ಪೊಲೀಸರ ಕೈಗೂ ಸಿಗದೇ ಹೈಕೋರ್ಟ್‌ ಮೊರೆ ಹೋದ 'ಬುದ್ಧಿವಂತ': FIR ರದ್ದತಿಗೆ ಅರ್ಜಿ ಸಲ್ಲಿಸಿದ ಉಪೇಂದ್ರ

By Sathish Kumar KH  |  First Published Aug 14, 2023, 1:51 PM IST

ನಟ ಉಪೇಂದ್ರ ಅವರು ಬೆಂಗಳೂರು ಪೊಲೀಸರ ಕೈಗೆ ಸಿಗದೇ, ತಮ್ಮ ಮೇಲೆ ದಾಖಲಾದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.


ಬೆಂಗಳೂರು (ಆ.14): ಸ್ಯಾಂಡಲ್‌ವುಡ್‌ ರಿಯಲ್​ ಸ್ಟಾರ್ ನಟ​ ಉಪೇಂದ್ರ ವಿರುದ್ಧ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಾತಿ ನಿಂದನೆ ಆರೋಪದಡಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದರೂ, ವಿಚಾರಣೆಗೆ ಬರದೇ, ಪೊಲೀಸರ ಕೈಗೂ ಸಿಗದೇ ನೇರವಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಹೌದು, ಸಾಮಾಜಿಕ ಜಾಲತಾಣದ ಲೈವ್‌ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ಉಪೇಂದ್ರ ಅವರ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿರ್ದಿಷ್ಟ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರೆಂದು ಉಲ್ಲೇಖಿಸಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಿಂದ ದೂರು ಸ್ವೀಕರಿಸಿದ ಪೊಲೀಸರು ಉಪೇಂದ್ರನ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲು ಉಪೇಂದ್ರನ ಮನೆಗೆ ಹೋದರೂ ಅವರು ಮನೆಯಲ್ಲಿ ಇರಲಿಲ್ಲ. ಜೊತೆಗೆ, ಮೊಬೈಲ್‌ ಫೋನ್‌ಗಳನ್ನು ಸ್ವಿಚ್‌ ಆಫ್‌ ಮಾಡಿಕೊಂಡಿದ್ದರು. ಆದರೆ, ಈಗ ತಮ್ಮ ಮೇಲಿನ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಹೈಕೋರ್ಟ್‍ ಮೆಟ್ಟಿಲೇರಿದ್ದಾರೆ.

Tap to resize

Latest Videos

ನಟ ಉಪೇಂದ್ರನಿಗೆ ಜಾತಿನಿಂದನೆ ಕೇಸ್‌ನಡಿ 3 ವರ್ಷ ಜೈಲು ಶಿಕ್ಷೆ.? ಐಪಿಸಿ ಸೆಕ್ಷನ್‌ ಏನು ಹೇಳುತ್ತವೆ ಗೊತ್ತಾ?

ಪೊಲೀಸರ ಕೈಗೆ ಸಿಗದೇ ಎಲ್ಲಿಗೆ ಹೋದರು ಉಪೇಂದ್ರ..? 
ನಟ ಉಪೇಂದ್ರ ಅವರು ಬಂಧನ ಭೀತಿಯಲ್ಲಿ ನಟ ಉಪೇಂದ್ರ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬರುತ್ತಿದೆ. ಅವರನ್ನು ಸಂಪರ್ಕ ಮಾಡಲು ಇದ್ದ ಎಲ್ಲಾ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಸದ್ಯ ಉಪೇಂದ್ರ ನಿವಾಸಕ್ಕೆ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರಿಂದ ಭೌತಿಕವಾಗಿಯೂ ನೋಟೀಸ್ ಜಾರಿ ಮಾಡಲಾಗಿದೆ. ಇನ್ನು ಸ್ವಿಚ್ ಆಫ್ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ವಾಟ್ಸಾಪ್‌ಮೂಲಕವೂ ಪೊಲೀಸರು ನೋಟೀಸ್ ರವಾನಿಸಿದ್ದಾರೆ. ಇಂದು 10.30 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟೀಸ್ ನೀಡಿದ್ದರು. ಜಾತಿನಿಂದನೆ (ಅಟ್ರಾಸಿಟಿ) ಕೇಸ್ ದಾಖಲಾಗಿರುವ ಹಿನ್ನೆಲೆ ಹೇಳಿಕೆ ಪಡೆಯಲು ನೋಟೀಸ್ ಕೊಡಲಾಗಿತತು. ಆದರೆ, ನೋಟಿಸ್‌ ನೀಡಲು ಹೋದ ವೇಳೆಯೇ ನಟ ಉಪೇಂದ್ರ ನಾಪತ್ತೆಯಾಗಿದ್ದರು. ಸದ್ಯ ಎರಡು ನಿವಾಸಕ್ಕೂ ನೊಟೀಸ್ ಕೊಡಲಾಗಿದೆ. ಕತ್ರಿಗುಪ್ಪೆ ಹಾಗೂ ಸದಾಶಿವನಗರದಲ್ಲಿರುವ ನಿವಾಸಕ್ಕೆ ತೆರಳಿ ನೋಟಿಸ್‌ ಕೊಡಲಾಗಿದ್ದು, ಸದ್ಯ ಸ್ನೇಹಿತರು ಹಾಗೂ ಸಂಬಂಧಿಕರ ಸಂಪರ್ಕದಲ್ಲಿರುವ ಬಗ್ಗೆ ಪೊಲೀಸರಿಂದ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. 

'ಊರು ಎಂದ್ಮೇಲೆ ಹೊಲೆಗೇರಿ ಇರುತ್ತೆ' ಹೇಳಿಕೆಗೆ ಆಕ್ರೋಶ: ಕ್ಷಮೆ ಕೇಳಿದ ಬುದ್ಧಿವಂತ ಉಪೇಂದ್ರ

ಉಪೇಂದ್ರ ಮಾತನಾಡಿದ ವಿವರ ಇಲ್ಲಿದೆ ನೋಡಿ..
'ಇನ್ನೋಸೆಂಟ್‌ ಹೃದಯಗಳಿಂದಲೇ ನಿಜವಾದ ಬದಲಾವಣೆ ಸಾಧ್ಯ. ಇನ್ನೋಸೆಂಟ್‌ ಅಂದರೆ ಮುಗ್ಧತೆ ಇದೆಯಲ್ಲಾ ಅದೇ ಸತ್ಯದ ಮನಸ್ಸು. ಇನ್ನೋಸೆಂಟ್‌ ಮನಸ್ಸುಗಳು ಇಲ್ಲಿ ಜಾಯಿನ್‌ ಆಗಲಿ ಮಾತನಾಡಲಿ, ಹೇಳುವುದಕ್ಕೆ ಇಷ್ಟಪಡ್ತೀನಿ. ಅವರಿಂದ ನಮಗೆ ತುಂಬಾ ಬೆನಿಫಿಟ್‌ ಇದೆ, ಸಜೆಷನ್‌ ಕೂಡ ಉತ್ತಮವಾಗಿರುತ್ತದೆ. ಏನೋ ಒಂದು ಕೇರ್‌ಲೆಸ್‌ ಆಗಿ ಏನೋ ಒಂದು ಸಜೆಸ್ಟ್‌ ಮಾಡೋಣ, ಕೇರ್‌ಲೆಸ್‌ ಆಗಿ ಅವಹೇಳನ ಮಾಡುವುದಾಗಲಿ, ಏನೋ ನಾವು ಮಾತನಾಡಬೇಕು ಟೈಮ್‌ ಇದೆ ಎಂದು ಬಾಯಿಗೆ ಬಂದಂತೆ ಕಮೆಂಟ್‌ ಮಾಡೋಣ ಎನ್ನುವವರೂ ಇದ್ದಾರೆ. ಅಂತಹವರನ್ನ ಬಿಡಿ, ಅವರನ್ನು ಏನೂ ಮಾಡೋಕೆ ಆಗಲ್ಲ. "ಊರು ಎಂದಮೇಲೆ ಹೊಲೆಗೇರಿ ಇರುತ್ತೆ" ಆ ತರಹ ಇಂಥವರೂ ಇರುತ್ತಾರೆ ಜಗತ್ತಲ್ಲಿ ಏನೂ ಮಾಡೋಕಾಗಲ್ಲ. ಅವರನ್ನೆಲ್ಲಾ ಬಿಟ್ಟಾಕೋಣ ಅದನ್ನು ಓದೋದು ಬೇಡ ನಾವು. ಸ್ವಲ್ಪ ನಾವು ಹೇಳ್ತಿರೋದು ಇಂಥ ಒಂದು ಪ್ಯೂರ್‌ ಜನರನ್ನ ಪ್ರೀತಿಸೋವಂಥದ್ದು, ಜನರನ್ನು ಪ್ರೀತಿಸುವುದೇ ಜನಾರ್ಧನನ ಪೂಜೆ ಎನ್ನುತ್ತಾರೆ. ಜನರನ್ನು ಪ್ರೀತಿಸುವುದೇ ದೇಶಪ್ರೇಮ ಎನ್ನುತ್ತಾರೆ' ಎಂದು ಮಾತನಾಡಿದ್ದರು.

click me!