದೇಶಕ ಶ್ರೀ ಜೈ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.