ಅಹಮದಾಬಾದ್ ವಿಮಾನ ದುರಂತದ ಬಗ್ಗೆ 'ಹೃದಯ ಮಿಡಿದಿದೆ' ಎಂದ ರಾಕಿಂಗ್ ಸ್ಟಾರ್ ಯಶ್

Published : Jun 12, 2025, 07:17 PM ISTUpdated : Jun 12, 2025, 08:04 PM IST
Rocking Star Yash

ಸಾರಾಂಶ

ಈ ವಿಮಾನ ದುರಂತದ ಬಗ್ಗೆ ಕನ್ನಡದ ರಾಕಿಂಗ್ ಸ್ಟಾರ್ ಯಶ್ ಅವರು ಸೋಷಿಯಲ್ ಮೀಡಿಯಾ ಎಕ್ಸ್ (X) ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಹಮದಾಬಾದ್ ದುರಂತ ನಿಜಕ್ಕೂ ಭಯಾನಕ. ಈ ದುರಂತದಲ್ಲಿ ಮಡಿದ ಎಲ್ಲಾ ಪ್ರಯಾಣಿಕರು, ಸಿಬ್ಬಂದಿಗಳು ಹಾಗೂ ಸ್ಥಳದಲ್ಲಿದ್ದು ಇಹಲೋಕ ತ್ಯಜಿಸಿದ ಎಲ್ಲರ ಬಗ್ಗೆಯೂ ನನ್ನ ಹೃದಯ..

ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಅಹಮದಾಬಾದ್‌ನಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಈ ದುರಂತದಲ್ಲಿ ವಿಮಾನದಲ್ಲಿದ್ದ ಎಲ್ಲಾ 242 ಜನರೂ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ವೈದ್ಯಕೀಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಊಟಕ್ಕೆ ಕುಳಿತಾಗಲೇ ಈ ವಿಮಾನ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಭಾರತದಲ್ಲಿ ಈವರೆಗೆ ಸಂಭವಿಸಿದ ಭೀಕರ ವಿಮಾನ ದುರಂತಗಳಲ್ಲಿ ಇದೂ ಒಂದು ಎನ್ನಬಹುದು.

ಈ ವಿಮಾನ ದುರಂತದ ಬಗ್ಗೆ ಕನ್ನಡದ ರಾಕಿಂಗ್ ಸ್ಟಾರ್ ಯಶ್ ಅವರು ಸೋಷಿಯಲ್ ಮೀಡಿಯಾ ಎಕ್ಸ್ (X) ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಹಮದಾಬಾದ್ ದುರಂತ ನಿಜಕ್ಕೂ ಭಯಾನಕ. ಈ ದುರಂತದಲ್ಲಿ ಮಡಿದ ಎಲ್ಲಾ ಪ್ರಯಾಣಿಕರು, ಸಿಬ್ಬಂದಿಗಳು ಹಾಗೂ ಸ್ಥಳದಲ್ಲಿದ್ದು ಇಹಲೋಕ ತ್ಯಜಿಸಿದ ಎಲ್ಲರ ಬಗ್ಗೆಯೂ ನನ್ನ ಹೃದಯ ಮಿಡಿಯುತ್ತಿದೆ. ಇದು ಸಂತಾಪ ಸೂಚಿಸುವುದಕ್ಕೂ ಮಿಗಿಲಾದ ದುರಂತ. ದುರಂತದಿಂದ ನೊಂದ ಎಲ್ಲಾ ಕುಟುಂಬಸ್ಥರ ಬಗ್ಗೆ ಅದೇನೇ ಹೇಳಿದರೂ ಅವರ ನೋವು ಕಡಿಮೆ ಆಗುವುದು ಕಷ್ಟವೇ. ಆದರೂ ಕೂಡ, ನಾವೆಲ್ಲರು ನಿಮ್ಮ ಜೊತೆ ಇದ್ದೇವೆ. ನಮ್ಮ ಪ್ರಾರ್ಥನೆ ಮೂಲಕ ಆ ಸಂತ್ರಸ್ಥ ಕುಟುಂಬಗಳಿಗೆ ದೇವರು ಈ ದುಃಖ ಭರಿಸುವ ಶಕ್ತಿ ನೀಡಲಿ' ಎಂದು ನಟ ಯಶ್ ಸಂತಾಪ ಸೂಚಿಸಿದ್ದಾರೆ.

(Terrible news about the Air India flight from Ahmedabad. My heart aches for every passenger, crew member, and all the innocent lives tragically impacted on the ground. This is a tragedy beyond comprehension. To the grieving families, while no words can truly ease this pain, we stand with you, sending immense strength and our prayers)

ಇನ್ನು ಈ ಬಗ್ಗೆ ನಟಿ ರಮ್ಯಾ ಸಹ ಸ್ವಲ್ಪ ಹೊತ್ತಿಗೂ ಮೊದಲು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿರುವ ನಟಿ ರಮ್ಯಾ ಅವರು 'ಶಾಕಿಂಗ್' ಎಂದಿದ್ದಾರೆ. 'ಪ್ರಯಾಣಿಕರು ಹಾಗೂ ಅವರ ಕುಟುಂಬಕ್ಕೆ ಪ್ರಾರ್ಥನೆ' ಎಂದು ನಟಿ ರಮ್ಯಾ ಪೋಸ್ಟ್ ಮಾಡುವ ಮೂಲಕ ಈ ಘಟನೆಗೆ ಮನಮಿಡಿದು ಸಂತಾಪ ಸೂಚಿಸಿದ್ದಾರೆ. ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ಸಹ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿ, ಸಚಿವ ಸಂತೋಷ್ ಲಾಡ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಕೂಡ ಈ ಅಹಮದಾಬಾದ್ ವಿಮಾನ ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ.

ಗುರುವಾರ ಮಧ್ಯಾಹ್ನ, ಅಂದರೆ 12 ಜೂನ್ 2025ರಂದು ಭಾರತದಲ್ಲಿ ದೊಡ್ಡ ಪ್ರಮಾಣದ ವಿಮಾನ ದುರಂತ ಸಂಭವಿಸಿದೆ. ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು, ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಈ ವಿಮಾನದಲ್ಲಿ 232 ಪ್ರಯಾಣಿಕರು, 10 ಸಿಬ್ಬಂದಿ ಸದಸ್ಯರು ಮತ್ತು 2 ಪೈಲಟ್‌ಗಳು ಪ್ರಯಾಣಿಸುತ್ತಿದ್ದರು. ವಿಮಾನ ಟೇಕ್ ಆಫ್ ಆದ ತಕ್ಷಣವೇ ತಾಂತ್ರಿಕ ತೊಂದರೆಯಿಂದಾಗಿ ಭೂಮಿಗೆ ಪತನಗೊಂಡಿದೆ. ಇದು ಇತ್ತೀಚಿನ ವರ್ಷಗಳಲ್ಲಿ ನಡೆದ ಅತ್ಯಂತ ಭೀಕರ ವಿಮಾನ ದುರಂತಗಳಲ್ಲೊಂದು ಎನ್ನಲಾಗುತ್ತಿದೆ.

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ
ಸಾಯಿಬಾಬ ನಟ ಸುಧೀರ್ ಆಸ್ಪತ್ರೆ ದಾಖಲು, ಚಿಕಿತ್ಸೆಗೆ 11 ಲಕ್ಷ ರೂ ನೀಡಲು ಶಿರಡಿ ಟ್ರಸ್ಟ್‌ಗೆ ಸೂಚನೆ