
ಬೆಂಗಳೂರು(ಜ.30): ಕುಡಿದ ಮತ್ತಿನಲ್ಲಿ ಸೀರಿಯಲ್ ಌಕ್ಟರ್ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
‘ಸರ್ಪ ಸಂಬಂಧ’ ಧಾರಾವಾಹಿಯ ಪ್ರಮುಖ ಪಾತ್ರಧಾರಿ ಮೇಲೆ ಬಿಲ್ಡರ್ ಪುತ್ರ ದರ್ಪ ತೋರಿದ್ದಾನೆ. ಖ್ಯಾತ ಬಿಲ್ಡರ್ ಶ್ರೀನಿವಾಸ್ ಮಗ ದರ್ಶನ್, ಕುಡಿದ ಅಮಲಿನಲ್ಲಿ ಸ್ಕೈಬಾರ್'ನಲ್ಲಿ ಜಗಳ ತೆಗೆದಿದ್ದಾನೆ. ಗಲಾಟೆ ಆಗುತ್ತಿದ್ದಂತೆ ಸ್ಕೈಬಾರ್ ಸಿಬ್ಬಂದಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು, ಬಿಲ್ಡರ್ ಪುತ್ರ ಹಾಗೂ ಸ್ನೇಹಿತರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.