ಸ್ಯಾಂಡಲ್‌ವುಡ್‌ಗೆ ಬಂತು ಮತ್ತೊಂದು ದೈವ ಹಾಗೂ ದುಷ್ಟ ಶಕ್ತಿ ನಡುವಿನ ಸಂಘರ್ಷದ ಕಥೆ

Published : Jul 14, 2023, 07:50 AM IST
ಸ್ಯಾಂಡಲ್‌ವುಡ್‌ಗೆ ಬಂತು ಮತ್ತೊಂದು ದೈವ ಹಾಗೂ ದುಷ್ಟ ಶಕ್ತಿ ನಡುವಿನ ಸಂಘರ್ಷದ ಕಥೆ

ಸಾರಾಂಶ

ಒಬ್ಬ ಹುಡುಗನ ಜರ್ನಿ ಕಥೆ ಇದು. ಆ ಜರ್ನಿಯಲ್ಲಿ ಅವನು ಆಧ್ಯಾತ್ಮಿಕವಾಗಿ ಯಾವ ರೀತಿ ಸವಾಲುಗಳನ್ನು ಎದುರಿಸುತ್ತಾನೆ. ಅದು ಯಾವುದೇ ಮುಖಾಂತರವಾಗಿಯಾದರು ಬರಬಹುದು. ಹೆಣ್ಣಿನ ಮೂಲಕವಾದರೂ ಬರಬಹುದು. ದುಡ್ಡಿನ ಮೂಲಕವಾದರು ಬರಬಹುದು.

ಯುವ ಪ್ರತಿಭೆಗಳು ನಿರ್ಮಾಣದ ನೂತನ ಕುತೂಹಲ ಮೂಡಿಸುವ ಚಿತ್ರ 'ಆರ'. ಸದ್ಯ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿರುವ ಹೊಸಬರ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ನೋಡುಗರ ಗಮನ ಸೆಳೆಯುತ್ತಿದೆ. ಸಸ್ಪೆನ್ಸ್, ಪಯಣ, ಪ್ರೀತಿ, ದುಷ್ಟ ಶಕ್ತಿ, ದೈವ ಸಂಘರ್ಷದ ಕಥಾಹಂದರ ಒಳಗೊಂಡಿರುವ ಸ್ಪಿರಿಚುಯಲ್ ಡ್ರಾಮಾ ಮತ್ತು ಥ್ರಿಲ್ಲರ್ ಜಾನರ್ ಸಿನಿಮಾ 'ಆರ'. ಈ ಚಿತ್ರವನ್ನು ಅಶ್ವಿನ್ ವಿಜಯಮೂರ್ತಿ ನಿರ್ದೇಶಿಸಿದ್ದಾರೆ. ಸಿನಿಮಾ, ಸಂಪೂರ್ಣ ಹೊಸ ಪ್ರತಿಭೆಗಳಿಂದ, ಹೊಸತನದಿಂದ ಕೂಡಿದೆ. ರೋಹಿತ್ ಹಾಗೂ ದೀಪಿಕಾ ಆರಾಧ್ಯ 'ಆರ' ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. 

ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಚಿತ್ರದ ನಾಯಕ ರೋಹಿತ್ ಬರೆದಿದ್ದು. ಆನಂದ್ ನೀನಾಸಂ ಸತ್ಯ ರಾಜ್ ನಿಖಿಲ್ ಶ್ರೀಪಾದ್ ಪ್ರತೀಕ್ ಲೋಕೇಶ್ ಹಾಗೂ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಿರ್ದೇಶಕ ಅಶ್ವಿನ್ ವಿಜಯಮೂರ್ತಿ ಮಾತನಾಡಿ, ಒಬ್ಬ ಹುಡುಗನ ಜರ್ನಿ ಕಥೆ ಇದು. ಆ ಜರ್ನಿಯಲ್ಲಿ ಅವನು ಆಧ್ಯಾತ್ಮಿಕವಾಗಿ ಯಾವ ರೀತಿ ಸವಾಲುಗಳನ್ನು ಎದುರಿಸುತ್ತಾನೆ. ಅದು ಯಾವುದೇ ಮುಖಾಂತರವಾಗಿಯಾದರು ಬರಬಹುದು. ಹೆಣ್ಣಿನ ಮೂಲಕವಾದರೂ ಬರಬಹುದು. ದುಡ್ಡಿನ ಮೂಲಕವಾದರು ಬರಬಹುದು. ಸಂಬಂಧಗಳ ಮೂಲಕವಾದರ ಬರಬಹುದು. ನಮ್ಮ ಜೀವನದಲ್ಲಿ ಯಾರೊಬ್ಬರಾದರೂ ಬಂದರು. ಅವರು ತೋರಿಸಿಕೊಳ್ಳಲು ಬರುತ್ತಾರೆ. ತಿಳಿಸಿಕೊಡಲು ಬರ್ತಾರೆ. 

ನನಗೆ ಹೈಟ್‌ ಫೋಬಿಯಾ ಇದೆ, ಸಿನಿಮಾ ಬಿಟ್ಟು ದೂರ ಇರಲ್ಲ: ಶುಭಾ ಪೂಂಜಾ

ಈ ಸವಾಲುಗಳನ್ನು ಎದುರಿಸಿ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳುತ್ತಾರಾ ಅನ್ನೋದು ಕಥೆ. ಇದನ್ನು ಕಮರ್ಷಿಯಲ್ ಆಗಿ ಆಧ್ಯಾತ್ಮಿಕವಾಗಿ ತೋರಿಸಲಾಗಿದೆ ಎಂದರು. 'ಆರ' ಎಂಬ ಯುವಕನ ಸುತ್ತ ಹೆಣೆದ ಕಥೆಯಿದು. ವಿಧಿಯ ಜೊತೆ ಸೇರಿ ಸಂರಕ್ಷಣೆಗಾಗಿ ಹೋರಾಡುವ ಸ್ಟೋರಿ ಚಿತ್ರದಲ್ಲಿ ಇದೆ. ಚಿತ್ರದ ಬಹುತೇಕ ಚಿತ್ರೀಕರಣ ಉಡುಪಿಯಲ್ಲಿ ನಡೆದಿದೆ. ಚಿತ್ರದಲ್ಲಿ ಉಡುಪಿಯ ಕನ್ನಡವನ್ನು ಬಳಸಲಾಗಿದೆ. ಈ ಚಿತ್ರವನ್ನು 'ಎಆರ್' ಫಿಲ್ಮ್ಸ್‌ ಬ್ಯಾನರ್ ಅಡಿ ಸುಜಾತ ಚಡಗ, ಚಂದ್ರಶೇಖರ್ ಸಿ ಜಂಬಿಗಿ ನಿರ್ಮಾಣ ಮಾಡಿದ್ದಾರೆ. ಯುವ ಪ್ರತಿಭೆ ಶ್ರೀಹರಿ ಛಾಯಾಗ್ರಾಹಣ, ಗಿರೀಶ್ ಹೊತ್ತೂರ್ ಸಂಗೀತ ನಿರ್ದೇಶನ, ಮಾದೇಶ್ ಸಂಕಲನ, ದೇವಿ ಪ್ರಕಾಶ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಆರ ಇದೇ ಜುಲೈ 28ಕ್ಕೆ ರಾಜ್ಯಾದ್ಯಂತ ತೆರೆಗೆ ಬರಲಿದೆ.

ಪೋಸ್ಟರ್‌ ಬಿಡುಗಡೆ: ಅಶ್ವಿನ್‌ ವಿಜಯಮೂರ್ತಿ ನಿರ್ದೇಶನದ ದೈವದ ಕಥೆಯುಳ್ಳ ಹೊಸ ಸಿನಿಮಾ ‘ಆರ’. ಈ ಚಿತ್ರದ ಪೋಸ್ಟರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ‘ಆರ ಸಿನಿಮಾ ದೈವ ಮತ್ತು ದುಷ್ಟಶಕ್ತಿಗಳ ಸಂಘರ್ಷದ ಕಥೆ. ಇದರಲ್ಲಿ ಆರ ಅನ್ನುವುದು ಒಬ್ಬ ಹುಡುಗನ ಹೆಸರು. ಆತನ ಜರ್ನಿಯ ಕಥೆ ಚಿತ್ರದಲ್ಲಿದೆ. ಹಲವು ಸವಾಲುಗಳನ್ನು ಎದುರಿಸಿ ತನ್ನ ತಾತನಿಂದ ಬಳುವಳಿಯಾಗಿ ಬಂದ ಕಾಡನ್ನು ಆತ ಹೇಗೆ ಉಳಿಸಿಕೊಳ್ಳುತ್ತಾನೆ ಅನ್ನುವುದು ಚಿತ್ರದ ಮುಖ್ಯಕತೆ’ ಎನ್ನುವುದು ಚಿತ್ರತಂಡ ನೀಡುವ ಮಾಹಿತಿ. 

ರಶ್ಮಿಕಾ ಜಾಗ ಕಬಳಿಸಿದ ಶ್ರೀಲೀಲಾ: ನಿತಿನ್‌‌ಗೆ ನಾಯಕಿಯಾದ 'ಕಿಸ್' ಬ್ಯೂಟಿ

ಸದ್ಯಕ್ಕೆ ಈ ಸಿನಿಮಾದ ಶೂಟಿಂಗ್‌ ಮುಕ್ತಾಯವಾಗಿದೆ. ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿವೆ. ರೋಹಿತ್‌ ಹಾಗೂ ದೀಪಿಕಾ ಆರಾಧ್ಯ ಈ ಸಿನಿಮಾದ ನಾಯಕ, ನಾಯಕಿ. ಈ ಸಿನಿಮಾದ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಹೀರೋ ರೋಹಿತ್‌ ಅವರೇ ಬರೆದಿರೋದು ವಿಶೇಷ. ಆನಂದ್‌ ನೀನಾಸಂ ಮುಖ್ಯಪಾತ್ರದಲ್ಲಿದ್ದಾರೆ. ಶ್ರೀಹರಿ ಛಾಯಾಗ್ರಹಣ, ಗಿರೀಶ್‌ ಹೊತ್ತೂರು ಸಂಗೀತ ನಿರ್ದೇಶನವಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

BBK 12: ರಕ್ಷಿತಾ ಶೆಟ್ಟಿ ಆ ರೀತಿ ಮಾಡ್ತಾಳೆ ಅಂತ ಅಂದ್ಕೊಂಡಿರಲಿಲ್ಲ, ಶಾಕ್‌ ಆಯ್ತು: ಅಭಿಷೇಕ್‌ ಶ್ರೀಕಾಂತ್
Bigg Boss Kannada: ಎಲ್ಲಿ ನೋಡಿದ್ರೂ ಗಿಲ್ಲಿ ಗಿಲ್ಲಿ, ಪಿಆರ್‌ ಒಗಳಿಗೆ ವಿನಯ್ ಗೌಡ ಹೇಳಿದ್ದೇನು?