
ನಟಿ ರಾಧಿಕಾ ಕುಮಾರಸ್ವಾಮಿ ಕಿರುತೆರೆಗೆ ಎಂಟ್ರಿಯಾಗುತ್ತಿದ್ದಾರೆ. ಅದೂ ರಿಯಾಲಿಟಿ ಶೋ ಒಂದರ ತೀರ್ಪುಗಾರರಾಗಿ. ಹೌದು, ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮುಂದಿನ ತಿಂಗಳಿನಿಂದ ಪ್ರಸಾರವಾಗಲಿರುವ ‘ಡ್ಯಾನ್ಸ್ ಡ್ಯಾನ್ಸ್ ಜ್ಯೂನಿಯರ್ಸ್' ರಿಯಾಲಿಟಿ ಶೋನಲ್ಲಿ ರಾಧಿಕಾ ಕುಮಾರಸ್ವಾಮಿ ತೀರ್ಪಗಾರರಲ್ಲೊಬ್ಬರು. ಇವರ ಜತೆಗೆ ‘ನೆನಪಿರಲಿ' ಪ್ರೇಮ್, ಬಾಲಿವುಡ್ ಕೊರಿಯೋಗ್ರಾಫರ್ ಸಲ್ಮಾನ್ ಕೂಡ ತೀರ್ಪುಗಾರ ರಾಗಿ ರುತ್ತಾರೆ. ಈಗಾಗಲೇ ಚಿತ್ರೀಕರಣ ನಡೆಯುತ್ತಿದ್ದು, ರಾಧಿಕಾ ಕುಮಾರಸ್ವಾಮಿ ಅದರ ಪೂರ್ವಬಾವಿ ತಯಾರಿಯಲ್ಲಿದ್ದಾರೆ. ಶ್ವೇತಾ ಚಂಗಪ್ಪ ಅವರು ಶೋನ ನಿರೂಪಕರಾಗಿರುತ್ತಾರೆ.
ಹುಬ್ಬಳ್ಳಿ, ಧಾರವಾಡ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಆಡಿಷನ್ ನಡೆಯಲಾಗಿದ್ದು ಜೂನ್ ತಿಂಗಳ ಎರಡನೇ ವಾರದಿಂದ ಪ್ರತಿ ಶನಿವಾರ ಹಾಗೂ ಭಾನುವಾರ ‘ಡ್ಯಾನ್ಸ್ ಡ್ಯಾನ್ಸ್ ಜ್ಯೂನಿಯರ್ಸ್' ಶೋ ಪ್ರಸಾರವಾಗಲಿದೆ. ಹಿಂದಿಯಲ್ಲಿ ಸೂಪರ್ ಡ್ಯಾನ್ಸರ್ಸ್ ಹಾಗೂ ಕಪಿಲ್ ಶರ್ಮಾ ಅವರ ಶೋ ಅನ್ನು ನಿರ್ಮಾಣ ಮಾಡುತ್ತಿರುವ ಸಂಸ್ಥೆಯೇ ಈ ‘ಡ್ಯಾನ್ಸ್' ಶೋವನ್ನೂ ನಿರ್ಮಿಸುತ್ತಿದೆ. ರಾಧಿಕಾ ಕುಮಾರಸ್ವಾಮಿ ಮತ್ತು ಪ್ರೇಮ್- ಇಬ್ಬರಿಗೂ ಇದೇ ಮೊದಲ ರಿಯಾಲಿಟಿ ಶೋ ಅನುಭವ
(ಕ್ನಡಪ್ರಭ ವಾರ್ತೆ)
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.