ಕನ್ನಡಿಗರಿಗೂ ಪರಿಚಿತ ನಟಿ ರೆಜಿನಾ ಸಿನಿ ಕೆರಿಯರ್‌ನಲ್ಲಿ ಹೊಸ ಅಧ್ಯಾಯ: ವಿಲನ್ ಪಾತ್ರಕ್ಕೆ ಗ್ರೀನ್ ಸಿಗ್ನಲ್?

Published : Aug 22, 2026, 04:52 PM IST
Regina Cassandra

ಸಾರಾಂಶ

ತಮಿಳು, ಕನ್ನಡ, ತೆಲುಗು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಟಿ ರೆಜಿನಾ ಕ್ಯಾಸಂಡ್ರಾ, ಚಿತ್ರರಂಗದಲ್ಲಿ ಬರೋಬ್ಬರಿ 20 ವರ್ಷಗಳನ್ನು ಪೂರೈಸಿದ್ದಾರೆ.

ತಮಿಳು, ಕನ್ನಡ, ತೆಲುಗು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಟಿ ರೆಜಿನಾ ಕ್ಯಾಸಂಡ್ರಾ, ಚಿತ್ರರಂಗದಲ್ಲಿ ಬರೋಬ್ಬರಿ 20 ವರ್ಷಗಳನ್ನು ಪೂರೈಸಿದ್ದಾರೆ. ಇದೀಗ ಹೊಸ ಸಿನಿಮಾವೊಂದರಲ್ಲಿ ಅವರು ನೆಗೆಟಿವ್ ಶೇಡ್‌ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಹಾಗಾದರೆ ಆ ಸಿನಿಮಾ ಯಾವುದು? ಇಲ್ಲಿದೆ ಮಾಹಿತಿ.

ದಕ್ಷಿಣ ಭಾರತದ ಹಲವು ಭಾಷೆಗಳ ಸಿನಿಮಾಗಳಲ್ಲಿ ನಾಯಕಿಯಾಗಿ ಹಾಗೂ ಪ್ರಮುಖ ಪಾತ್ರಗಳಲ್ಲಿ ನಟಿಸಿ ಗುರುತಿಸಿಕೊಂಡಿರುವ ರೆಜಿನಾ ಕ್ಯಾಸಂಡ್ರಾ, 2005ರಲ್ಲಿ ಬಿಡುಗಡೆಯಾದ ‘ಕಂಡ ನಾಳ್ ಮುದಲ್’ ಚಿತ್ರದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಆರಂಭದ ದಿನಗಳಲ್ಲಿ ಎರಡನೇ ನಾಯಕಿ ಹಾಗೂ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಅವರು, ಬಳಿಕ ಕನ್ನಡ ಮತ್ತು ತೆಲುಗು ಸೇರಿದಂತೆ ವಿವಿಧ ಭಾಷೆಗಳ ಸಿನಿಮಾಗಳಲ್ಲೂ ಅವಕಾಶ ಪಡೆದುಕೊಂಡರು.

ನಿಧಾನವಾಗಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ತಮ್ಮದೇ ಆದ ಸ್ಥಾನವನ್ನು ಗಳಿಸಿಕೊಂಡ ರೆಜಿನಾ, ನಂತರ ಹಿಂದಿ ಸಿನಿಮಾಗಳಲ್ಲೂ ಪ್ರಮುಖ ಹಾಗೂ ಪೋಷಕ ಪಾತ್ರಗಳಲ್ಲಿ ನಟಿಸುವ ಅವಕಾಶ ಪಡೆದರು. 2005ರಲ್ಲಿ ನಾಯಕಿಯಾಗಿ ವೃತ್ತಿಜೀವನ ಆರಂಭಿಸಿದ ಅವರು, ಇದೀಗ ಚಿತ್ರರಂಗದಲ್ಲಿ ಎರಡು ದಶಕಗಳ ಪಯಣವನ್ನು ಪೂರ್ಣಗೊಳಿಸಿದ್ದಾರೆ. ಜೊತೆಗೆ ಕನ್ನಡದಲ್ಲಿಯೂ 'ಸೂರ್ಯಕಾಂತಿ'ಯಂತಹ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ಇತ್ತೀಚಿನ ಮಾಹಿತಿಯ ಪ್ರಕಾರ, ರೆಜಿನಾ ಕ್ಯಾಸಂಡ್ರಾ ಸದ್ಯ ಎರಡು ಹಿಂದಿ ಸಿನಿಮಾಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ತಮಿಳಿನ ಬಹುನಿರೀಕ್ಷಿತ ಸಿನಿಮಾವೊಂದರಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

‘ಮೂಕುತಿ ಅಮ್ಮನ್ 2’ನಲ್ಲಿ ವಿಲನ್?

ನಟಿ ರೆಜಿನಾ ಕ್ಯಾಸಂಡ್ರಾ, ಸುಂದರ್ ಸಿ ನಿರ್ದೇಶನದ ಹಾಗೂ ನಯನತಾರಾ ಅಭಿನಯದ ‘ಮೂಕುತಿ ಅಮ್ಮನ್ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ನೆಗೆಟಿವ್ ಪಾತ್ರದಲ್ಲಿ, ಅಂದರೆ ವಿಲನ್ ಶೇಡ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಇದೀಗ ಕುತೂಹಲ ಮೂಡಿಸಿದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ.

2026ರ ಅಂತ್ಯದ ವೇಳೆಗೆ ‘ಮೂಕುತಿ ಅಮ್ಮನ್ 2’ ತೆರೆಗೆ ಬರುವ ನಿರೀಕ್ಷೆಯಿದೆ. ರೆಜಿನಾ ಇದೇ ಮೊದಲ ಬಾರಿಗೆ ಇಂತಹ ವಿಭಿನ್ನ ನೆಗೆಟಿವ್ ಶೇಡ್‌ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವರೇ ಎಂಬುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ಚಿತ್ರತಂಡ ಇನ್ನಷ್ಟೇ ಅಧಿಕೃತವಾಗಿ ಬಹಿರಂಗಪಡಿಸಬೇಕಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಮೆಗಾ158 ಅಲ್ಲ... ಇನ್ಮುಂದೆ ‘ಕಾಕ’: ಹುಟ್ಟುಹಬ್ಬದಂದು ಚಿರಂಜೀವಿ ಹೊಸ ಸಿನಿಮಾದ ಟೈಟಲ್ ರಿವೀಲ್
ಎಂತ ಕಷ್ಟ ಬಂತು! ರಸ್ತೆ ಬದಿ ಕೂತು ತರಕಾರಿ ಮಾರಾಟಕ್ಕೆ ಇಳಿದ ನಟ; ವಿಡಿಯೋ ವೈರಲ್!