ರಿಷಬ್ ಶೆಟ್ಟಿ ಸರ್ಕಾರಿ ಶಾಲೆ ಆ. 23 ಕ್ಕೆ ಆರಂಭ

By Web DeskFirst Published Aug 13, 2018, 2:24 PM IST
Highlights

ಆ.23 ಕ್ಕೆ ರಿಷಬ್ ಶೆಟ್ಟಿ ಸರ್ಕಾರಿ ಶಾಲೆ ಪ್ರಾರಂಭ ರಿಷಬ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ಸಹಿಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಸಿನಿಮಾ ಆ. 23 ಕ್ಕೆ ತೆರೆ ಮೇಲೆ ಬರುತ್ತಿದೆ.

ಬೆಂಗಳೂರು (ಆ. 13): ರಿಷಬ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ಸಹಿಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಸಿನಿಮಾ ಆ.23 ಕ್ಕೆ ತೆರೆ ಮೇಲೆ ಬರುತ್ತಿದೆ.

ಕಾಸರಗೋಡಿನ ಸರ್ಕಾರಿ ಶಾಲೆಯ ಸುತ್ತ ಸಾಗುವ ಈ ಚಿತ್ರದ ಹಾಡುಗಳು ಈಗಾಗಲೇ ಸಿಕ್ಕಾಪಟ್ಟೆ ಸೌಂಡು ಮಾಡುತ್ತಿದೆ. ಅನಂತ್‌ನಾಗ್ ಚಿತ್ರದ ಮುಖ್ಯ ಭೂಮಿಕೆಯಲ್ಲಿರುವುದು ಇಲ್ಲಿನ ಹೈಲೈಟ್. ‘ಕಿರಿಕ್ ಪಾರ್ಟಿ’ ನಂತರ
ಮತ್ತೊಂದು ಭರವಸೆಯ ಚಿತ್ರದ ಮೂಲಕ ರಿಷಬ್ ಶೆಟ್ಟಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ರಿಷಬ್ ಶೆಟ್ಟಿ ಫಿಲಮ್ಸ್ ಮೂಲಕ ನಿರ್ಮಾಪಕ ಜಯಣ್ಣ ವಿತರಣೆ ಮಾಡುತ್ತಿದ್ದಾರೆ. ಮೊದಲ ವಾರದಲ್ಲೇ 75  ರಿಂದ 100 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. 

click me!