
ಮದರ್ ಪ್ರಾಮೀಸ್ ಲೆಕ್ಕಕ್ಕೆ ಸಿಗದ ಅಸಾಮಿ ಎನ್ನುವ ಅರ್ಥವನ್ನು ಒಳಗೊಂಡ ಈ ಸಿನಿಮಾ ತುಂಬಾ ರಾಜಕೀಯ ತುಂಬಿದೆ. ಅದು ಪ್ರಥಮ್‌ನ ನಿಜ ಜೀವನಕ್ಕೂ ಹತ್ತಿರ ಇರುವ ಕತೆ ಇಲ್ಲಿದೆಯಂತೆ. ತ್ರಿವೇಣಿ 24ಕ್ರಾಫ್ ಲಾಂಛನದಲ್ಲಿ ವೆಂಕಟೇಶ್ ರೆಡ್ಡಿ ಅವರು ನಿರ್ಮಿಸಿರುವ ಚಿತ್ರ.
ಮಂಜು ಮೌರ್ಯ ಕತೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ. ಸ್ಪರ್ಶ ರೇಖಾ, ಕುರಿ ಪ್ರತಾಪ್, ರಾಜಶೇಖರ್, ನವೀನ್, ಚಂದ್ರಕಲಾ ಮೋಹನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮಾಜಿ ಸಚಿವ ಎಚ್. ಎಂ.ರೇವಣ್ಣ ಶೇಷಪಾತ್ರದಲ್ಲಿ ಅಭಿನಯಿಸಿದ್ದಾರೆ. ವಿಕ್ರಂ ಸುಬ್ರಮಣ್ಯ ಸಂಗೀತ ನಿರ್ದೇಶನ ಇರುವ ಈ ಚಿತ್ರಕ್ಕೆ ಕೃಷ್ಣಸಾರಥಿ ಅವರ ಛಾಯಾಗ್ರಹಣವಿದೆ. ಕೆ.ಆರ್.ಲಿಂಗರಾಜು ಸಂಕಲನ, ಕಲೈ ನೃತ್ಯ ನಿರ್ದೇಶನ ಹಾಗೂ ದೇವಿಪ್ರಕಾಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.