
ಬೆಂಗಳೂರು (ಆ. 30): ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಚಿತ್ರತಂಡ ರಾಜ್ಯಾದ್ಯಂತ ನಡೆಯುತ್ತಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ ಆಂದೋಲನಕ್ಕೆ ಸಾಥ್ ನೀಡಿದೆ.
ಅದರ ಮೊದಲ ಹಂತವಾಗಿ ಸರ್ಕಾರಿ ಶಾಲೆ ಉಳಿವಿಗಾಗಿ ಹೋರಾಡುತ್ತಿರುವವರಿಗೆ ಬೆಂಗಳೂರಿನ ಮಲ್ಲೇಶ್ವರಂ ಮಂತ್ರಿ ಮಾಲ್‌ನಲ್ಲಿ ಇಂದು ಸಂಜೆ 6 ಗಂಟೆಗೆ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಿದೆ. ಆಂದೋಲನದ ಮುಖ್ಯ ಪ್ರಚಾರಕ ಅನಿಲ್ ಶೆಟ್ಟಿ ಹಾಗೂ ಚಿತ್ರದ ನಿರ್ದೇಶಕ ರಿಷಬ್ ಶೆಟ್ಟಿ ಇದರ ನೇತೃತ್ವ ವಹಿಸಿಕೊಂಡಿದ್ದು, ಸರ್ಕಾರಿ ಶಾಲೆ ಉಳಿವಿಗಾಗಿ ಹೋರಾಡುತ್ತಿರುವ ಅನೇಕರನ್ನು ಪ್ರದರ್ಶನಕ್ಕೆ ಆಹ್ವಾನಿಸಲಾಗಿದೆ.
ಚಿತ್ರದ ಪ್ರಮುಖ ಪಾತ್ರಧಾರಿ ಅನಂತ ನಾಗ್ ಜತೆಗೆ ಚಿತ್ರತಂಡವೂ ಸೇರಿದಂತೆ ನಟ ರಕ್ಷಿತ್ ಶೆಟ್ಟಿ ಸೇರಿ ಹಲವರು ಭಾಗವಹಿಸುತ್ತಿರುವುದು ವಿಶೇಷ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.