ಕನ್ನಡದ ಖ್ಯಾತ'ನಟಿ ಮುಖಕ್ಕೆ ನಗ್ನಚಿತ್ರ ಅಳವಡಿಕೆ

Published : May 11, 2017, 11:07 PM ISTUpdated : Apr 11, 2018, 12:51 PM IST
ಕನ್ನಡದ ಖ್ಯಾತ'ನಟಿ ಮುಖಕ್ಕೆ ನಗ್ನಚಿತ್ರ ಅಳವಡಿಕೆ

ಸಾರಾಂಶ

ದುಷ್ಕರ್ಮಿಗಳು ಇದನ್ನೇ ಬಂಡವಾಳ ಮಾಡಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಈ ರೀತಿಯ ಕುಕೃತ್ಯ ವಹಿಸುವುದರ ವಿರುದ್ಧ  ಕಠಿಣ ಶಿಕ್ಷೆ ವಿಧಿಸಬೇಕೆಂದು ಶೃತಿ ಹರಿಹರನ್ ತಿಳಿಸಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದಾರೆ

ಬೆಂಗಳೂರು(ಮೇ.12): ನನ್ನ ಮುಖಕ್ಕೆ ನಗ್ನಚಿತ್ರ ದೇಹದ ಭಾವಚಿತ್ರ ಅಂಟಿಸಿ  ಇಂಟರ್'ನೆಟ್'ನಲ್ಲಿ ಹಾಕಿ ಅಪಮಾನ ಮಾಡಿದ್ದಾರೆ ಎಂದು  ಕನ್ನಡದ ಖ್ಯಾತ ನಟಿ ಶೃತಿ ಹರಿಹರನ್ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇಂತಹ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಮಹಿಳೆಯರ ಮಾನ ಕಾಪಾಡಬೇಕೆಂದು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕನ್ನಡವೂ ಸೇರಿದಂತೆ ವಿವಿಧ ಭಾಷೆಯ ನಟಿಯರ ಮುಖವನ್ನು ನಗ್ನ ದೇಹಕ್ಕೆ ಅಂಟಿಸಿ ಇಂಟರ್'ನೆಟ್'ನಲ್ಲಿ ಹಾಕುವ ಪ್ರವೃತ್ತಿ ಹೆಚ್ಚಾಗಿದೆ. ಕೆಲವರು ವಿವಾದವಾಗುವ ಕಾರಣದಿಂದ ವಿಷಯವನ್ನು ಹೆಚ್ಚು ಮಾಡಲು ಹೋಗುವುದಿಲ್ಲ. ದುಷ್ಕರ್ಮಿಗಳು ಇದನ್ನೇ ಬಂಡವಾಳ ಮಾಡಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಈ ರೀತಿಯ ಕುಕೃತ್ಯ ವಹಿಸುವುದರ ವಿರುದ್ಧ  ಕಠಿಣ ಶಿಕ್ಷೆ ವಿಧಿಸಬೇಕೆಂದು ಶೃತಿ ಹರಿಹರನ್ ತಿಳಿಸಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Bigg Boss ಬಗ್ಗೆ ನಂಬಲಸಾಧ್ಯ, ಯಾರೂ ಹೇಳದ ಗುಟ್ಟುಗಳನ್ನು ರಿವೀಲ್​ ಮಾಡಿದ ಅಭಿಷೇಕ್​ ಶ್ರೀಕಾಂತ್​
ಶಿರಸಿ ಸಾಯಿಬಾಬಾಗೆ ಬಲು ದುಬಾರಿಯ ಚಿನ್ನದ ಕಿರೀಟ ಅರ್ಪಿಸಿದ ನಟಿ ಮಾಲಾಶ್ರೀ: ಕಾರಣವೂ ರಿವೀಲ್​!