
ಬೆಂಗಳೂರು : ಚಿತ್ರೀಕರಣದ ವೇಳೆ ಆಯ ತಪ್ಪಿ ಬಿದ್ದು ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಪೆಟ್ಟಾಗಿದೆ. ಅವರದೇ ನಿರ್ಮಾಣದ ‘ಭೈರಾದೇವಿ’ ಚಿತ್ರದ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಶಾಂತಿನಗರದ ಹಿಂದೂ ರುದ್ರಭೂಮಿಯಲ್ಲಿ ಫೆ.4ರಂದು ಮಧ್ಯರಾತ್ರಿ ಚಿತ್ರೀಕರಣ ನಡೆಯುತ್ತಿದ್ದಾಗ ಸಮಾಧಿಯ ಮೇಲಿನಿಂದ ಆಯತಪ್ಪಿ ಬಿದ್ದು ರಾಧಿಕಾ ಕುಮಾರಸ್ವಾಮಿ ಅವರ ಬೆನ್ನುಮೂಳೆಗೆ ಪೆಟ್ಟಾಗಿದೆ. ಚಿಕಿತ್ಸೆ ಪಡೆದ ನಂತರ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಘಟನೆಯಿಂದಾಗಿ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
‘ಅಮಾವಾಸ್ಯೆ ದಿನ ಮಧ್ಯರಾತ್ರಿ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ರಾಧಿಕಾ ಅವರು ತ್ರಿಶೂಲ ಹಿಡಿದು ಸಮಾಧಿ ಮೇಲಿಂದ ಕೆಳಗಿಳಿದು ಬರಬೇಕಿತ್ತು. ಆ ಸನ್ನಿವೇಶದಲ್ಲಿ ಅವರ ಗಮನ ಕ್ಯಾಮೆರಾದತ್ತ ಇತ್ತು. ಟೇಕ್ ಓಕೆ ಆದ ತಕ್ಷಣ ಅವರು ಕೆಳಗಿಯುವ ಸಂದರ್ಭದಲ್ಲಿ ಆಯತಪ್ಪಿ ಬಿದ್ದರು. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಚಿಕಿತ್ಸೆ ನೀಡಿದ ವೈದ್ಯರು ಒಂದಷ್ಟುದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ’ ಎಂದು ಚಿತ್ರದ ನಿರ್ದೇಶಕ ಶ್ರೀಜಯ್ ತಿಳಿಸಿದ್ದಾರೆ.
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.