ಪ್ರಖ್ಯಾತ ನಟ ಶರತ್‌ ಬಾಬು ಆರೋಗ್ಯ ಸ್ಥಿತಿ ಗಂಭೀರ, ಚೆನ್ನೈನ ಆಸ್ಪತ್ರೆಗೆ ದಾಖಲು!

Published : Mar 29, 2023, 08:22 PM ISTUpdated : Mar 29, 2023, 08:27 PM IST
ಪ್ರಖ್ಯಾತ ನಟ ಶರತ್‌ ಬಾಬು ಆರೋಗ್ಯ ಸ್ಥಿತಿ ಗಂಭೀರ, ಚೆನ್ನೈನ ಆಸ್ಪತ್ರೆಗೆ ದಾಖಲು!

ಸಾರಾಂಶ

ಕನ್ನಡದಲ್ಲಿ ಅಮೃತವರ್ಷಿಣಿ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಶರತ್‌ ಬಾಬು ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. 71 ವರ್ಷ ವಯಸ್ಸಿನ ಇವರು ಇತ್ತೀಚಿಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು.

ಚೆನ್ನೈ (ಮಾ.29): ಕನ್ನಡದ ಹಲವು ಪ್ರಖ್ಯಾತ ಚಿತ್ರಗಳಲ್ಲಿ ನಟಿಸಿದ್ದ, ರಮೇಶ್‌, ಸುಹಾನಿಸಿ ನಟಿಸಿದ್ದ ಅಮೃತವರ್ಷಿಣಿ ಚಿತ್ರದಲ್ಲಿ 'ಹೇಮಂತ್‌' ಮಾತ್ರದಲ್ಲಿ ಅಭಿನಯಿಸಿದ್ದ ಬಹುಭಾಷಾ ನಟ ಶರತ್‌ ಬಾಬು ಆರೋಗ್ಯಸ್ಥಿತಿ ಗಂಭೀರವಾಗಿದೆ. 71 ವರ್ಷ ವಯಸ್ಸಿನ ಶರತ್‌ ಬಾಬು ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರ ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾದ ಹಿನ್ನಲೆಯಲ್ಲಿ ಬುಧವಾರ ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕನ್ನಡ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಭಾಷೆಯ ಚಿತ್ರಗಳಲ್ಲೂ ನಟಿಸಿದ್ದ ಶರತ್‌ ಬಾಬು ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಯಾವ ಕಾಯಿಲೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹೊರಬಂದಿಲ್ಲ. ಶರತ್‌ ಬಾಬು ಅವರನ್ನು ನೋಡಲು ಚಿತ್ರರಂಗದ ಗಣ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಅಭಿಮಾನಿಗಳು ಕೂಡ ಶರತ್‌ ಬಾಬು ಆರೋಗ್ಯದಲ್ಲಿ ಶೀಘ್ರದಲ್ಲಿ ಚೇತರಿಕೆ ಕಾಣಲಿ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. 1973ರಲ್ಲಿ ನಟನಾ ಕ್ಷೇತ್ರಕ್ಕೆ ಕಾಲಿಟ್ಟಿದ್ದ ಶರತ್‌ ಬಾಬು, ರಾಮರಾಜ್ಯಂ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಮುಳ್ಳ ಬಂಧಂ, ಸೀತಕೋಕ ಚಿಲುಕ, ಸಂಸಾರ ಒಂದು ಚದರಂಗಂ, ಅಣ್ಣಯ್ಯ, ಆಪದ್ಭಾಂದವುಡು ಮುಂತಾದ ಅದ್ಭುತ ಚಿತ್ರಗಳಲ್ಲಿ ಶರತ್ ಬಾಬು ನಟಿಸಿದ್ದಾರೆ. ನೆಗೆಟಿವ್ ರೋಲ್‌ಗಳಲ್ಲೂ ಅವರು ಮಿಂಚಿದ್ದರು.

 

'ದೇಶದ್ರೋಹಿ ವಿರಾಟ್‌ ಕೊಹ್ಲಿ..' ಟ್ರೆಂಡ್‌ ಮಾಡಿದ ಶಾರುಖ್‌ ಖಾನ್‌ ಫ್ಯಾನ್ಸ್‌, ಕಾರಣವೇನು?

ಶರತ್‌ ಬಾಬು ಅವರ ಆರೋಗ್ಯ ಹದಗೆಟ್ಟಿರುವ ಕುರಿತಾಗಿ ತೆಲುಗು ನಟಿ ಕಲ್ಯಾಣಿ ಪಾದಲಾ (ಕರಾಟೆ ಕಲ್ಯಾಣಿ) ಬರೆದುಕೊಂಡಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಮಾಹಿತಿ ನೀಡಿದ್ದಾರೆ. ಅದರೊಂದಿಗೆ ನನ್ನ ನೆಚ್ಚಿನ ಹೀರೋ, ಬೇಗ ಗುಣಮುಖರಾಗಲಿ ಎಂದು ಬರೆದುಕೊಂಡಿದ್ದಾರೆ. ಕನ್ನಡದಲ್ಲಿ 1997ರಲ್ಲಿ ಬಿಡುಗಡೆಯಾದ ಅಮೃತವರ್ಷಿಣಿ ಅಲ್ಲದೆ, ರಣಚಂಡಿ, ಕಂಪನ, ಶಕ್ತಿ, ಬೃಂದಾವನ, ಹೃದಯ ಹೃದಯ, ನೀಲಾ, ನಮ್‌ ಯಜಮಾನ್ರು ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಈವರೆಗೂ ಅವರು 200ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

'ಗೊತ್ತಿದ್ದರೆ ತಿಳಿಸಿ ಅಂದೆ..ಅಬ್ಬಬ್ಬಾ ಏನ್‌ ಕಾಮೆಂಟ್ಸ್‌..' ನೆಟ್ಟಿಗರ ತರಾಟೆಗೆ ಉಪೇಂದ್ರ ಪ್ರತಿಕ್ರಿಯೆ!

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Actress Amulya: ಮುದ್ದು ಮಕ್ಕಳು, ಗಂಡನ ಜೊತೆ ಪೋಸ್ ಕೊಟ್ಟ ಗೋಲ್ಡನ್ ಗರ್ಲ್
ಅಸಮಾನ್ಯಳಲ್ಲಿ ಅಸಮಾನ್ಯ ಈ ಪುಟಾಣಿ: Naa Ninna Bidalaare ಹಿತಾ ನಿಬ್ಬೆರಗಾಗುವ ಫೋಟೋಶೂಟ್​!