
ಚೆನ್ನೈ (ನ. 03): ರಜನೀಕಾಂತ್ ಹಾಗೂ ಅಕ್ಷಯ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ರೋಬೋ 2. ೦ ಟ್ರೇಲರ್ ಇಂದು ಬಿಡುಗಡೆಯಾಗಿದೆ.
ಚೆನ್ನೈನ ಸತ್ಯಂ ಸಿನಿಮಾ ಥಿಯೇಟರ್ ನಲ್ಲಿ 2.೦ ಸಿನಿಮಾದ ಟ್ರೇಲರನ್ನು ಬಿಡುಗಡೆ ಮಾಡಲಾಗಿದೆ. ರಜನೀಕಾಂತ್, ಅಕ್ಷಯ್ ಕುಮಾರ್, ಆ್ಯಮಿ ಜಾಕ್ಸನ್, ಎ ಆರ್ ರೆಹಮಾನ್ ಉಪಸ್ಥಿತರಿದ್ದರು.
2. 0 ಚಿತ್ರದಲ್ಲಿ ರಜನೀಕಾಂತ್, ಅಕ್ಷಯ್ ಕುಮಾರ್, ಆ್ಯಮಿ ಜಾಕ್ಸನ್ ಪ್ರಮುಖವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೈ ಬಜೆಟ್ ಚಿತ್ರ ಇದಾಗಿದ್ದು ಸುಮಾರು 500 ಕೋಟಿ ವೆಚ್ಚದಲ್ಲಿ ಚಿತ್ರ ನಿರ್ಮಿಸಲಾಗಿದೆ. ಶಂಕರ್ ರವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದೇ ತಿಂಗಳ 29 ರಂದು ಈ ಚಿತ್ರ ರಾಷ್ಟ್ರದ್ಯಂತ ತೆರೆ ಕಾಣಲಿದೆ.
ಚಿತ್ರದ ಟ್ರೇಲರ್ ಝಲಕ್ ಇಲ್ಲಿದೆ ನೋಡಿ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.