
ಹೈದರಾಬಾದ್: ಖ್ಯಾತ ತೆಲುಗು ನಟಿ ತಮನ್ನಾ ಭಾಟಿಯಾ ಮೇಲೆ ವ್ಯಕ್ತಿಯೊಬ್ಬ ಚಪ್ಪಲಿ ಎಸೆಯಲು ಯತ್ನಿಸಿದ ಘಟನೆ ಇಲ್ಲಿ ನಡೆದಿದೆ. ಇಲ್ಲಿನ ಹಿಮ್ಮತ್‌ನಗರದ ಚಿನ್ನಾಭರಣ ಮಳಿಗೆ ಉದ್ಘಾಟನೆಗೆ ಆಗಮಿಸಿದ್ದ ತಮನ್ನಾಗೆ ಬಿಟೆಕ್ ಪದವೀಧರ, ಮುಶೀರಾಬಾದ್ ನಿವಾಸಿ ಕರಿಮುಲ್ಲಾ ಎಂಬಾತ ಚಪ್ಪಲಿ ಎಸೆದಿದ್ದಾನೆ.
ಮಳಿಗೆಯಿಂದ ಹೊರಬರುವ ವೇಳೆ ತಮನ್ನಾಗೆ ಗುರಿಯಿಟ್ಟು ಕರಿಮುಲ್ಲಾ ಚಪ್ಪಲಿ ಎಸೆದಿದ್ದ. ಆದರೆ ಅದು ಗುರಿ ತಪ್ಪಿ ಮಳಿಗೆಯ ಸಿಬ್ಬಂದಿ ಮೇಲೆ ಬಿದ್ದಿದೆ. ತಕ್ಷಣವೇ ಆತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ತಮನ್ನಾರ ಇತ್ತೀಚಿನ ಚಿತ್ರಗಳ ನಟನೆಯ ಬಗ್ಗೆ ಕರಿಮುಲ್ಲಾ ಆಕ್ಷೇಪ ಹೊಂದಿದ್ದ ಎನ್ನಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.