
ಭದ್ರಾವತಿ[ಡಿ.20]: ನಿರ್ದೇಶಕ, ನಿರ್ಮಾಪಕ ಎಸ್. ನಾರಾಯಣ್ ಅವರ ಮಾತೃಶ್ರೀ ಕಮಲಮ್ಮ(84) ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನ ಹೊಂದಿದರು.
ಮೃತರಿಗೆ ಪುತ್ರರಾದ ಎಸ್.ನಾರಾಯಣ್, ನಿರ್ಮಾಪಕ ಎಸ್.ಗೋವಿಂದ್ ಇದ್ದಾರೆ. 25 ದಿನಗಳಿಂದ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕಮಲಮ್ಮ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಂಧಿ ನಗರದಲ್ಲಿರುವ ನಿವಾಸದಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು.
ಬುಧವಾರ ಸಂಜೆ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.