ಬೆಳ್ಳಂದೂರು ಕೆರೆಗಿಳಿದು ರಶ್ಮಿಕಾ ಮಂದಣ್ಣ ಫೋಟೋಶೂಟ್ ಮಾಡಿಸಿಕೊಂಡಿದ್ದು ನಿಜನಾ?

Published : Dec 16, 2018, 05:30 PM IST
ಬೆಳ್ಳಂದೂರು ಕೆರೆಗಿಳಿದು ರಶ್ಮಿಕಾ ಮಂದಣ್ಣ ಫೋಟೋಶೂಟ್ ಮಾಡಿಸಿಕೊಂಡಿದ್ದು ನಿಜನಾ?

ಸಾರಾಂಶ

ಬೆಳ್ಳಂದೂರು ಕೆರೆ ಬಳಿ ರಶ್ಮಿಕಾ ಮಂದಣ್ಣ ಫೋಟೋಶೂಟ್ | ಜಲ ಮಾಲಿನ್ಯ ತಡೆಗಟ್ಟಲು ಜನ ಜಾಗೃತಿ ಮೂಡಿಸಲು ಮುಂದಾದ ರಶ್ಮಿಕಾ ಮಂದಣ್ಣ | ನಿಜಕ್ಕೂ ಕೆರೆಯೊಳಗೆ ಇಳಿದಿದ್ದು ನಿಜನಾ? 

ಬೆಂಗಳೂರು (ಡಿ. 16): ಜಲಮಾಲಿನ್ಯ ತಡೆಗಟ್ಟುವ ಬಗ್ಗೆ ಜನಜಾಗೃತಿ ಮೂಡಿಸಲು ಇತ್ತೀಚಿಗೆ ರಶ್ಮಿಕಾ ಮಂದಣ್ಣ ಬೆಳ್ಳಂದೂರು ಕೆರೆ ಪಕ್ಕ ನಿಂತು ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಈ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. 

ಬೆಳ್ಳಂದೂರು ಕೆರೆ ಬಳಿ ಹೋಗುವುದೇ ಒಂದು ಸಾಹಸ. ಇನ್ನು  ಆ ನೀರಿಗಿಳಿದು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ ಎಂದರೆ ನಿಜಕ್ಕೂ ಗ್ರೇಟ್ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪ್ರತಿಕ್ರಯಿಸಿರುವ ರಶ್ಮಿಕಾ, ಬೆಳ್ಳಂದೂರು ಕೆರೆ ಬಳಿ ಹೋಗಲೂ ಸಾಧ್ಯವಾಗದಂತಹ ಸ್ಥಿತಿ ಇದೆ. ಅಕ್ಕಪಕ್ಕದ ರಸ್ತೆಗಳಲ್ಲಿ ಹೋಗುವಗಲೇ ಮೂಗು ಮುಚ್ಚಿಕೊಂಡು ಹೋಗುವ ಸ್ಥಿತಿ ಇದೆ. ನಾನಲ್ಲಿಗೆ ಹೋದಾಗ ಕೆಳಗೆ ಇಳಿಯಲೂ ಸಾಧ್ಯವಾಗದ ಸ್ಥಿತಿ ಇದೆ. ನಾನು ನೀರಿನಲ್ಲಿ ಮುಳುಗು ಫೋಟೋ ಶೂಟ್ ಮಾಡಿಸಿಕೊಳ್ಳುವುದು ಸಾಧ್ಯವಾಗದ ಮಾತು. ಬೆಳ್ಳಂದೂರು ಕೆರೆ ಬಳಿ ಫೋಟೋಶೂಟ್ ಮಾಡಿಸಿಕೊಂಡಿದ್ದು ಹೌದು. ಆದರೆ ನೀರಿಗಿಳಿದಿಲ್ಲ. ಜಲಮಾಲಿನ್ಯ ತಡೆಗಟ್ಟುವ ಬಗ್ಗೆ ಜನಜಾಗೃತಿಮೂಡಿಸಲು ಗೆಳತಿಯ ಮನೆಯ ಸ್ವಿಮ್ಮಿಂಗ್ ಪೂಲ್ ನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದೇನೆ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

The Devil Movie Review: ದರ್ಶನ್‌ ದಿ ಡೆವಿಲ್‌ ಸಿನಿಮಾದ ಹೈಲೈಟ್ಸ್‌ ಏನು? ಡೆವಿಲ್‌ Part 2 ಬರುತ್ತಾ!
The Devil Movie: ಏನ್ರೀ ಹವಾ ಇದು... ಗಿಲ್ಲಿ ನಟ ಎಣ್ಣೆಯಲ್ಲಿ ಮುಖ ತೊಳ್ಕೊಂಡಿದ್ದಾರೆ ಎಂದ ವೀಕ್ಷಕರು