
ನಟಿ ರಶ್ಮಿಕಾ ಮಂದಣ್ಣ ನೃತ್ಯ ಮತ್ತು ಸಾಹಸ ದೃಶ್ಯ ಚಿತ್ರೀಕರಿಸುವ ವೇಳೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ವರದಿಗಳ ಪ್ರಕಾರ ಕೆಳಗೆ ಬಿದ್ದ ರಭಸಕ್ಕೆ ಅವರ ಸೊಂಟಕ್ಕೆ ಪೆಟ್ಟು ಬಿದ್ದಿದೆ.
ರಶ್ಮಿಕಾ ಮಂದಣ್ಣ ಅವರ ಮುಂಬರುವ ಚಿತ್ರಗಳಾದ ‘ರಣಬಾಲಿ’ (Ranabaali) ಅಥವಾ ‘ಮೈಸಾ’ (Mysaa) ಸಿನಿಮಾದ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಠಿಣವಾದ ನೃತ್ಯ ಮತ್ತು ಸಾಹಸ ದೃಶ್ಯಗಳ ಶೂಟಿಂಗ್ ಸಮಯದಲ್ಲಿ ರಶ್ಮಿಕಾ ಆಯತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಚಿತ್ರತಂಡದ ಸದಸ್ಯರು ಶೂಟಿಂಗ್ ಅನ್ನು ಸ್ಥಗಿತಗೊಳಿಸಿ, ರಶ್ಮಿಕಾ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ರಶ್ಮಿಕಾ ಅವರ ದೇಹಸ್ಥಿತಿಯನ್ನು ಪರೀಕ್ಷಿಸಿದ ವೈದ್ಯರು ತುರ್ತು ಚಿಕಿತ್ಸೆಗೆ ಮುಂದಾಗಿದ್ದಾರೆ. ನಟ-ನಟಿಯರಲ್ಲಿ ತೀವ್ರವಾದ ಸ್ನಾಯುರಜ್ಜು ಹಾನಿ ಕಂಡುಬರುವುದು ಬಹಳ ಅಪರೂಪ. ಸಾಮಾನ್ಯವಾಗಿ ದಿನವಿಡೀ ಕಠಿಣ ದೈಹಿಕ ಕಸರತ್ತು ನಡೆಸುವ ವೃತ್ತಿಪರ ಅಥ್ಲೀಟ್‌ಗಳಲ್ಲಿ ಇಂತಹ ಗಾಯಗಳು ಕಂಡುಬರುತ್ತವೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ರಶ್ಮಿಕಾ ಮಂದಣ್ಣ ಅವರಿಗೆ ಕನಿಷ್ಠ 6 ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ರಶ್ಮಿಕಾ ಮೊದಲಿನಂತಾಗಲು ವಿಶೇಷ ಪುನರ್ವಸತಿ (Rehabilitation) ಕೇಂದ್ರಕ್ಕೆ ಹೋಗಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರಂತೆ. ಈ ಹಿನ್ನೆಲೆಯಲ್ಲಿ ಅವರ ಎಲ್ಲಾ ಸಿನಿಮಾಗಳ ಚಿತ್ರೀಕರಣ ಹಾಗೂ ಜಾಹೀರಾತು ಶೂಟಿಂಗ್‌ಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಖ್ಯಾತ ನಟ ವಿಜಯ್ ದೇವರಕೊಂಡ ಅವರನ್ನು ವಿವಾಹವಾದ ನಂತರ ರಶ್ಮಿಕಾ ಇತ್ತೀಚೆಗಷ್ಟೇ ‘ಮೈಸಾ’ ಸಿನಿಮಾದ ಚಿತ್ರೀಕರಣಕ್ಕೆ ಮರಳಿದ್ದರು. ಈ ಅಪಘಾತದಿಂದಾಗಿ ಅವರ ಮುಂದಿನ ಯೋಜನೆಗಳಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ರವೀಂದ್ರ ಪುಲ್ಲೆ ನಿರ್ದೇಶನದ, ಅನ್‌ಫಾರ್ಮುಲಾ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮೂಡಿಬರುತ್ತಿರುವ Mysaa ಸಿನಿಮಾವು ಗೋಂಡಾ ಬುಡಕಟ್ಟು ಜನಾಂಗದ ಹಿನ್ನೆಲೆಯುಳ್ಳ ಭಾವನಾತ್ಮಕ ಸಾಹಸ ಚಿತ್ರವಾಗಿದೆ. ಇದರಲ್ಲಿ ರಶ್ಮಿಕಾ ಗೋಂಡಾ ಮಹಿಳೆಯಾಗಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ರಶ್ಮಿಕಾ ಮಂದಣ್ಣ ಅಥವಾ ಅವರ ತಂಡದಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲವಾದರೂ ಗಾಯದ ತೀವ್ರತೆಯ ಸುದ್ದಿ ಕೇಳಿ ಅವರ ಅಭಿಮಾನಿಗಳು ತೀವ್ರ ಆತಂಕ ವ್ಯಕ್ತಪಡಿಸಿದ್ದು, ಅವರು ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.