
ನವದೆಹಲಿ(ಜೂ.1): ಬಾಲಿವುಡ್ ನಟಿ ಸನ್ನಿಲಿಯೋನ್ ಮತ್ತು ಆಕೆಯ ಪತಿ ಡೇನಿಯಲ್ ವೆಬರ್ ವಿಮಾನ ಅಪಘಾತವೊಂದರಿಂದ ಸ್ಪಲ್ಪದರಲ್ಲೇ ಪಾರಾಗಿದ್ದಾರೆ. ಖಾಸಗಿ ವಿಮಾನವೊಂದರಲ್ಲಿ ಮುಂಬೈಗೆ ತೆರಳುತ್ತಿದ್ದ ವೇಳೆ ಪ್ರತಿಕೂಲ ಹವಾಮಾನದಿಂದಾಗಿ ಸನ್ನಿಲಿಯೋನ್ ಅವರಿದ್ದ ವಿಮಾನ ಪತನಗೊಳ್ಳುವ ಭೀತಿ ಎದುರಾಗಿತ್ತು. ವಿಮಾನದ ಪೈಲಟ್ ಮುಂಜಾಗ್ರತೆ ವಹಿಸಿ ಸಂಭವನೀಯ ಅವಘಡವನ್ನು ತಪ್ಪಿಸಿದ್ದಾರೆ. ಮಹಾರಾಷ್ಟ್ರದ ದುರ್ಗಮ ಪ್ರದೇಶವೊಂದರಲ್ಲಿ ವಿಮಾನ ತುರ್ತು ಭೂ ಸ್ಪರ್ಶ ಮಾಡಿದೆ. ಇಬ್ಬರೂ ಅಪಾಯದಿಂದ ಪಾರಾಗಿದ್ದು ರಸ್ತೆ ಮಾರ್ಗದ ಮೂಲಕ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಘಟನೆಯ ಬಳಿಕ ಟ್ವೀಟ್ ಮಾಡಿ ವಿಡಿಯೋವೊಂದನ್ನು ಪ್ರಕಟಿಸಿರುವ ಸನ್ನಿಲಿಯೋನ್, ದೇವರ ದಯದಿಂದ ನಾವು ಸುರಕ್ಷಿತವಾಗಿದ್ದೇವೆ ಎಂದು ಹೇಳಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.