ಗಾಯಕ ವಿಜಯ್ ಪ್ರಕಾಶ್ ಗೆ ಪಿತೃ ವಿಯೋಗ

By Web DeskFirst Published Apr 7, 2019, 11:45 AM IST
Highlights

ಖ್ಯಾತ ಗಾಯಕ ವಿಜಯ್ ಪ್ರಕಾಶ್ ತಂದೆ ವಿದ್ವಾನ್ ಎಲ್.ರಾಮಶೇಷ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.

 

ಎಲ್. ರಾಮಶೇಷ ಅವರಿಗೆ 72 ವರ್ಷ ವಯಸ್ಸಾಗಿತ್ತು. ಕಳೆದ ಒಂದು ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

 

ವಿಜಯ್ ಪ್ರಕಾಶ್ ಅಮೆರಿಕಾಗೆ ಕಾರ್ಯಕ್ರಮಕ್ಕೆ ತೆರಳಿದ ಹಿನ್ನೆಲೆಯಲ್ಲಿ ಅಂತಿಮ‌ ಸಂಸ್ಕಾರ ಮಂಗಳವಾರ ನಡೆಯಲಿದೆ.

click me!