
ಬೆಂಗಳೂರು (ಆ. 03): ಮಾದಕ ಚೆಲುವೆ ಸನ್ನಿ ಲಿಯೋನ್ ಮಲಯಾಳಂ ಇಂಡಸ್ಟ್ರಿಗೆ ಕಾಲಿಡಲಿದ್ದಾರೆ. ನಿರ್ಮಾಪಕ ಒಮರ್ ಲಾಲುರವರ ಮುಂಬರುವ ಕಾಮಿಡಿ ಚಿತ್ರದಲ್ಲಿ ಸನ್ನಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಸನ್ನಿ, ಜಯರಾಮ್, ಧರ್ಮರಾಜನ್ ಬಾಲಗಟ್ಟಿ ಹಾಗೂ ಹನಿರೋಸ್ ಮತ್ತು ವಿನಯ್ ಫೋರ್ಟ್ ಜೊತೆ ನಟಿಸಲಿದ್ದಾರೆ. ಇನ್ನು ಹೆಸರಿಡದ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಇದೊಂದು ಸಖತ್ ಮನರಂಜನೆ ಚಿತ್ರ ಎಂದು ಬಲ್ಲ ಮೂಲಗಳು ತಿಳಿಸಿವೆ.
ಸನ್ನಿ ಲಿಯೋನ್ ಇತ್ತೀಚಿಗೆ ಜೀ5 ವೆಬ್ ಸೀರೀಸ್ ಕರಂಜಿತ್ ಕೌರ್; ಅನ್ ಟೋಲ್ಡ್ ಸ್ಟೋರಿ ಆಫ್ ಸನ್ನಿ ಲಿಯೋನ್’ರಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ತಮಿಳಿನ ವೀರ ಮಹಾದೇವಿ ಚಿತ್ರದಲ್ಲೂ ಬ್ಯುಸಿಯಾಗಿದ್ದಾರೆ. ಈ ಚಿತ್ರ ಕನ್ನಡ, ತೆಲುಗು, ಮಲಯಾಳಂ ಹಾಗೂ ಹಿಂದಿ ಚಿತ್ರದಲ್ಲಿ ರಿಲೀಸ್ ಆಗಲಿದೆ. ಈ ಚಿತ್ರಕ್ಕಾಗಿ ಸನ್ನಿ ಕತ್ತಿ ವರಸೆ, ಕುದುರೆ ಸವಾರಿ ಕಲಿಯುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.