
ಬೆಂಗಳೂರು (ನ.02) ಅಕ್ಟೋಬರ್ 25 ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ ದೂರು ನೀಡಿದ್ದ ಶ್ರುತಿ ಮೂರು ದಿನಗಳ ನಂತರ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುತ್ತೇನೆ ಎಂದು ಹೇಳಿದ್ದರು. ಸಾಕ್ಷಿಗಳಾಗಿ ವಿಸ್ಮಯ ಚಿತ್ರದ ನಿರ್ಮಾಪಕ ಉಮೇಶ್, ನಿರ್ದೇಶಕ ಅರುಣ್ ವೈದ್ಯನಾಥನ್, ಸಹನಿರ್ದೇಶಕಿ ಮೋನಿಕಾ, ಮೇಕಪ್ ಮ್ಯಾನ್ ಕಿರಣ್ ಹಾಗೂ ತನ್ನ ಗೆಳತಿ ಯಶಸ್ವಿನಿ ಅವರನ್ನು ಸೇರಿಸಿದ್ದರು.
ಮೊದಲು ಸಾಕ್ಷಿಗಳ ಹೇಳಿಕೆ ಪಡೆದ ಪೊಲೀಶರು ಶ್ರುತಿ ಹರಿಹರನ್ಗೆ ಬಂದು ಹೇಳಿಕೆ ನೀಡಲು ತಿಳಿಸಿದ್ದಾರೆ. ಆದರೆ ಶ್ರುತಿ ಚೆನ್ನೈನಲ್ಲಿ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಎರಡನೇ ಬಾರಿ ಶ್ರುತಿ ಹರಿಹರನ್ಗೆ ನೋಟಿಸ್ ನೀಡಲು ಪೊಲೀಸರು ಚಿಂತನೆ ನಡೆಸಿದ್ದಾರೆ.
ಸ್ಯಾಂಡಲ್ ವುಡ್ ಮೀಟೂ ಘಾಟು...ಆರಂಭದಿಂದ!
ಅರ್ಜುನ್ ಸರ್ಜಾ ಮೇಲೆ ಶ್ರುತಿ ಆರೋಪ ಮಾಡಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ರೆಬಲ್ ಸ್ಟಾರ್ ಅಂಬರೀಶ್ ಸಹ ಇಬ್ಬರ ನಡುವೆ ಸಂಧಾನ ಮಾಡಿಸಲು ಮುಂದಾಗಿದ್ದರು. ಆದರೆ ಎಲ್ಲ ಪ್ರಯತ್ನಗಳು ವಿಫಲವಾಘಿದ್ದವು. ಒಂದು ಕಡೆ ಶ್ರುತಿ ದೌರ್ಜನ್ಯದ ದೂರು ದಾಖಲಿಸಿದ್ದರೆ ಇನ್ನೊಂದು ಕಡೆ ಸರ್ಜಾ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.